ಬೆಂಗಳೂರು: ನಗರದಲ್ಲಿ ಕೋವಿಡ್-19 ಸೋಂಕು ಪ್ರಕರಣಗಳ ಸಂಖ್ಯೆ ಇಳಿಕೆಯಾಗುತ್ತಿದೆಯಾದರೂ, ಮಾಸ್ಕ್ ಧರಿಸದೆ ಹಾಗೂ ಸಾಮಾಜಿಕ ಅಂತರ ಕಾಯ್ದುಕೊಳ್ಳದೆ ನಿಯಮ ಉಲ್ಲಂಘನೆ ಮಾಡುವವರ ಸಂಖ್ಯೆ ಕಡಿಮೆಯಾಗುತ್ತಿಲ್ಲ.
ಬಿಬಿಎಂಪಿ ವ್ಯಾಾಪ್ತಿಯ ಎಂಟು ವಲಯಗಳಲ್ಲಿ ಮಾಸ್ಕ್ ಧರಿಸದೆ ನಿಯಮ ಉಲ್ಲಂಘನೆ ಮಾಡಿರುವುದಕ್ಕೆ ಸಂಬಂಧಿಸಿದಂತೆ 1,59,448 ಪ್ರಕರಣಗಳು ವರದಿಯಾಗಿವೆ.
ಮಾಸ್ಕ್ ನಿಯಮ ಉಲ್ಲಂಘನೆ ಮಾಡುವವರಿಗೆ ಮಾರ್ಷಲ್‌ಗಳು ತಲಾ 200 ರೂ. ದಂಡ ವಿಧಿಸುತ್ತಿದ್ದು, ಸೆ.26ರ ವರೆಗೆ ಒಟ್ಟು 3.5 ಕೋಟಿ ರೂ. ದಂಡ ಸಂಗ್ರಹಿಸಿದ್ದಾರೆ. ಮಾಸ್ಕ್ ನಿಯಮ ಉಲ್ಲಂಘನೆ ಮಾಡುವವರ ಮೇಲೆ ದಂಡ ವಿಧಿಸಲು ಪ್ರಾರಂಭಿಸಿದಾಗಿನಿಂದ ಇಲ್ಲಿಯವರೆಗೆ ಒಟ್ಟು 3,53,40,819 ರೂ. ದಂಡ ಸಂಗ್ರಹವಾಗಿದೆ.
ಇದನ್ನೂ ಓದಿ:ಮತದಾರರ ಬೆನ್ನಿಗೆ ಚೂರಿ ಹಾಕಿದವರಿಗೆ ಪಾಠ ಕಲಿಸಿ: ಸಿದ್ದರಾಮಯ್ಯ
ಇನ್ನು ಸಾಮಾಜಿಕ ಅಂತರ ಕಾಪಾಡಿಕೊಳ್ಳದ 18,239 ಜನರಿಂದ 39.19 (39,19,916 ರೂ.) ಲಕ್ಷ ರೂ. ದಂಡ ಸಂಗ್ರಹ ಮಾಡಲಾಗಿದೆ. ಮಾಸ್ಕ್ ಧರಿಸದೆ ಹಾಗೂ ಸಾಮಾಜಿಕ ಅಂತರ ಕಾಪಾಡಿಕೊಳ್ಳದ ಒಟ್ಟು ಪ್ರಕರಣಗಳ ಸಂಖ್ಯೆ 1,77,687ಕ್ಕೆ ಏರಿಕೆಯಾಗಿದ್ದು, ಒಟ್ಟಾರೆ ದಂಡ ಸಂಗ್ರಹ 3.92 (3,92,60,735) ಕೋಟಿ ರೂ. ಆಗಿದೆ! ಇದರಲ್ಲಿ ತಲಾ ಒಂದು ಸಾವಿರ ರೂ. ದಂಡ ವಿಧಿಸಿದ ಅವಧಿಯ ಪ್ರಕರಣಗಳೂ ಸೇರ್ಪಡೆಯಾಗಿವೆ.