Advertisement

ಜ್ವಲಂತ ಸಮಸ್ಯೆಗಳನ್ನು ಜೀವಂತ ಇಟ್ಟ ಕಾಂಗ್ರೆಸ್

04:13 PM Jun 26, 2021 | Team Udayavani |

ಆಡಳಿತ ನಡೆಸಿದ ಕಾಂಗ್ರೆಸ್‌ ಪಕ್ಷ ಎಲ್ಲ ಜ್ವಲಂತಸಮಸ್ಯೆಗಳನ್ನು ಜೀವಂತವಾಗಿ ಇಡಲು ಪ್ರಯತ್ನಮಾಡಿತೇವಿನಾ ಅವುಗಳಿಗೆ ಪರಿಹಾರಕಂಡುಕೊಳ್ಳಲಿಲ್ಲಎಂದು ಉಪ ಮುಖ್ಯಮಂತ್ರಿ ಡಾ.ಸಿ.ಎನ್‌.ಅಶ್ವತ್ಥ ನಾರಾಯಣ ಟೀಕಿಸಿದರು.

Advertisement

ಬಳ್ಳಾರಿ ಬಿಜೆಪಿ ಘಟಕ ಶುಕ್ರವಾರಹಮ್ಮಿಕೊಂಡಿದ್ದ ಇ-ಪ್ರಶಿಕ್ಷಣ ವರ್ಗಕಾರ್ಯಕ್ರಮದಲ್ಲಿ ಮೋದಿ ಸರಕಾರದ 7ವರ್ಷಗಳ ಸಾಧನೆ ವಿಷಯದ ಬಗ್ಗೆ ವರ್ಚುವಲ್‌ ಮೂಲಕ ಮಾತನಾಡಿದ ಅವರು,ಕಾಂಗ್ರೆಸ್‌ ತನ್ನ ವೋಟ್‌ ಬ್ಯಾಂಕ್‌ ರಾಜಕೀಯಕ್ಕಾಗಿಸಮಸ್ಯೆಗಳನ್ನು ನಿರಂತರವಾಗಿ ಬದುಕಿರುವಂತೆನೋಡಿಕೊಳ್ಳುತ್ತಿತ್ತು. ಆದರೆ, ನರೇಂದ್ರ ಮೋದಿ ಅವರನೇತೃತ್ವದ ಬಿಜೆಪಿ ಸರಕಾರ ಅಂಥ ಸಮಸ್ಯೆಗಳಿಗೆಚರಮಗೀತೆ ಹಾಡುತ್ತಾ ಬರುತ್ತಿದೆ ಎಂದರು.

ಕಾಶ್ಮೀರ,ರಾಮಮಂದಿರ, ವಲಸಿಗರ ದುಃಸ್ಥಿತಿ, ಉದ್ಯೋಗ,ಕೈಗಾರಿಕೆ, ಆರ್ಥಿಕತೆ, ಮೂಲಸೌಕರ್ಯ, ತೆರಿಗೆ,ಕಪ್ಪುಹಣ ಇತ್ಯಾದಿ ಅಂಶಗಳ ಬಗ್ಗೆ ಕಾಂಗ್ರೆಸ್‌ ಅದೆಷ್ಟುಉಪೇಕ್ಷೆ ಮಾಡಿತ್ತು ಎಂಬುದನ್ನು ಬಿಡಿಸಿ ಹೇಳಬೇಕಿಲ್ಲ.ಇತಿಹಾಸವೇ ಎಲ್ಲ ಸತ್ಯಗಳನ್ನು ಬಿಚ್ಚಿಡುತ್ತಿದೆ. ಆದರೆ,ಬಿಜೆಪಿ ಸರಕಾರಈಎಲ್ಲ ಸಮಸ್ಯೆಗಳಿಂದ ದೇಶವನ್ನುಹೊರ ತಂದಿದೆ ಎಂದು ಡಿಸಿಎಂ ತಿಳಿಸಿದರು.

ಎರಡು ರಾಷ್ಟ್ರವನ್ನಾಗಿಸಿದ್ದ ಕಾಂಗ್ರೆಸ್: ಒಂದುಭಾರತ- ಎರಡು ರಾಷ್ಟ್ರ ಎನ್ನುವುದು ಕಾಂಗ್ರೆಸ್‌ ನೀತಿ.ಒಂದೇ ಭಾರತ-ಒಂದೇ ದೇಶ ಎನ್ನುವುದುಬಿಜೆಪಿಯ ನೀತಿ. ಈ ಕಾರಣಕ್ಕಾಗಿಯೇ ಜಮ್ಮು ಮತ್ತು ಕಾಶ್ಮೀರಕ್ಕಿದ್ದ 370ನೇವಿಧಿಯನ್ನು ತೆಗೆಯಲಾಯಿತು. ಈಗಕಾಶ್ಮೀರವೂ ಭಾರತದ ಅಂತರ್ಭಾಗ.ಕಾಂಗ್ರೆಸ್‌ಗೆ ಇಂಥ ಇಚ್ಛಾಶಕ್ತಿ ಇರಲಿಲ್ಲಎಂದುಕಿಡಿಕಾರಿದರು.

ಕೋವಿಡ್ನಿಂದಲೇ ಸ್ವಾವಲಂಬನೆಯತ್ತ: ಕೋವಿಡ್‌ಸಂಕಷ್ಟ ಭಾರತಕ್ಕೆ ಬಂದಾಗ ಅದನ್ನೇ ಅವಕಾಶಮಾಡಿಕೊಂಡ ಮೋದಿ ಅವರು ಆತ್ಮನಿರ್ಭರ ಭಾರತಪರಿಕಲ್ಪ ‌ ನೆ ಅಡಿ ಕೈಗಾರಿಕೆ, ಉತ್ಪಾದನೆ, ಉದ್ಯೋಗಸೃಷ್ಟಿಗೆ ಉತ್ತೇಜನ ನೀಡಿದರು. ಭಾರತವು ಕೇವಲಒಂದೂವರೆ ವರ್ಷದಲ್ಲೇ ಸಂಪೂರ್ಣ ಸ್ವಾವಲಂಭನೆಸಾಧಿಸಿತು ಲಸಿಕೆಯೂ ಹೊರಹೊಮ್ಮಿತು ಎಂದರು.ಬಳ್ಳಾರಿ ಜಿಲ್ಲೆಯ ಬಿಜೆಪಿ ಅಧ್ಯಕ್ಷ ಚನ್ನಬಸವ ಗೌಡ,ಜಿÇÉಾ ಪ್ರಧಾನ ಕಾರ್ಯದರ್ಶಿ ಡಾ.ರಮೇಶ್‌, ಜಿಲ್ಲಾ ಪ್ರಭಾರಿ ಸಚ್ಚಿದಾನಂದ ಇತರರಿದ್ದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next