Advertisement
ಹೈದರಬಾದ್‌ನ ಜ್ಯುಬಿಲಿ ಹಿಲ್ಸ್ ಪೊಲೀಸ್ ಠಾಣೆಯಲ್ಲಿ ಕೆ. ಶಶಿಧರ್ ರೆಡ್ಡಿ ಎಂಬು ವರು 2023ರ ಫೆ. 15ರಂದು ನೀಡಿದ್ದ ದೂರಿನ ಬಗ್ಗೆ ತನಿಖೆ ನಡೆಸಿದ್ದ ಪೊಲೀಸರು 2024ರ ಮಾ.22ರಂದು ಮೈಲಾರಪ್ಪ ಸೇರಿದಂತೆ ಪ್ರಕರಣದ ಇತರ ಆರೋ ಪಿಗಳಾದ ಕೊರಟಗೆರೆ ಕೃಷ್ಣಪ್ರಸಾದ್, ಆರ್. ಜಗನ್ನಾಥ್, ಸುರೇಂದರ್ ರೆಡ್ಡಿ ಅವರನ್ನು ಬಂಧಿಸಿದ್ದರು. 14 ದಿನಗಳ ನ್ಯಾಯಾಂಗ ಬಂಧನದ ಬಳಿಕ ಹೈದರಾಬಾದ್‌ನ ಚೀಫ್ ಮೆಟ್ರೋಪಾಲಿಟನ್ ನ್ಯಾಯಾಲಯವು ಏ. 4 ರಂದು ಮೈಲಾರಪ್ಪ ಅವರನ್ನು ಬಿಡುಗಡೆ ಮಾಡಿದೆ.
Related Articles
Advertisement
ಆ ಬಳಿಕ ಶಶಿಧರ್ ರೆಡ್ಡಿ ಅನ್ಯ ಮೂಲಗಳ ಮೂಲಕ ಜಮೀನಿನ ಹಿನ್ನೆಲೆಯನ್ನು ಪತ್ತೆಹಚ್ಚಿದ್ದಾಗ ಈ ಜಮೀನು ಕೃಷ್ಣಪ್ರಸಾದ್ ಅವರ ತಂದೆಗೆ ಮತ್ತು ಕೃಷ್ಣಪ್ರಸಾದ್‌ಗೆ ಸೇರಿಯೇ ಇಲ್ಲ ಎಂದು ತಿಳಿದುಬಂದಿತ್ತು. ತಕ್ಷಣ ಶಶಿಧರ್ ರೆಡ್ಡಿ ತಾನು ನೀಡಿರುವ ಮುಂಗಡವನ್ನು ವಾಪಸ್ ನೀಡುವಂತೆ ಒತ್ತಡ ಹೇರಿದಾಗ ಮೈಲಾರಪ್ಪ ಕರೆ ಮಾಡಿ ತನಗೆ ಸರ್ಕಾರದ ಮಟ್ಟದಲ್ಲಿ ಉತ್ತಮ ಸಂಪರ್ಕವಿದೆ, ಹಣಕ್ಕಾಗಿ ಆರೋಪಿಗಳ ಮೇಲೆ ಒತ್ತಡ ಹೇರಬೇಡಿ ಎಂದು ಬೆದರಿಕೆ ಹಾಕಿದ್ದರು. ಆ ಬಳಿಕ ಈ ಜಮೀನನ್ನು ಸರ್ಕಾರವು ವೈಎಎಸ್ ಚಾರಿಟಬಲ್ ಟ್ರಸ್ಟ್ ಮತ್ತು ಕೊಡವ ಸಮಾಜಕ್ಕೆ ಹಂಚಿಕೆ ಮಾಡಿರುವುದು ಶಶಿಧರ್ ರೆಡ್ಡಿ ಗಮನಕ್ಕೆ ಬಂದಿತ್ತು. ಈ ಹಿನ್ನೆಲೆಯಲ್ಲಿ ಹಣವನ್ನು ವಾಪಸ್ ನೀಡುವಂತೆ ಕೇಳಿದಾಗ ಬೆದರಿಕೆ ಮತ್ತು ನಿರ್ಲಕ್ಷ್ಯ ತೋರಿದ್ದಾರೆ ಎಂದು ವರದಿಯಲ್ಲಿ ಹೇಳಲಾಗಿದೆ.
ಮಾಹಿತಿ ಕೇಳಿರುವ ಉನ್ನತ ಶಿಕ್ಷಣ ಇಲಾಖೆ :
ಮೈಲಾರಪ್ಪ ಅವರ ಮೇಲೆ ಆರೋಪ ದಾಖಲಾಗಿ ನ್ಯಾಯಾಂಗ ಬಂಧನಕ್ಕೆ ಒಳಗಾಗಿದ್ದರೂ ತನಗೆ ಈ ಬಗ್ಗೆ ಮಾಹಿತಿ ನೀಡದಿರುವ ಬೆಂಗಳೂರು ವಿವಿಯ ಕುಲಪತಿ ಕ್ರಮದ ಬಗ್ಗೆ ಉನ್ನತ ಶಿಕ್ಷಣ ಇಲಾಖೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. ಪ್ರಕರಣವನ್ನು ಪರಿಶೀಲಿಸಿ ಮಾಹಿತಿ ನೀಡುವಂತೆ ಇಲಾಖೆ ಸೂಚಿಸಿದೆ. ಈ ಮಧ್ಯೆ ವಿವಿಯ ಕುಲಪತಿ ಜಯಕರ್ ಎಸ್. ಎಂ. ಅವರನ್ನು ಪ್ರತಿಕ್ರಿಯೆಗಾಗಿ “ಉದಯವಾಣಿ’ ನಿರಂತರವಾಗಿ ಸಂಪರ್ಕಿಸಿದರೂ ಅವರು ಕರೆ ಸ್ವೀಕರಿಸಲಿಲ್ಲ.