Advertisement

ಬೆಂಗಳೂರು ದಕ್ಷಿಣ: ಬಿ.ಕೆ.ಹರಿಪ್ರಸಾದ್‌ಗೆ ಟಿಕೆಟ್‌

05:19 AM Mar 25, 2019 | Team Udayavani |

ಬೆಂಗಳೂರು: ಅಚ್ಚರಿಯ ಬೆಳವಣಿಗೆಯಲ್ಲಿ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಿಂದ ರಾಜ್ಯಸಭಾ ಸದಸ್ಯ ಬಿ.ಕೆ.ಹರಿಪ್ರಸಾದ್‌ ಅವರನ್ನು ಅಭ್ಯರ್ಥಿಯನ್ನಾಗಿ ಎಐಸಿಸಿ ಘೋಷಿಸಿದೆ. ಆ ಮೂಲಕ ರಾಜ್ಯದಲ್ಲಿ ಕಾಂಗ್ರೆಸ್‌ ಪಾಲಿನ 20 ಕ್ಷೇತ್ರಗಳ ಪೈಕಿ 19 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಘೋಷಣೆಯಾಗಿದ್ದು, ಧಾರವಾಡ ಕ್ಷೇತ್ರದ ಅಭ್ಯರ್ಥಿ ಘೋಷಣೆಯಷ್ಟೇ ಬಾಕಿ ಉಳಿದಿದೆ.

Advertisement

ಬೆಂಗಳೂರು ದಕ್ಷಿಣ ಕ್ಷೇತ್ರದಿಂದ ತೇಜಸ್ವಿನಿ ಅನಂತ ಕುಮಾರ್‌ ಕಣಕ್ಕಿಳಿಯಲಿದ್ದಾರೆ ಎಂಬ ನಿರೀಕ್ಷೆ ನಡುವೆ ಬಿಜೆಪಿಯು ಮೊದಲ 2 ಪಟ್ಟಿಯಲ್ಲಿ ಬೆಂಗಳೂರು ದಕ್ಷಿಣ ಕ್ಷೇತ್ರದ ಅಭ್ಯರ್ಥಿ ಯನ್ನೇ ಘೋಷಿಸಿಲ್ಲ. ಈ ನಡುವೆ ಪ್ರಧಾನಿ ಮೋದಿಯವರು ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ ಎಂಬ ಮಾತು ಕೂಡ ಕೇಳಿಬರುತ್ತಿದೆ.

Advertisement

Udayavani is now on Telegram. Click here to join our channel and stay updated with the latest news.

Next