Advertisement
ಅನಧೀಕೃತ ಜಾಹೀರಾತು ಫಲಕಗಳ ತೆರವಿಗೆ ಸಂಬಂಧಿಸಿದ ಅರ್ಜಿ ವಿಚಾರಣೆ ವೇಳೆ, ಜಾಹೀರಾತು ಫಲಕಗಳ ಮಾಲೀಕರ ಪರ ವಕೀಲರು, “ನಗರದಲ್ಲಿ ಜಾಹೀರಾತು ಫಲಕಗಳಿಗೆ ಒಂದು ವರ್ಷ ನಿಷೇಧ ಹೇರಲಾಗಿದೆ. ಆದರೆ, ಹಬ್ಬಗಳ ಸಂದರ್ಭದಲ್ಲಿ ಜಾಹೀರಾತುಗಳಿಂದಲೇ ಬಿಬಿಎಂಪಿಗೆ ಸಾಕಷ್ಟು ಆದಾಯ ಬರುತ್ತದೆ ಎಂದರು.
Related Articles
Advertisement
ಈ ವೇಳೆ ನಗರದಲ್ಲಿನ ತ್ಯಾಜ್ಯ ವಿಲೇವಾರಿಗೆ ಬಿಬಿಎಂಪಿಯಿಂದ ಯಾವೆಲ್ಲಾ ಕ್ರಮ ಕೈಗೊಳ್ಳಲಾಗಿದೆ ಎಂದು ನ್ಯಾಯಪೀಠ ಕೇಳಿತು. ಬಿಬಿಎಂಪಿ ಪರ ವಕೀಲರು ಉತ್ತರಿಸಿ, ಪ್ರತಿ ದಿನ ಮನೆ ಮನೆಗೆ ಹೋಗಿ ತ್ಯಾಜ್ಯ ಸಂಗ್ರಹಿಸಲಾಗುತ್ತಿದೆ. ತ್ಯಾಜ್ಯ ವಿಲೇವಾರಿಗೆ ಸಂಬಂಧಿಸಿದಂತೆ ಟಿಪ್ಪರ್‌ಗಳ ಖರೀದಿಗೆ ಟೆಂಡರ್ ಕರೆಯಲಾಗಿದೆ. ಆದರೆ, ಈ ವಿಷಯದಲ್ಲಿ ತಕರಾರು ಏರ್ಪಟ್ಟಿದ್ದು, ಹೈಕೋರ್ಟ್‌ನಲ್ಲಿ ವಿಚಾರಣೆ ಬಾಕಿ ಇದೆ ಎಂದು ತಿಳಿಸಿದರು.
ಸಾರ್ವಜನಿಕ ಸ್ಥಳಗಳಲ್ಲಿರುವ ಅನಧಿಕೃತ ಜಾಹೀರಾತು ಫಲಕಗಳು ಹಾಗೂ ಅವುಗಳ ತೆರವಿಗೆ ಇರುವ ಅಡಚಣೆಗಳೇನು? ಹಾಗು ಸಿವಿಲ್ ಕೋರ್ಟ್‌ಗಳಲ್ಲಿ ಈ ಸಂಬಂಧ ಬಾಕಿ ಇರುವ ವ್ಯಾಜ್ಯಗಳ ವಿವರ ಒದಗಿಸುವಂತೆ ಬಿಬಿಎಂಪಿಗೆ ಸೂಚಿಸಿದ ನ್ಯಾಯಪೀಠ, ಅರ್ಜಿಗಳ ವಿಚಾರಣೆಯನ್ನು ಅ.1ಕ್ಕೆ ಮುಂದೂಡಿತು.
ಆದೇಶ ತಡೆಗೆ ನಕಾರ: ನಗರದಲ್ಲಿ ಫ್ಲೆಕ್ಸ್ ಹಾಗೂ ಬ್ಯಾನರ್ ಸೇರಿ ಎಲ್ಲ ಮಾದರಿ ಜಾಹೀರಾತು ಫಲಕಗಳ ಅಳವಡಿಕೆಯನ್ನು ಒಂದು ವರ್ಷ ಕಾಲ ನಿಷೇಧಿಸಿ ಬಿಬಿಎಂಪಿ ಹೊರಡಿಸಿದ ಆದೇಶಕ್ಕೆ ತಡೆಯಾಜ್ಞೆ ನೀಡಲು ಹೈಕೋರ್ಟ್ ನಿರಾಕರಿಸಿದೆ. ಈ ಕುರಿತು ಮೆಸರ್ಸ್ ಪಾಪ್ಯುಲರ್ ಅಡ್ವಟೈìಸರ್ ಸೇರಿ 11 ಜಾಹೀರಾತು ಏಜೆನ್ಸಿಗಳು ಸಲ್ಲಿಸಿರುವ ಅರ್ಜಿ ವಿಚಾರಣೆ ನಡೆಸಿದ ನ್ಯಾ. ವಿನೀತ್ ಕೋಠಾರಿ ಅವರಿದ್ದ ಏಕಸದಸ್ಯ ನ್ಯಾಯಪೀಠ, ಬಿಬಿಎಂಪಿ ಆದೇಶಕ್ಕೆ ತಡೆ ನೀಡಲು ನಿರಾಕರಿಸಿತು.