ಬೆಂಗಳೂರು: ಪಶ್ಚಿಮ ವಿಭಾಗ ಪೊಲೀಸರ ಕಾರ್ಯಾಚರಣೆಯಲ್ಲಿ ಮನೆ ಕಳವು, ಮೊಬೈಲ್ ಸುಲಿಗೆ ಪ್ರಕರಣಗಳಿಗೆ ಸಂಬಂಧಿಸಿದಂತೆ 16 ಮಂದಿಯನ್ನು ಬಂಧಿಸಲಾಗಿದೆ.
ಆರೋಪಿಗಳಿಂದ 64.21 ಲಕ್ಷ ರೂ. ಮೌಲ್ಯದ 619 ಗ್ರಾಂ ಚಿನ್ನಾಭರಣ 30 ಗ್ರಾಂ ಬೆಳ್ಳಿ, 210 ಮೊಬೈಲ್‌ಗಳು, 9 ಬೈಕ್, 3 ಸೈಕಲ್, 2 ವಾಚ್‌ಗಳು ಹಾಗೂ ಒಂದು ಆಟೋ ವಶಕ್ಕೆ ಪಡೆಯಲಾಗಿದೆ. ಮಾಗಡಿ ರಸ್ತೆ ಠಾಣೆ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದು, 18.75 ಲಕ್ಷ ರೂ. ಮೌಲ್ಯದ ಚಿನ್ನಾಭರಣ ವಶಕ್ಕೆ ಪಡೆಯಲಾಗಿದೆ.
ಗೋವಿಂದರಾಜನಗರ ಠಾಣೆ ಪೊಲೀಸರಿಂದ ಪ್ರಾವಿಜನ್ ಸ್ಟೋರ್‌ಗಳಲ್ಲಿ ಕಳವು ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ. ಹಾಗೇಯೆ ಮತ್ತೂಂದು ಪ್ರಕರಣದಲ್ಲಿ ಚಿನ್ನಾಭರಣ ಕಳವು ಮಾಡುತ್ತಿದ್ದ ಇಬ್ಬರನ್ನು ಬಂಧಿಸಲಾಗಿದೆ.
11.75 ಲಕ್ಷ ರೂ. ಮೌಲ್ಯದ ಚಿನ್ನಾಭರಣ ವಶಕ್ಕೆ ಪಡೆಯಲಾಗಿದೆ. ಕಾಮಾಕ್ಷಿಪಾಳ್ಯ ಠಾಣೆ ಪೊಲೀಸರಿಂದ ದರೋಡೆ, ಬೈಕ್ ಕಳವು ಹಾಗೂ ಸುಲಿಗೆ ಮಾಡುತ್ತಿದ್ದ ಐವರು ಆರೋಪಿಗಳನ್ನು ಬಂಧಿಸಲಾಗಿದೆ. ಅವರಿಂದ 3.50 ಲಕ್ಷ ರೂ. ಮೌಲ್ಯದ ಮೊಬೈಲ್, ಚಿನ್ನಾಭರಣ, ಆಟೋ ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸರು ಹೇಳಿದರು. ವಿಜಯನಗರ ಪೊಲೀಸರಿಂದ ಬೈಕ್ ಕಳವು, ಮೊಬೈಲ್ ಸುಲಿಗೆ ಮಾಡುತ್ತಿದ್ದ ನಾಲ್ವರು ಆರೋಪಿ ಗಳನ್ನು ಬಂಧಿಸಲಾಗಿದೆ.
Related Articles
ಆರೋಪಿಗಳಿಂದ 30 ಲಕ್ಷ ರೂ.ಮೌಲ್ಯದ 2 ಬೈಕ್, 1 ಆಟೋ, 204 ಮೊಬೈಲ್ ವಶಕ್ಕೆ ಪಡೆಯಲಾಗಿದೆ ಎಂದು ಪೊಲೀ ಸರು ಹೇಳಿದರು. ಸುದ್ದಿಗೋಷ್ಠಿಯಲ್ಲಿ ಪಶ್ಚಿಮ ವಿಭಾಗ ಹೆಚ್ಚುವರಿ ಪೊಲೀಸ್ ಆಯುಕ್ತ ಸಂದೀಪ್ ಪಾಟೀಲ್, ಡಿಸಿಪಿ ಲಕ್ಷ್ಮಣ್ ನಿಂಬರಗಿ ಹಾಗೂ ಇತರೆ ಅಧಿಕಾರಿಗಳು ಇದ್ದರು.