Advertisement

Bangalore Kambala: ಬೆಂಗಳೂರು ಕಂಬಳಕ್ಕೆ ಲಕ್ಷ ಜನ ಆಗಮನ ನಿರೀಕ್ಷೆ

10:47 AM Nov 05, 2023 | Team Udayavani |

ಬೆಂಗಳೂರು: ಪ್ರಥಮ ಬಾರಿಗೆ ರಾಜಧಾನಿ ಬೆಂಗಳೂರಿನಲ್ಲಿ ನಡೆಯಲಿರುವ “ಬೆಂಗಳೂರು ಕಂಬಳ’ಕ್ಕೆ ಕನಿಷ್ಠ 3 ರಿಂದ 5 ಲಕ್ಷ ಜನರ ನಿರೀಕ್ಷೆಯಿದ್ದು, ಅದಕ್ಕೆ ತಕ್ಕಂತೆ ತಯಾರಿ ಮಾಡಿ ಕೊಳ್ಳಲಾಗುತ್ತಿದೆ ಎಂದು ಬೆಂಗಳೂರು ಕಂಬಳ ಸಮಿತಿಗೌರವಾಧ್ಯಕ್ಷ ಕೆ.ಪ್ರಕಾಶ್‌ ಶೆಟ್ಟಿ ಹೇಳಿದರು.

Advertisement

ಶನಿವಾರ ವಿಜಯನಗರದಬಂಟರ ಭವನದಲ್ಲಿ ಹಮ್ಮಿಕೊಂಡ ಕಂಬಳ ಪೂರ್ವಭಾವಿ ಸಭೆಯಲ್ಲಿಮಾತನಾಡಿದರು. ಇದು ಐತಿಹಾಸಿಕ ಕಾರ್ಯಕ್ರಮ ವಾಗಿದ್ದು, ಕರಾವಳಿಯ ಸಮಸ್ತ ಸಮುದಾಯ ದವರು ಒಂದೆಡೆ ಒಗ್ಗಟ್ಟಾಗಿ ಸೇರುವ ಬೃಹತ್‌ ವೇದಿಕೆ ಇದಾಗಲಿದೆ ಎಂದರು. ಇಂದಿನ ಸಮಾ ಲೋಚನಾ ಸಭೆಯಲ್ಲಿ ಕರಾವಳಿಯ ವಿವಿಧ ಭಾಷೆ-  ಜಾತಿಗಳ 50ಕ್ಕೂ ಅಧಿಕ ಸಂಘಟನೆಗಳು ಭಾಗಿಯಾಗಿದ್ದು ಅವರೊಂದಿಗೆ ಕಾರ್ಯಕ್ರಮದ ರೂಪುರೇಷೆ ಬಗ್ಗೆ ಮಾತುಕತೆ ನಡೆಸಲಾಗಿದೆ ಎಂದು ವಿವರಿಸಿದರು.

ಕಂಬಳ ಸಮಿತಿ ಅಧ್ಯಕ್ಷ, ಶಾಸಕ ಅಶೋಕ್‌ ಕುಮಾರ್‌ ರೈ ಮಾತನಾಡಿ, ಬೆಂಗಳೂರು ಕಂಬಳಕ್ಕೆ ಈಗಾಗಲೇ 150ಕ್ಕೂ ಅಧಿಕ ಕೋಣಗಳ ನೋಂದಣಿ ಆಗಿದೆ. ಕೋಣಗಳನ್ನು ನ.23ರಂದು ಉಪ್ಪಿನಂಗಡಿಯಲ್ಲಿ ಬೀಳ್ಕೊಡುಗೆ ಮಾಡಿ ಕಳಿಸಿಕೊಡಲಾಗುವುದು. ಅಷ್ಟೂ ಕೋಣಗಳನ್ನು ಹಾಸನ ಹಾಗೂ ನೆಲಮಂಗಲದಲ್ಲಿ ಅದ್ಧೂರಿಯಾಗಿ ಸ್ವಾಗತಿಸಿಕೊಳ್ಳ ಲಾಗುವುದು. ಅಲ್ಲದೆ ಪ್ರತಿ ತಾಲೂಕಲ್ಲೂ ಸ್ವಾಗತ- ಬೀಳ್ಕೊಡುಗೆ ಇರಲಿದೆ ಎಂದರು.

ಥೀಮ್‌ಸಾಂಗ್‌ ಬಿಡುಗಡೆ: ಬೆಂಗಳೂರು ಕಂಬಳ ನಮ್ಮ ಕಂಬಳ’ ಎಂಬ ಥೀಮ್‌ ಸಾಂಗ್‌ ಇದೇ ಸಂದರ್ಭದಲ್ಲಿ ಬಿಡುಗಡೆ ಮಾಡಲಾಯಿತು. ಈಥೀಮ್‌ ಸಾಂಗ್‌ ವಿ.ಮನೋಹರ್‌ ಸಾಹಿತ್ಯ, ಗುರುಕಿರಣ್‌ ಸಂಗೀತ ಸಂಯೋಜನೆ, ಮಣಿಕಾಂತ್‌ ಕದ್ರಿ ಪ್ರೋಗ್ರಾಮಿಂಗ್‌ನಲ್ಲಿ ಮೂಡಿ ಬಂದಿದೆ.

ಕೋಟಿ ರೂ. ಘೋಷಿಸಿದ ಸಿಎಂ: ಬೆಂಗಳೂರು ಕಂಬಳಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 1 ಕೋಟಿ ರೂ. ಅನುದಾನ ಘೋಷಿಸಿದ್ದಾರೆ. ಬೆಂಗಳೂರು ಕಂಬಳಕ್ಕೆ ಬಾಲಿವುಡ್‌ ನಟಿ ಐಶ್ವ ರ್ಯಾ ರೈ, ಕರಾವಳಿ ಬೆಡಗಿ ಅನುಷ್ಕಾ ಶೆಟ್ಟಿ ಸೇರಿ ವಿವಿಧ ಚಿತ್ರರಂಗಗಳಲ್ಲಿ ಇರುವ ಕರಾವಳಿ ಮೂಲದ ಸಿನಿಮಾತಾರೆಯರು ಆಗಮಿಸಲಿದ್ದಾರೆ.

Advertisement

ಸಮಿತಿ ಕಾರ್ಯಾಧ್ಯಕ್ಷ, ಸಂಗೀತ ನಿರ್ದೇಶಕ ಗುರುಕಿರಣ್‌,ಉಪಾಧ್ಯಕ್ಷ ಗುಣರಂಜನ್‌ ಶೆಟ್ಟಿ ,ಸಮಿತಿ ಸಂಘಟನಾ ಅಧ್ಯಕ್ಷ ಉಮೇಶ್‌ ಆಭರಣ ಜ್ಯುವೆಲ್ಲರ್ಸ್‌ನ ವ್ಯವಸ್ಥಾಪಕ ನಿರ್ದೇಶಕ ಪ್ರಕಾಶ್‌ಕಾಮತ್‌ ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next