Advertisement

ಬೆಂಗಳೂರು ರೋಸ್ ತಳಿಯ ಈರುಳ್ಳಿ ರಫ್ತು ನಿರ್ಭಂದ ತೆಗೆಯುವಂತೆ ಕೇಂದ್ರಕ್ಕೆ ಪತ್ರ

06:35 PM Sep 21, 2020 | sudhir |

ಬೆಂಗಳೂರು: ರಾಜ್ಯದಲ್ಲಿ ಬೆಳೆಯುವ ಬೆಂಗಳೂರು ರೋಸ್ ತಳಿಯ ಈರುಳ್ಳಿ ರಫ್ತು ನಿರ್ಭಂದ ತೆಗೆಯುವಂತೆ ಕೇಂದ್ರ ಸರ್ಕಾರಕ್ಕೆ ರಾಜ್ಯ ಸರ್ಕಾರದಿಂದ ಮನವಿ ಮಾಡಲಾಗಿದೆ. ತೋಟಗಾರಿಕೆ, ಪೌರಾಡಳಿತ ಹಾಗೂ ರೇಷ್ಮೆ ಇಲಾಖೆ ಸಚಿವ ಡಾ| ನಾರಾಯಣ ಗೌಡ ಈ ಸಂಬಂಧ ಕೇಂದ್ರ ಸಚಿವ ಪಿಯುಷ್ ಗೋಯಲ್ ಅವರಿಗೆ ಪತ್ರ ಬರೆದಿದ್ದಾರೆ. ರೈತರಿಗೆ ಅನುಕೂಲ ಮಾಡಿಕೊಡುವ ದೃಷ್ಟಿಯಿಂದ ರಫ್ತು ನಿರ್ಭಂದ ಸಡಿಲಗೊಳಿಸುವಂತೆ ಪತ್ರದಲ್ಲಿ ಮನವಿ ಮಾಡಿದ್ದಾರೆ.

Advertisement

ಬೆಂಗಳೂರು ರೋಸ್ ಈರುಳ್ಳಿ ವಿಶೇಷ ತಳಿಯಾಗಿದೆ. ಸಣ್ಣ ಹಿಡುವಳಿ ರೈತರು ಇದ್ದನ್ನ ನಮ್ಮ ರಾಜ್ಯದಲ್ಲಿ ಹೆಚ್ಚಾಗಿ ಬೆಳೆಯುತ್ತಿದ್ದಾರೆ. ಸ್ಥಳೀಯ ಮಾರ್ಕೇಟ್‍ನಲ್ಲಿ ಇದಕ್ಕೆ ಬೇಡಿಕೆ ಕಡಿಮೆ ಇದೆ. ರಫ್ತು ಮಾಡುವುದೊಂದೇ ರೈತರಿಗೆ ಇರುವ ಪರಿಹಾರ. ನಿರ್ಭಂದ ಸಡಿಲಿಸಿದರೆ ರೈತರು ಹಾಗೂ ರಫ್ತು ದಾರರು ನಿರಾಳರಾಗುತ್ತಾರೆ. ನಿರ್ಭಂದ ಹೇರಿರುವ ಕಾರಣ ರೈತರು ಸಹಜವಾಗಿ ಆತಂಕಕ್ಕೆ ಈಡಾಗಿದ್ದಾರೆ.

ರಫ್ತಿಗೆ ಅವಕಾಶ ಮಾಡಿಕೊಡುವುದರ ಜೊತೆ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಹೆಚ್ಚಿನ ಅವಕಾಶ ಮಾಡಿಕೊಟ್ಟರೆ ಬೆಂಗಳೂರು ರೋಸ್ ಆನಿಯನ್‍ಗೆ ಇನ್ನಷ್ಟು ಉತ್ತೇಜನ ಸಿಗಲಿದೆ. ಕೇಂದ್ರ ಸರ್ಕಾರ ಅಗತ್ಯ ವಸ್ತುಗಳ ರಫ್ತು ನಿಷೇಧಿಸಿದ್ದು, ಆ ಪಟ್ಟಿಯಲ್ಲಿ ಬೆಂಗಳೂರು ರೋಸ್ ಆನಿಯನ್ ಕೂಡ ಸೇರಿಕೊಂಡಿದೆ. ಆದ್ರೆ ಬೆಂಗಳೂರು ರೋಸ್ ಆನಿಯನ್‍ಗೆ ಸ್ಥಳೀಯವಾಗಿ ಬೇಡಿಕೆ ಕಡಿಮೆ ಇದೆ. ಹಾಗಾಗಿ ರಫ್ತಿಗೆ ಅವಕಾಶ ಮಾಡಿಕೊಡಬೇಕು ಎಂದು ಕೇಂದ್ರ ಸಚಿವ ಪಿಯುಷ್ ಗೋಯಲ್ ಅವರಿಗೆ ಸಚಿವ ಡಾ| ನಾರಾಯಣ ಗೌಡ ಪತ್ರದಲ್ಲಿ ಮನವಿ ಮಾಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next