Advertisement

karnataka polls: ಕೃಷ್ಣಪ್ಪ ಕೆಲಸಕ್ಕೆ ಮೆಚ್ಚಿ ಹಲವರು ಬಿಜೆಪಿಗೆ

10:34 AM Apr 30, 2023 | Team Udayavani |

ಬೆಂಗಳೂರು: ಹಾಲಿ ಬಿಜೆಪಿ ಶಾಸಕ ಎಂ.ಕೃಷ್ಣಪ್ಪ ಅವರ ಅಭಿವೃದ್ಧಿ ಕಾರ್ಯಗಳನ್ನು ಮೆಚ್ಚಿ ಬೆಂಗಳೂರು ದಕ್ಷಿಣ ಕ್ಷೇತ್ರದಲ್ಲಿ ಅನ್ಯ ಪಕ್ಷದವರು ಬಿಜೆಪಿ ಸೇರ್ಪಡೆಯಾಗುತ್ತಿರುವ ಸಂಖ್ಯೆ ದಿನೇ ದಿನೆ ಹೆಚ್ಚುತ್ತಲೇ ಇದೆ. ಶನಿವಾರ ಕೂಡ ಪಾಲಿಕೆ ಮಾಜಿ ಸದಸ್ಯರು ಸೇರಿದಂತೆ ಹಲವರು ಬಿಜೆಪಿಗೆ ಸೇರ್ಪಡೆಗೊಂಡರು.

Advertisement

ಪಾಲಿಕೆ ಮಾಜಿ ಸದಸ್ಯ ಕೆ.ರಮೇಶ್‌ ರಾಜು ಸೇರಿದಂತೆ ಹಲವು ಪಕ್ಷಗಳ ಕಾರ್ಯಕರ್ತರು ಬಿಜೆಪಿ ಯುವ ಮುಖಂಡ ಪರಮೇಶ್‌ ಸಮ್ಮುಖದಲ್ಲಿ ಕಮಲ ಪಕ್ಷ ಸೇರಿದರು.

ಈ ಮಧ್ಯೆ ಕ್ಷೇತ್ರ ವ್ಯಾಪ್ತಿಯ ಬೇಗೂರು ವಾರ್ಡಿನ ಅಕ್ಷಯನಗರದಲ್ಲಿ ಡಿಎಲ್‌ಎಫ್ ಅಪಾರ್ಟ್‌ಮೆಂಟ್‌ ನಿವಾಸಿಗಳ ಜತೆಗೆ ಶಾಸಕ ಎಂ.ಕೃಷ್ಣಪ್ಪ ಸಮಾಲೋಚನೆ ನಡೆಸಿದರು. ಹಾಗೆಯೇ ನಾಗರಿಕರ ಕುಂದು ಕೊರತೆಗಳನ್ನು ಆಲಿಸಿ ಬಿಜೆಪಿ ಬೆಂಬಲಿಸುವಂತೆ ಮನವಿ ಮಾಡಿದರು. ಈ ವೇಳೆ ಸ್ಥಳೀಯ ಬಿಜೆಪಿ ಮುಖಂಡ ರಮೇಶ್‌ ಆರಾಧ್ಯ, ಪ್ರಶಾಂತ್‌ ಜೋಶಿ, ರಮೇಶ್‌ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು. ಬಳಿಕ ಅಂಜನಾಪುರ ವಾರ್ಡ್‌ನ ಕೆಂಬತ್ತಹಳ್ಳಿ ಹಾಗೂ
ಅಂಜನಾಪುರ ಸುತ್ತಮುತ್ತಲಿನ ಪ್ರದೇಶದಲ್ಲಿ ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರದ ಯೋಜನೆಗಳ
ಕರಪತ್ರವನ್ನು ಹಂಚಿ ಮತಯಾಚಿಸಲಾಯಿತು.

ಪಾಲಿಕೆ ಮಾಜಿ ಸದಸ್ಯ ಕೆ. ಸೋಮಶೇಖರ್‌, ಮುಖಂಡರಾದ ಕೆಂಬತ್ತಹಳ್ಳಿ ವೆಂಕಟೇಶ್‌, ಪದಾಧಿಕಾರಿಗಳಾದ ಶ್ರೀಧರ್‌ ಮೂರ್ತಿ, ಲಕ್ಷ್ಮಮ್ಮ ಮತ್ತಿತರರಿದ್ದರು. ಈ ವೇಳೆ ಮಾತನಾಡಿದ ಶಾಸಕ ಎಂ.ಕೃಷ್ಣಪ್ಪ, ಕ್ಷೇತ್ರವ್ಯಾಪ್ತಿಯಲ್ಲಿ 110 ಹಳ್ಳಿಗಳು ಸೇರಿದ್ದು ಕಾವೇರಿ ನೀರಿನ ಪೂರೈಕೆ ಸೇರಿದಂತೆ ಹಲವು ಮೂಲಭೂತ ಸೌಕರ್ಯಗಳನ್ನು ಕಲ್ಪಿಸಲಾಗಿದೆ. ಕ್ಷೇತ್ರದಲ್ಲಿ ಮತ್ತಷ್ಟು ಅಭಿವೃದ್ದಿಗೆ ಪಣತೊಡಲಾಗಿದ್ದು, ಹೀಗಾಗಿ ಕ್ಷೇತ್ರದ ಜನರು ಮತ್ತೆ ಗೆಲ್ಲಿಸಲಿದ್ದಾರೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next