Advertisement
ಈ ನಿಟ್ಟಿನಲ್ಲಿ ಪೊಲೀಸರು ಜಾಗೃತ ಸ್ಥಿತಿಯಲ್ಲಿದ್ದು, ಮಂಗಳೂರು ನಗರ ಸಹಿತ ದಕ್ಷಿಣ ಕನ್ನಡ ಜಿಲ್ಲೆಯ ಆಗು ಹೋಗುಗಳ ಬಗ್ಗೆ ನಿಗಾ ವಹಿಸಲಾಗುತ್ತಿದೆ ಎಂದು ಮಂಗಳೂರು ಪೊಲೀಸ್ ಆಯುಕ್ತ ವಿಕಾಶ್ ಕುಮಾರ್ “ಉದಯವಾಣಿ’ಗೆ ತಿಳಿಸಿದ್ದಾರೆ.
Related Articles
ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರುವಂತಹ ವಿಚಾರಗಳು ಸಾಮಾಜಿಕ ಜಾಲ ತಾಣಗಳಲ್ಲಿ ಹರಿದಾಡುತ್ತಿರುವುದು ಪೊಲೀಸರ ಗಮನಕ್ಕೆ ಬಂದಿದ್ದು, ಈ ವಿಚಾರದಲ್ಲಿ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದು, ತನಿಖೆ ನಡೆಯುತ್ತಿದೆ ಎಂದಿದ್ದಾರೆ. ಈ ವಿಚಾರಕ್ಕೆ ಸಂಬಂಧ ಪಟ್ಟಂತೆ ಹಾಗೂ ಇತರ ಯಾವುದೇ ಮತಗಳ ಧಾರ್ಮಿಕ ವಿಚಾರಗಳಿಗೆ ಸಂಬಂಧಿಸಿ ಯಾವುದೇ ವ್ಯಕ್ತಿಗಳು ಧಾರ್ಮಿಕ ಅವಹೇಳನ ಮಾಡುವ ವಿಚಾರಗಳನ್ನು ಸೃಷ್ಟಿಸುವುದಾಗಲಿ, ಹಂಚಿ ಕೊಳ್ಳುವುದಾಗಲಿ ಮತ್ತು ಅಭಿಪ್ರಾಯ ವ್ಯಕ್ತ ಪಡಿಸುವುದಾಗಲಿ, ಟೀಕೆ ಮಾಡುವುದಾಗಲಿ ಕಂಡು ಬಂದರೆ ಅವರ ಮೇಲೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸ್ ಆಯುಕ್ತರು ಎಚ್ಚರಿಕೆ ನೀಡಿದ್ದಾರೆ.
Advertisement