Advertisement

ಬೆಂಗಳೂರು ಭಾರತದ ಬಯೋಟೆಕ್ ರಾಜಧಾನಿ: ಕೇಂದ್ರ ಸಚಿವ ಪಿಯೂಷ್ ಗೋಯಲ್

02:53 PM Sep 19, 2021 | Team Udayavani |

ಬೆಂಗಳೂರು: ಕರ್ನಾಟಕ ದೇಶದಲ್ಲಿಯೇ ಅತ್ಯಂತ ಕ್ರಿಯಾಶೀಲ ರಾಜ್ಯವಾಗಿದ್ದು, ಹಲವು ಹೊಸತನಗಳ ಮತ್ತು ನವೋದ್ಯಮಗಳ ಉಗಮ ಸ್ಥಾನವಾಗಿದ್ದು, ಭಾರತದ ಬಯೋಟೆಕ್ನಾಲಜಿಯ ರಾಜಧಾನಿ ಬೆಂಗಳೂರಾಗಿದೆ ಎಂದು ಕೇಂದ್ರ ಸಚಿವ ಪಿಯೂಷ್ ಗೋಯಲ್ ಹರ್ಷ ವ್ಯಕ್ತಪಡಿಸಿದರು.

Advertisement

ಇಂದು ನಗರದ ಎಲೆಕ್ಟ್ರಾನಿಕ್ ಸಿಟಿಯಲ್ಲಿರುವ ಕರ್ನಾಟಕ ನಾವೀನ್ಯತೆ ಕೇಂದ್ರದಲ್ಲಿನ ಅಂತರರಾಷ್ಟ್ರೀಯ ಮಾಹಿತಿ ತಂತ್ರಜ್ಞಾನ ಸಂಸ್ಥೆ (IIIT-B)ಆವರಣದಲ್ಲಿ ಮಾಹಿತಿ ತಂತ್ರಜ್ಞಾನ, ಜೈವಿಕ ತಂತ್ರಜ್ಞಾನ, ಎಲೆಕ್ಟ್ರಾನಿಕ್ ಉದ್ಯಮ ಹಾಗೂ ನವೋದ್ಯಮ ಪ್ರತಿನಿಧಿಗಳೊಂದಿಗೆ ಹಮ್ಮಿಕೊಳ್ಳಲಾಗಿದ್ದ ಸಂವಾದದಲ್ಲಿ ಭಾಗವಹಿಸಿ ಮಾತನಾಡಿದರು.

ಜಾಗತಿಕ ಮಹಾಮಾರಿ ಕೋವಿಡ್ ನಿಯಂತ್ರಣಕ್ಕಾಗಿ ಭಾರತ್ ಬಯೋಟೆಕ್ನಾಲಜಿಯಂತಹ ಸಂಸ್ಥೆಯ ಕೊಡುಗೆ ಅಪಾರ, ದೇಶದ ಆರ್ಥಿಕ ಅಭಿವೃದ್ಧಿಗಾಗಿ ಬೆಂಗಳೂರು ನವೋದ್ಯಮದ ಮೂಲಕ ತನ್ನದೇ ಕೊಡುಗೆ ನೀಡುತ್ತಿದೆ ಎಂದು ಹೇಳಿದರು.

ಸರ್ಕಾರದ ಮಟ್ಟದಲ್ಲಿ ದೇಶದ ಅಭಿವೃದ್ಧಿಗಾಗಿ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಇಂತಹ ಸಂವಾದಗಳು ಸಹಾಯವಾಗುತ್ತವೆ, ಇಲ್ಲಿನ ಸಂವಾದ ಸಾರಂಶದ ಅಂಶಗಳನ್ನು ಗಂಭೀರವಾಗಿ ಪರಿಗಣಿಸಲಾಗುವುದು. ಖಾಸಗಿ ಸಂಸ್ಥೆಗಳ ಮುಖ್ಯಸ್ಥರು ನವದೆಹಲಿಗೆ ಬೇಟಿ ನೀಡಿ ತಮ್ಮ ಅಭಿಪ್ರಾಯಗಳನ್ನು ನೇರವಾಗಿ ಹಂಚಿಕೊಳ್ಳಲು ಅವಕಾಶವಿದೆ. ಕೋವಿಡ್ ಸಮಯದಲ್ಲಾದ ಆರ್ಥಿಕ ತಲ್ಲಣಗಳನ್ನು ಕೇಂದ್ರ ಸರ್ಕಾರ ಗಂಭೀರವಾಗಿ ತೆಗೆದುಕೊಂಡಿದ್ದು, ಉದ್ಯಮಗಳ ಉಳಿವಿಗಾಗಿ ಹಾಗೂ ಬೆಳವಣಿಗೆಗಾಗಿ ಹಲವು ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ನವೋದ್ಯಮಿಗಳ ಪ್ರೋತ್ಸಾಹಕ್ಕೆ ಸರ್ಕಾರ ಬದ್ಧವಾಗಿದೆ ಎಂದು ಹೇಳಿದರು.

ಸಂವಾದದದಲ್ಲಿ ಮಾಹಿತ-ತಂತ್ರಜ್ಞಾನದ ರಾಜ್ಯ ಸರ್ಕಾರದ ಕಾರ್ಯದರ್ಶಿಗಳಾದ ರಮಣ ರೆಡ್ಡಿ ಅವರು ಪ್ರಾಸ್ತಾವಿಕವಾಗಿ ಮಾತನಾಡಿ ಭಾರತದ ಆರ್ಥಿಕ ಅಭಿವೃದ್ಧಿಯಲ್ಲಿ ರಾಜ್ಯದ ಕೊಡುಗೆ ಹಾಗೂ ಸ್ಥಾನಮಾನದ ಕುರಿತು ಮಾತನಾಡಿ ಸಚಿವರಿಗೆ ಸ್ವಾಗತ ಕೋರಿದರು.

Advertisement

ಈ ಸಂದರ್ಭದಲ್ಲಿ ಹಿರಿಯ ಅಧಿಕಾರಿಗಳಾದ ಮೀನಾ ನಾಗರಾಜ್, ಇನ್ ಫೋಸಿಸ್ ಸಂಸ್ಥೆಯ ಸ್ಥಾಪಕ ಸದಸ್ಯರಾದ ಕ್ರಿಸ್ ಗೋಪಾಲ್ ಸೇರಿದಂತೆ ಹಲವಾರು ಖಾಸಗಿ ಸಂಸ್ಥೆಗಳ ಮುಖ್ಯಸ್ಥರು ಭಾಗವಹಿಸಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next