Advertisement

ಬೆಂಗಳೂರು-ಹೈದರಾಬಾದ್ ಬಿಗ್ ಫೈಟ್: ಟಾಸ್ ಗೆದ್ದ ವಾರ್ನರ್ ಪಡೆ ಬೌಲಿಂಗ್ ಆಯ್ಕೆ

07:09 PM Oct 31, 2020 | Mithun PG |

ಶಾರ್ಜಾ: ಪ್ಲೇ ಆಫ್ ಸ್ಥಾನದ ಮೇಲೆ ಕಣ್ಣಿಟ್ಟ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಗೆಲ್ಲಲೇಬೇಕಾದ ಒತ್ತಡದಲ್ಲಿರುವ ಸನ್ ರೈಸರ್ಸ್ ಹೈದರಾಬಾದ್ ತಂಡಗಳು ಐಪಿಎಲ್ 13 ನೇ ಆವೃತ್ತಿಯ 52ನೇ ಪಂದ್ಯದಲ್ಲಿ ಮುಖಾಮುಖಿಯಾಗುತ್ತಿದೆ.

Advertisement

ಈಗಾಗಲೇ ಟಾಸ್ ಗೆದ್ದಿರುವ ವಾರ್ನರ್ ಪಡೆ ಬೌಲಿಂಗ್ ಆಯ್ದುಕೊಂಡಿದೆ.

ರಾಯಲ್ ಚಾಲೆಂಜರ್ಸ್ ಬೆಂಗಳೂರು 3 ವರ್ಷಗಳ ಬಳಿಕ ಫ್ಲೇ ಆಫ್ ಗೇರುವ ಲಕ್ಷಣ ಕಾಣುತ್ತಿದ್ದು, ತಂಡದ ಕನಸು ನನಸಾಗಬೇಕಿದ್ದರೇ ಇಂದಿನ ಪಂದ್ಯದಲ್ಲಿ ಜಯಗಳಿಸಬೇಕಾಗಿದೆ. 12 ಪಂದ್ಯಗಳಿಂದ 14 ಅಂಕ ಗಳಿಸಿರುವ ಆರ್ ಸಿಬಿ ಈ ಪಂದ್ಯದಲ್ಲಿ ಗೆದ್ದರೇ ಫ್ಲೇ ಆಫ್ ಸ್ಥಾನ ಖಚಿತವಾಗಲಿದೆ. ಒಂದೊಮ್ಮೆ ಸೋತರೂ ತಂಡಕ್ಕೆ ಮತ್ತೊಂದು ಅವಕಾಶವಿದೆ.

ಮತ್ತೊಂದೆಡೆ ವಾರ್ನರ್ ನೇತೃತ್ವದ ಸನ್ ರೈಸರ್ಸ್ ಹೈದರಾಬಾದ್ ತಂಡಕ್ಕೆ ಇದು ಮಾಡು ಇಲ್ಲವೇ ಮಡಿ ಪಂದ್ಯವಾಗಿದ್ದು, ಸೋತರೆ ಫ್ಲೇ ಆಫ್ ರೇಸ್ ನಿಂದ ಹೊರಬೀಳಲಿದೆ.

ಹನ್ನೊಂದರ ಬಳಗ:

Advertisement

ರಾಯಲ್ ಚಾಲೆಂಜರ್ಸ್ ಬೆಂಗಳೂರು: ಜೋಶ್ ಫಿಲಿಪ್, ದೇವದತ್ ಪಡಿಕ್ಕಲ್, ವಿರಾಟ್ ಕೊಹ್ಲಿ (ನಾಯಕ), ಎಬಿ ಡಿವಿಲಿಯರ್ಸ್ , ಗುರ್ಕೀರತ್ ಸಿಂಗ್ ಮನ್, ವಾಷಿಂಗ್ಟನ್ ಸುಂದರ್, ಕ್ರಿಸ್ ಮೋರಿಸ್, ಇಸುರು ಉಡಾನಾ, ಮೊಹಮ್ಮದ್ ಸಿರಾಜ್, ನವದೀಪ್ ಸೈನಿ, ಯುಜುವೇಂದ್ರ ಚಹಲ್

ಸನ್‌ರೈಸರ್ಸ್ ಹೈದರಾಬಾದ್: ಡೇವಿಡ್ ವಾರ್ನರ್ (ನಾಯಕ), ವೃದ್ಧಿಮಾನ್ ಸಹಾ, ಮನೀಶ್ ಪಾಂಡೆ, ಕೇನ್ ವಿಲಿಯಮ್ಸನ್, ಅಬ್ದುಲ್ ಸಮದ್, ಜೇಸನ್ ಹೋಲ್ಡರ್, ಅಭಿಷೇಕ್ ಶರ್ಮಾ, ರಶೀದ್ ಖಾನ್, ಶಹಬಾಜ್ ನದೀಮ್, ಸಂದೀಪ್ ಶರ್ಮಾ, ಟಿ ನಟರಾಜನ್

Advertisement

Udayavani is now on Telegram. Click here to join our channel and stay updated with the latest news.

Next