Advertisement

ಗಡಿ ಗ್ರಾಮಗಳಲ್ಲಿ ಕನ್ನಡ ಹೆಸರು ಕಾಪಾಡಿ

05:50 PM Jun 28, 2021 | Team Udayavani |

ಬೆಂಗಳೂರು: ಕಾಸರಗೋಡು ಜಿಲ್ಲೆಯ ಮಂಜೇಶ್ವರ ಹಾಗೂ ಅಲ್ಲಿನ ಕೆಲವು ಗ್ರಾಮಗಳ ಕನ್ನಡದ ಹೆಸರುಗಳನ್ನು ಯಥಾವತ್ತಾಗಿ ಕಾಪಾಡಬೇಕು ಎಂದುಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಮನವಿ ಮಾಡಿದ್ದಾರೆ.

Advertisement

ಈ ಸಂಬಂಧ ಟ್ವೀಟ್‌ ಮೂಲಕ ಮನವಿ ಮಾಡಿ, ಮಂಜೇಶ್ವರ ಸೇರಿದಂತೆ ಕೆಲ ಗ್ರಾಮಗಳ ಕನ್ನಡದ ಹೆಸರುಗಳನ್ನುಮಲಯಾಳಿ ಭಾಷೆಗೆ ಬದಲಾಯಿಸಲು ಕೇರಳ ಸರ್ಕಾರ ಮುಂದಾಗಿದೆ. ಆದರೆ, ಆಯಾ ಗ್ರಾಮಗಳ ಮೂಲ ಹೆಸರನ್ನು ಕಾಪಾಡಬೇಕು ಎಂದು ಹೇಳಿದ್ದಾರೆ.

ಭಾವನೆಗಳೊಂದಿಗೆ ರಾಜಕೀಯ ನಡೆಯುತ್ತಿರುವ ಇಂದಿನ ಕಾಲಘಟ್ಟದಲ್ಲಿ ಭಾಷಾ ಭಾವೈಕ್ಯತೆಯನ್ನೂ ಕಾಪಾಡಿಕೊಂಡು ಹೋಗಬೇಕಾದ ಅನಿವಾರ್ಯತೆ ಇದೆ. ಹೀಗಾಗಿ, ಅಲ್ಲಿನ ಕನ್ನಡಿಗರ ಪರಂಪರಾಗತ ಭಾವನೆಗಳನ್ನು ಕಾಪಾಡುವುದು ಎರಡೂ ರಾಜ್ಯಗಳ ಕರ್ತವ್ಯ ಎಂಬುದು ನನ್ನ ಭಾವನೆ. ಗ್ರಾಮಗಳ ಈಗಿನ ಕನ್ನಡ ಹೆಸರನ್ನು, ಮಲಯಾಳಿಗೆ ರೂಪಾಂತರ ಮಾಡಲಾಗುತ್ತಿದೆ. ಅದರೆ ಅರ್ಥವನ್ನು ಹಾಗೆಯೇ ಉಳಿಸಿಕೊಂಡಂತೆಕಾಣುತ್ತಿದೆ ಎಂದು ಹೇಳಿದ್ದಾರೆ

Advertisement

Udayavani is now on Telegram. Click here to join our channel and stay updated with the latest news.

Next