Advertisement

ಗೌಡರ ಗದ್ದಲದಲ್ಲಿ ಗೆಲ್ಲುವವರು ಯಾರು?

01:37 AM Apr 06, 2019 | Team Udayavani |

ಬೆಂಗಳೂರು: ಬಿಜೆಪಿ ಅಭ್ಯರ್ಥಿ, ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ ಹಾಗೂ ಕಾಂಗ್ರೆಸ್‌ ಅಭ್ಯರ್ಥಿ, ರಾಜ್ಯ ಗ್ರಾಮೀಣಾಭಿವೃದ್ಧಿ ಸಚಿವ ಕೃಷ್ಣಭೈರೇಗೌಡರ
ನಡುವೆ ನೇರ ಜಿದ್ದಾಜಿದ್ದಿಗೆ ಅಣಿಯಾಗಿರುವ ಬೆಂಗಳೂರು ಉತ್ತರ ಕ್ಷೇತ್ರದಲ್ಲಿ ಚುನಾವಣಾ ಪ್ರಚಾರದ ಕಾವು ನಿಧಾನವಾಗಿ ಏರುತ್ತಿದೆ.

Advertisement

ಮೈತ್ರಿ ಪಕ್ಷದ ಸೀಟು ಹಂಚಿಕೆ ಸಂದರ್ಭದಲ್ಲಿ ಜೆಡಿಎಸ್‌ ಪಾಲಾಗಿದ್ದ ಈ ಕ್ಷೇತ್ರವನ್ನು ಕೊನೇ ಕ್ಷಣದಲ್ಲಿ ಕಾಂಗ್ರೆಸ್‌ಗೆ ಬಿಟ್ಟು ಕೊಡಲಾಯಿತು. ಹಾಲಿ ಸಂಸದ ಡಿ.ವಿ.ಸದಾನಂದ ಗೌಡ ಹಾಗೂ ಸಚಿವ ಕೃಷ್ಣ ಭೈರೇಗೌಡರು ತುರುಸಿನ ಪ್ರಚಾರ ನಡೆಸಿದ್ದು, ಗೆಲುವಿಗೆ ಬೇಕಾದ ರಣತಂತ್ರ ರೂಪಿಸುತ್ತಿದ್ದಾರೆ. ನಗರ ಹಾಗೂ ಗ್ರಾಮೀಣ ಭಾಗ ಎರಡನ್ನೂ ಹೊಂದಿರುವ, ಅತಿ ಹೆಚ್ಚು ವಿಸ್ತಾರ ಹೊಂದಿರುವ ಕ್ಷೇತ್ರದಲ್ಲಿ ಮತದಾರರ ಮನವೊಲಿಕೆಗೆ ಇಬ್ಬರೂ ಅಭ್ಯರ್ಥಿಗಳು ಇನ್ನಿಲ್ಲದ ಕಸರತ್ತು ನಡೆಸುತ್ತಿದ್ದಾರೆ.ಎರಡೂ ಪಕ್ಷಗಳ ನಾಯಕರು ಈ ಚುನಾವಣೆಯನ್ನು ಪ್ರತಿಷ್ಠೆಯಾಗಿ ತೆಗೆದುಕೊಂಡಿದ್ದಾರೆ.

ಕಣ ಚಿತ್ರಣ: ಒಂದು ಕಾಲದಲ್ಲಿ ಕಾಂಗ್ರೆಸ್‌ನ ಭದ್ರಕೋಟೆಯಾಗಿದ್ದ ಬೆಂಗಳೂರು ಉತ್ತರದಿಂದ ಕೇಂದ್ರದ ಮಾಜಿ ಸಚಿವರೂ ಆಗಿದ್ದ ಹಿರಿಯ ಕಾಂಗ್ರೆಸ್‌ ನಾಯಕ ಸಿ.ಕೆ.ಜಾಫ‌ರ್‌ ಷರೀಫ್ ಸತತವಾಗಿ ಗೆದ್ದು ಬರುತ್ತಿದ್ದರು. 2004ರಲ್ಲಿ ಬಿಜೆಪಿಯಿಂದ ಎಚ್‌.ಟಿ. ಸಾಂಗ್ಲಿಯಾನ ಜಯಗಳಿಸಿದ್ದರು. 2009ರಲ್ಲಿ ಡಿ.ಬಿ.ಚಂದ್ರೇಗೌಡರು ಬಿಜೆಪಿಯಿಂದ ಗೆದ್ದರು, ಜಾಫ‌ರ್‌ ಷರೀಫ್ ಸೋಲು ಅನುಭವಿಸಿದರು.

ಪುತ್ತೂರು ಮೂಲದ ಡಿ.ವಿ.ಸದಾನಂದ ಗೌಡರು, ಮಂಗಳೂರು, ಉಡುಪಿ-ಚಿಕ್ಕಮಗಳೂರು ಕ್ಷೇತ್ರದಿಂದ ಸಂಸದರಾಗಿ ಆಯ್ಕೆಯಾಗಿದ್ದರು. 2014ರ ಚುನಾವಣೆಯಲ್ಲಿ ಬೆಂಗಳೂರು ಉತ್ತರದಿಂದಸದಾನಂದ ಗೌಡರು ಸ್ಪರ್ಧಿಸಿದಾಗ ಅವರ ವಿರುದಟಛಿ ಸಿ.ನಾರಾಯಣಸ್ವಾಮಿ ಕಾಂಗ್ರೆಸ್‌ನಿಂದ, ಜೆಡಿಎಸ್‌ ನಿಂದ ಅಬ್ದುಲ್‌ ಅಜೀಂ ಸ್ಪರ್ಧೆ ಮಾಡಿದ್ದರು. ಸದಾನಂದಗೌಡರು ಗೆದ್ದು, ಕೇಂದ್ರ ಸಚಿವರಾದರು. ಡಿ.ವಿ.ಸದಾನಂದಗೌಡ ಅವರು 7,18,326 ಮತ ಪಡೆದರೆ, ಕಾಂಗ್ರೆಸ್‌ನ ಸಿ.ನಾರಾಯಣ ಸ್ವಾಮಿ 4,88,562 ಮತಗಳನ್ನು ಪಡೆದಿದ್ದರು.

ಈ ಬಾರಿ ಎಚ್‌.ಡಿ.ದೇವೇಗೌಡರೇ ಇಲ್ಲಿಂದ ಸ್ಪರ್ಧೆ ಮಾಡುವ ಪ್ರಸ್ತಾಪ ಇದ್ದ ಕಾರಣ ತೀವ್ರ ಕುತೂಹಲ ಮೂಡಿಸಿತ್ತು. ಆದರೆ, ಅಂತಿಮವಾಗಿ ಕಾಂಗ್ರೆಸ್‌-ಜೆಡಿಎಸ್‌ ಮೈತ್ರಿಕೂಟದ ಅಭ್ಯರ್ಥಿಯಾಗಿ ಕೃಷ್ಣ ಬೈರೇಗೌಡರು ಸ್ಪರ್ಧೆ ಮಾಡಿದ್ದಾರೆ.

Advertisement

ಕ್ಷೇತ್ರ ವ್ಯಾಪ್ತಿ
ಕ್ಷೇತ್ರ ಎಂಟು 8 ವಿಧಾನಸಭಾ ಕ್ಷೇತ್ರಗಳನ್ನು ಹೊಂದಿದ್ದು, ಐದರಲ್ಲಿ ಕಾಂಗ್ರೆಸ್‌, ಎರಡಲ್ಲಿ ಜೆಡಿಎಸ್‌ ಶಾಸಕರಿದ್ದಾರೆ. ಬಿಜೆಪಿ ಏಕೈಕ ಶಾಸಕನನ್ನು ಹೊಂದಿದೆ. ಪಾಲಿಕೆಯಲ್ಲಿ ಕಾಂಗ್ರೆಸ್‌ ಹಾಗೂ ಜೆಡಿಎಸ್‌ನ ಸದಸ್ಯರು ಹೆಚ್ಚಾಗಿದ್ದಾರೆ. ಕೆ.ಆರ್‌.ಪುರ, ಹೆಬ್ಟಾಳ,
ಬ್ಯಾಟರಾಯನಪುರ, ಪುಲಿಕೇಶಿನಗರ ಹಾಗೂ ಯಶವಂತಪುರದಲ್ಲಿ ಕಾಂಗ್ರೆಸ್‌ ಶಾಸಕರಿದ್ದರೆ, ಮಹಾಲಕ್ಷ್ಮೀ ಲೇಔಟ್‌ ಹಾಗೂ ದಾಸರಹಳ್ಳಿಯಲ್ಲಿ ಜೆಡಿಎಸ್‌ ಮತ್ತು ಮಲ್ಲೇಶ್ವರದಲ್ಲಿ ಬಿಜೆಪಿ ಶಾಸಕರಿದ್ದಾರೆ. ಕಾಂಗ್ರೆಸ್‌ ಹಾಗೂ ಜೆಡಿಎಸ್‌ ಚುನಾವಣಾ ಪೂರ್ವ ಮೈತ್ರಿ ಮಾಡಿಕೊಂಡಿರುವುದರಿಂದ ಏಳು ಕ್ಷೇತ್ರದ ಶಾಸಕರ ಬಲ ಕಾಂಗ್ರೆಸ್‌ ಅಭ್ಯರ್ಥಿಗೆ ಸಿಗಲಿದೆ.

ನಿರ್ಣಾಯಕ ಅಂಶ
ಕೃಷ್ಣ ಬೈರೇಗೌಡರು ಸಮ್ಮಿಶ್ರ ಸರ್ಕಾರದಲ್ಲಿ ಸಚಿವರಾಗಿರುವುದರಿಂದ ಸಹಜವಾಗಿ ಪ್ರಬಲ ಸ್ಪರ್ಧಿಯಾಗಿದ್ದಾರೆ.ಸದಾನಂದಗೌಡರು ಕಳೆದ ಐದು ವರ್ಷಗಳಲ್ಲಿ ಮಾಡಿರುವ ಸಾಧನೆ ಮುಂದಿಟ್ಟು ಎರಡನೇ ಬಾರಿ ಆಯ್ಕೆ ಬಯಸಿದ್ದಾರೆ. ಇಬ್ಬರೂ ಒಕ್ಕಲಿಗ ಸಮುದಾಯದ ಪ್ರಬಲ ನಾಯಕರಾಗಿದ್ದು,ಜಿದ್ದಾಜಿದ್ದಿಯ ಪೈಪೋಟಿ ಏರ್ಪಟ್ಟಿದೆ. ಕಳೆದ ವಿಧಾನಸಭಾ ಚುನಾವಣೆಯ ಮತ ಹಂಚಿಕೆ ಗಮನಿಸಿದರೆ ಕಾಂಗ್ರೆಸ್‌ ಹಾಗೂ ಜೆಡಿಎಸ್‌ ಅಭ್ಯರ್ಥಿಗಳು ಹೆಚ್ಚು ಪಡೆದಿದ್ದಾರೆ. ಅದೇ ಲೆಕ್ಕಾಚಾರದಲ್ಲಿ ಮೈತ್ರಿಕೂಟದ ಅಭ್ಯರ್ಥಿ ಗೆಲುವಿನ ವಿಶ್ವಾಸದಲ್ಲಿದ್ದಾರೆ. ಆದರೆ, ಲೋಕಸಭಾ ಚುನಾವಣೆಯಲ್ಲಿ ಮತದಾರರು ದೇಶದ ರಾಜಕಾರಣ ನೋಡಿ ಮತ ಹಾಕುತ್ತಾರೆ. ವಿಧಾನಸಭೆ ಅಥವಾ ಮಹಾನಗರ ಪಾಲಿಕೆಚುನಾವಣೆಯಲ್ಲಿನ ಮತಗಳಿಕೆಯನ್ನು ಇದಕ್ಕೆ ಹೋಲಿಕೆ ಮಾಡುವುದು ಸರಿಯಲ್ಲ
ಎಂಬುದು ಬಿಜೆಪಿ ವಾದ. ಜೊತೆಗೆ, ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ವ್ಯಾಪ್ತಿಗೆ ಬರುವ ಎಂಟೂ ವಿಧಾನಸಭಾ ಕ್ಷೇತ್ರಗಳಲ್ಲಿ ಬಿಜೆಪಿ ಪ್ರಬಲ ನೆಲೆಹೊಂದಿದೆ.

– ರಾಜು ಖಾರ್ವಿ ಕೊಡೇರಿ

Advertisement

Udayavani is now on Telegram. Click here to join our channel and stay updated with the latest news.

Next