Advertisement

ಬೆಂಗಳೂರು ಅಂತಾರಾಷ್ಟ್ರೀಯ ಚಿತ್ರೋತ್ಸವಕ್ಕೆ ವಿದೇಶಿ ಚಿತ್ರತಂಡಗಳ ಆಹ್ವಾನಕ್ಕೆ ಸಿಎಂ ಸಲಹೆ  

07:48 PM Sep 30, 2021 | Team Udayavani |

ಬೆಂಗಳೂರು:ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ವಿದೇಶಿ ಚಿತ್ರಗಳ ಪ್ರದರ್ಶನದೊಂದಿಗೆ, ಆ ಚಿತ್ರತಂಡದವರನ್ನೂ ಆಹ್ವಾನಿಸುವ ಮೂಲಕ ಚಿತ್ರೋತ್ಸವವನ್ನು ಅಂತಾರಾಷ್ಟ್ರೀಯ ಮಟ್ಟದಲ್ಲಿ ಜನಪ್ರಿಯಗೊಳಿಸುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸಲಹೆ ನೀಡಿದರು.

Advertisement

ಅವರು ಇಂದು ಕರ್ನಾಟಕ ಚಲನಚಿತ್ರ ಅಕಾಡೆಮಿಯ ಅಧ್ಯಕ್ಷರು ಹಾಗೂ ಅಧಿಕಾರಿಗಳೊಂದಿಗೆ ಅಕಾಡೆಮಿಗೆ ಸಂಬಂಧಿಸಿದ ವಿವಿಧ ವಿಷಯಗಳ ಕುರಿತು ಚರ್ಚಿಸಿದರು. ಕನ್ನಡ ಚಿತ್ರರಂಗ ಬೆಳೆದು ಬಂದ ಬಗ್ಗೆ ಒಂದು ಕಿರುಚಿತ್ರ ನಿರ್ಮಿಸಿ, ಚಿತ್ರೋತ್ಸವದಲ್ಲಿ ಪ್ರದರ್ಶಿಸಿ, ನಮ್ಮ ಚಿತ್ರರಂಗದ ಸಾಧನೆಯನ್ನು ಜಗತ್ತಿನ ಮುಂದಿಡಬೇಕು ಎಂದು ಅವರು ತಿಳಿಸಿದರು.

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಮಾನ್ಯತೆ ದೊರಕಿಸುವ ನಿಟ್ಟಿನಲ್ಲಿ ಇದರಿಂದ ಅನುಕೂಲವಾಗಲಿದೆ ಎಂದು ಮುಖ್ಯಮಂತ್ರಿಗಳು ತಿಳಿಸಿದರು.

ಸಭೆಯಲ್ಲಿ ಅಕಾಡೆಮಿ ಅಧ್ಯಕ್ಷ ಸುನಿಲ್ ಪುರಾಣಿಕ್, ಮುಖ್ಯಮಂತ್ರಿಯವರ ಪ್ರಧಾನ ಕಾರ್ಯದರ್ಶಿ ಎನ್. ಮಂಜುನಾಥ ಪ್ರಸಾದ್, ವಾರ್ತಾ ಇಲಾಖೆ ಆಯುಕ್ತ ಜಿ. ಜಗದೀಶ್ ಮತ್ತಿತರರು ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next