ವಾಸ್ಕೋ ಹೊಸ ರೈಲು ಸಂಚಾರಕ್ಕೆ ಮಾ. 7ರಂದು ಬೆಂಗಳೂರಿನಲ್ಲಿ ಚಾಲನೆ ಸಿಗಲಿದೆ. ಟಿಕೆಟ್ ಬುಕ್ಕಿಂಗ್ ಪ್ರಕ್ರಿಯೆ ಶುಕ್ರವಾರದಿಂದ ಆರಂಭಗೊಳ್ಳುವ ಸಾಧ್ಯತೆಯಿದೆ.
Advertisement
ಮಾ. 7ರಂದು ಬೆಳಗ್ಗೆ 9 ಗಂಟೆಗೆ ಬೆಂಗಳೂರಿನ ಯಶವಂತಪುರದಲ್ಲಿ ಹೊಸ ರೈಲು ಸಂಚಾರಕ್ಕೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಕೇಂದ್ರ ರೈಲ್ವೇ ಖಾತೆ ರಾಜ್ಯ ಸಚಿವ ಸುರೇಶ್ ಅಂಗಡಿ ಚಾಲನೆ ನೀಡಲಿದ್ದು, ಸಂಸದೆ ಶೋಭಾ ಕರಂದ್ಲಾಜೆ, ಕುಂದಾಪುರ ರೈಲು ಹಿತರಕ್ಷಣಾ ಸಮಿತಿ ಪದಾಧಿಕಾರಿಗಳು ಸೇರಿದಂತೆ ಅನೇಕ ಮಂದಿ ಪಾಲ್ಗೊಳ್ಳಲಿದ್ದಾರೆ. ಅದೇ ದಿನ ಸಂಜೆ ಬೆಂಗಳೂರಿನಿಂದ ವಾಸ್ಕೋಗೆ ಮೊದಲ ಪ್ರಯಾಣ ಆರಂಭಿಸಲಿದೆ ಎಂದು ಕುಂದಾಪುರ ರೈಲು ಹಿತರಕ್ಷಣಾ ಸಮಿತಿ ಅಧ್ಯಕ್ಷ ಗಣೇಶ್ ಪುತ್ರನ್ “ಉದಯವಾಣಿ’ಗೆ ತಿಳಿಸಿದ್ದಾರೆ.