ಬೆಂಗಳೂರು: ಕೇಂದ್ರ ಸರ್ಕಾರದಲ್ಲಿ ಕರ್ನಾಟಕದಿಂದ ಸಚಿವರುಆರಾಗಲಿ- ಹನ್ನೆರಡಾಗಲಿ ಅದರಿಂದ ರಾಜ್ಯಕ್ಕೆ ಏನೂ ಲಾಭವಾಗದುಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಅವರು,ಹೊಸಬರಲ್ಲಿ ಯಾರೂ ಸಂಪುಟ ದರ್ಜೆಯ ಸಚಿವರಿಲ್ಲ.ಮಹತ್ವದ ಖಾತೆಗಳೂ ಇಲ್ಲ. ಮಹತ್ವದ ಖಾತೆಗಳನ್ನುಕೊಟ್ಟರೂ ಇವರಿಗೆ ನಿಭಾಯಿಸುವ ಸಾಮರ್ಥ್ಯವೂ ಇಲ್ಲಎಂದು ನರೇಂದ್ರ ಮೋದಿಯವರಿಗೆ ಗೊತ್ತಾಗಿರಬೇಕುಎಂದು ಲೇವಡಿ ಮಾಡಿದ್ದಾರೆ.
ಈ ಸಂಪುಟ ವಿಸ್ತರಣೆ, ಪುನಾರಚನೆಯಿಂದ ರಾಜ್ಯಕ್ಕೆಯಾವ ಲಾಭವೂ ಇಲ್ಲ. ರಾಜ್ಯದ ಮುಖ್ಯಮಂತ್ರಿಗಳಿಗೆ ಪ್ರಧಾನಿಎದುರು ಬಾಯಿಬಿಡುವ ಶಕ್ತಿ ಇಲ್ಲ, 25 ಸಂಸದರು ಬಾಯಿಗೆ ಬೀಗಹಾಕಿಕೊಂಡು ಕೂತಿದ್ದಾರೆ. ಹೀಗಿರುವಾಗ ಹೊಸದಾಗಿ ಸಚಿವಖಾತೆಯ ಕಿರೀಟ ಇಟ್ಟುಕೊಂಡು ಇವರೇನು ಮಾಡಬಹುದುಎಂದು ಪ್ರಶ್ನಿಸಿದ್ದಾರೆ.ಈ ಬಾರಿಯ ಸಚಿವ ಸಂಪುಟ ವಿಸ್ತರಣೆಯಲ್ಲಿ ಮೋದಿಯವರುಸೋಷಿಯಲ್ ಎಂಜನಿಯರಿಂಗ್ ಮಾಡಿದ್ದಾರೆ, ಸಾಮಾಜಿಕನ್ಯಾಯವನ್ನು ಪಾಲಿಸಿದ್ದಾರೆ ಎಂದೆಲ್ಲ ವ್ಯಾಖ್ಯಾನಗಳು ಕೇಳಿ ಬರುತ್ತಿವೆ.
ಆದರೆ, ಕರ್ನಾಟಕದಿಂದ ಆರು ಮಂದಿ ಈಗ ಕೇಂದ್ರಸಚಿವರಾಗಿದ್ದಾರೆ. ಇವರಲ್ಲಿ ಒಬ್ಬರೇ ಒಬ್ಬರು ಹಿಂದುಳಿದ ಜಾತಿಗೆಸೇರಿದವರಿಲ್ಲ. ಮೂವರು ಬ್ರಾಹ್ಮಣರು, ಒಕ್ಕಲಿಗ,ಲಿಂಗಾಯತ ಮತ್ತು ಪರಿಶಿಷ್ಟ ಜಾತಿಗೆ ಸೇರಿದ ತಲಾಒಬ್ಬರು ಸಚಿವರಾಗಿದ್ದಾರೆ. ಯಾವ ಜಾತಿಗೆ ಕೊಟ್ಟರೂನನ್ನ ಆಕ್ಷೇಪ ಇಲ್ಲ.
ಅರ್ಧಕ್ಕಿಂತ ಹೆಚ್ಚಿನ ಜನಸಂಖ್ಯೆಇರುವ ಸಮುದಾಯಗಳಿಗೆ ಪ್ರಾತಿನಿಧ್ಯ ನಿರಾಕರಿಸುವುದು ಯಾವ ಸೋಷಿಯಲ್ ಎಂಜನಿಯರಿಂಗ್,ಯಾವ ಸಾಮಾಜಿಕ ನ್ಯಾಯ ಎಂದಿದ್ದಾರೆ.ಹಿಂದಿನ ಆರೋಗ್ಯ ಸಚಿವ ಡಾ.ಹರ್ಷವರ್ಧನ್ ಸ್ವತಃವೈದ್ಯರಾಗಿದ್ದರೆ, ಹೊಸ ಆರೋಗ್ಯ ಸಚಿವ ಮನಸುಖ ಮಾಂಡವೀಯರಾಜಕೀಯ ಶಾಸ್ತ್ರದಲ್ಲಿ ಪದವೀಧರ. ಕೊರೊನಾ ಕಾಲದಲ್ಲಿ ಆರೋಗ್ಯಖಾತೆಯಲ್ಲಿಯೇ ಕೈತುಂಬಾ ಕೆಲಸ ಇರುವಾಗ ಹೊಸ ಆರೋಗ್ಯಸಚಿವರಿಗೆ ಹೆಚ್ಚುವರಿಯಾಗಿ ರಾಸಾಯನಿಕ ಮತ್ತು ರಸಗೊಬ್ಬರಖಾತೆಯನ್ನು ನೀಡಲಾಗಿದೆ. ಇವರಿಂದ ಯಾವ ಸಾಧನೆಯನ್ನುನಿರೀಕ್ಷಿಸಬಹುದು ಎಂದು ಪ್ರಶ್ನಿಸಿದ್ದಾರೆ.