Advertisement
ಬೆಂಗಳೂರು: ಉತ್ತರ ವಿಭಾಗ ಮತ್ತು ದಕ್ಷಿಣ ವಿಭಾಗ ಪೊಲೀಸರ ಕಾರ್ಯಾಚರಣೆಯಲ್ಲಿ ಬೈಕ್ ಕಳವು ಮತ್ತು ಮೊಬೈಲ್ ಸುಲಿಗೆ ಮಾಡುತ್ತಿದ್ದ ಮೂರು ಪ್ರತ್ಯೇಕ ಪ್ರಕರಣಗ ಳಲ್ಲಿ ಐವರು ಆರೋಪಿಗಳನ್ನು ಬಂಧಿಸಿದ್ದಾರೆ. 24 ದ್ವಿಚಕ್ರವಾಹನ ಗಳನ್ನು ವಶಕ್ಕೆ ಪಡೆಯಲಾಗಿದೆ.
Related Articles
Advertisement
ಆತನಿಂದ 8.5 ಲಕ್ಷ ರೂ. ಮೌಲ್ಯದ 13 ಬೈಕ್ ಹಾಗೂ 1 ಆಟೋರಿಕ್ಷಾವನ್ನು ವಶಕ್ಕೆ ಪಡೆಯಲಾಗಿದೆ. ಆತನ ಬಂಧನದಿಂದ ಚಂದ್ರಾ ಲೇಔಟ್, ಆಡುಗೋಡಿ, ಜ್ಞಾನಭಾರತಿ, ನಂದಿನಿ ಲೇಔಟ್, ಕಗ್ಗಲೀಪುರ ಠಾಣೆಗಳಲ್ಲಿ ದಾಖಲಾಗಿದ್ದ ಕಳವು ಪ್ರಕರಣಗಳು ಪತ್ತೆಯಾಗಿವೆ ಎಂದು ಪೊಲೀಸರು ಹೇಳಿದರು. ಠಾಣಾಧಿಕಾರಿ ವೆಂಕಟೇಗೌಡ ನೇತೃತ್ವದಲ್ಲಿ ಕಾರ್ಯಾಚರಣೆ ನಡೆದಿದೆ.
ಚಿನ್ನ ದ ಸರ ಸುಲಿಗೆಗೆ ಯತ್ನ :
ಬೆಂಗಳೂರು: ರಸ್ತೆಯಲ್ಲಿ ಮಹಿಳೆಯ ಚಿನ್ನದ ಸರ ಸುಲಿಗೆ ಮಾಡಲು ಪ್ರಯತ್ನಿಸಿದ ಆರೋಪದ ಮೇಲೆ ವ್ಯಕ್ತಿಯೊಬ್ಬನನ್ನು ಬಂಧಿಸಲಾಗಿದೆ. ನೀಲಸಂದ್ರದ ವಿಜಿತ್ (30) ಬಂಧಿತ ಆರೋಪಿ. ಈತನ ವಿರುದ್ಧ ನಗರದ ವಿವಿಧ ಠಾಣೆಗಳಲ್ಲಿ ಸುಲಿಗೆ ಹಾಗೂ ಕಳವು ಪ್ರಕರಣ ಗಳು ದಾಖಲಾಗಿವೆ.
ಇತ್ತೀಚೆಗೆ ಠಾಣೆ ವ್ಯಾಪ್ತಿಯಲ್ಲಿ ಮಹಿಳೆಯೊಬ್ಬರ ಸರ ಕಳವು ಮಾಡಲು ಯತ್ನಿಸಿದ್ದಾನೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡು ಆರೋಪಿ ಯನ್ನು ಬಂಧಿಸಲಾಗಿದೆ. ಆರೋಪಿಯಿಂದ 5.5 ಲಕ್ಷ ರೂ. ಮೌಲ್ಯದ 8 ವಿವಿಧ ಕಂಪನಿಯ ದ್ವಿಚಕ್ರ ವಾಹನಗಳು ಹಾಗೂ 8 ಮೊಬೈಲ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ.
ಆರೋಪಿಯ ಮಾಹಿತಿ ಮೆರೆಗೆ ಹೆಬ್ಟಾಳ ಪೊಲೀಸ್ ಠಾಣೆಯ 1 ಹಾಗೂ ಬಾಣಸವಾಡಿ ಪೊಲೀಸ್ ಠಾಣೆಯ 2 ಪ್ರಕರಣಗಳು ಪತ್ತೆಯಾಗಿವೆ ಎಂದು ಪೊಲೀಸರು ಹೇಳಿದರು. ಬಾಣಸವಾಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಚಾಕು ತೋರಿಸಿ ಬೈಕ್ ಕಸಿದಿದ್ದವರ ಸೆರೆ
ಬೆಂಗಳೂರು: ಮಾರಕಾಸ್ತ್ರಗಳನ್ನು ತೋರಿಸಿ ಸಾರ್ವಜನಿಕರ ಸುಲಿಗೆ ಮಾಡುತ್ತಿದ್ದ ಮೂವರು ಆರೋಪಿಗಳನ್ನು ಬಾಣಸವಾಡಿ ಪೊಲೀಸರು ಬಂಧಿಸಿದ್ದಾರೆ. ಠಾಣೆ ವ್ಯಾಪ್ತಿಯ ಜೈ ಭಾರತ್‌ನಗರ ಬಸ್ ನಿಲ್ದಾಣ ಸಮೀಪದಲ್ಲಿ ಇಬ್ಬರು ವ್ಯಕ್ತಿಗಳಿಗೆ ಮಾರಕಾಸ್ತ್ರ ತೋರಿಸಿ ಸುಲಿಗೆ ಮಾಡುತ್ತಿದ್ದ ಕಮ್ಮನಹಳ್ಳಿಯ ಪ್ರಕಾಶ್(32), ಬೈಯಪ್ಪನಹಳ್ಳಿಯ ರವೀಂದ್ರ(30) ಮತ್ತು ಸತ್ಯನಗರದ ವಿಜಯ್(29)ನನ್ನು ಬಂಧಿಸಲಾಗಿದೆ.
ಆರೋಪಿಗಳಿಂದ 1 ಲಕ್ಷ ರೂ. ಮೌಲ್ಯದ ವಿವಿಧ ಕಂಪನಿಯ 2 ಬೈಕ್ ಗಳು, 1 ಮೊಬೈಲ್ ಹಾಗೂ ಇತರೆ ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ. ಜುಲೈ 15ರಂದು ಬಾಣಸವಾಡಿ ವ್ಯಾಪ್ತಿಯ ಜೈಭಾರತ್ ನಗರ ಬಸ್ ನಿಲ್ದಾಣ ಮತ್ತು ಮುಕುಂದ ಚಿತ್ರಮಂದಿರದ ಬಳಿ ರಸ್ತೆಯಲ್ಲಿ ಈ ಮೂವರು ಆರೋಪಿಗಳು ಇಬ್ಬರನ್ನು ಅಡ್ಡಗಟ್ಟಿ ಚಾಕು ತೋರಿಸಿ, ಅವರಿಂದ 2 ದ್ವಿಚಕ್ರ ವಾಹನಗಳು ಮತ್ತು 1 ಮೊಬೈಲ್ ಗಳನ್ನು ಕಿತ್ತುಕೊಂಡು ಪರಾರಿಯಾಗಿದ್ದರು. ಈ ಸಂಬಂಧ ದೂರು ದಾಖಲಿಸಿಕೊಂಡು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿದರು.