Advertisement

Arrestted:10 ವರ್ಷಗಳಿಂದ ನಗರದಲಿದ್ಲ ಬಾಂಗ್ಲಾದೇಶ ಪ್ರಜೆ ಬಂಧನ

09:53 AM Oct 29, 2024 | Team Udayavani |

ಬೆಂಗಳೂರು: ನಗರದಲ್ಲಿ 10 ವರ್ಷಗಳಿಂದ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ದೇಶದ ಪ್ರಜೆಯನ್ನು ಕಾಡುಗೋಡಿ ಠಾಣೆ ಪೊಲೀಸರು ಬಂಧಿಸಿದ್ದಾರೆ.

Advertisement

ಕಾಡುಗೋಡಿ ಸಮೀಪದ ಚಿಕ್ಕನಹಳ್ಳಿ ನಿವಾಸಿ ರಂಜಾನ್‌ ಶೇಕ್‌ (38) ಬಂಧಿತ. 13 ವರ್ಷಗಳ ಹಿಂದೆ ಬಾಂಗ್ಲಾದೇಶದಿಂದ ಭಾರತಕ್ಕೆ ಬಂದಿದ್ದ ರಂಜಾಕ್‌ ಶೇಕ್‌, ಪಶ್ಚಿಮ ಬಂಗಾಳದಲ್ಲಿ ಜನಿಸಿರುವುದಾಗಿ ನಕಲಿ ಜನನ ಪ್ರಮಾಣ ಪತ್ರ, ಆಧಾರ್‌ ಕಾರ್ಡ್‌, ಮತದಾರರ ಗುರುತಿನ ಚೀಟಿ ಸೇರಿ ಹಲವು ನಕಲಿ ದಾಖಲೆಗಳನ್ನು ಸೃಷ್ಟಿಸಿಕೊಂಡು, ಬಳಿಕ 10 ವರ್ಷಗಳ ಹಿಂದೆ ನಗರಕ್ಕೆ ಬಂದು ಅಕ್ರಮವಾಗಿ ನೆಲೆಸಿದ್ದ. ರಾಜ್ಯ ಗುಪ್ತಚರ ವಿಭಾಗದ ಮಾಹಿತಿ ಆಧರಿಸಿ ಕಾರ್ಯಾ ಚರಣೆ ನಡೆಸಿ ಆರೋಪಿಯನ್ನು ಬಂಧಿಸಿದ್ದು, ನಕಲಿ ದಾಖಲೆಗಳನ್ನು ಜಪ್ತಿ ಮಾಡಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದರು.

ಆರೋಪಿ ರಂಜಾನ್‌ ಶೇಕ್‌ ಈ ಹಿಂದೆ ಬಾಂಗ್ಲ ದೇಶದಲ್ಲಿ ಯುವತಿಯನ್ನು ಮದುವೆಯಾಗಿದ್ದು, ಬಳಿಕ ಆಕೆಯನ್ನು ಅಲ್ಲಿಯೇ ಬಿಟ್ಟು ಅಕ್ರಮವಾಗಿ ಭಾರತಕ್ಕೆ ಬಂದಿದ್ದಾನೆ. ಈ ಸಂಬಂಧ ಆತನ ಪತ್ನಿ ಬಾಂಗ್ಲಾದೇಶದಲ್ಲಿ ನಾಪತ್ತೆ ಪ್ರಕರಣ ದಾಖಲಿಸಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದರು.

ಗುಜರಿ ವ್ಯಾಪಾರ: ಆರೋಪಿ ಅಕ್ರಮವಾಗಿ ಭಾರತಕ್ಕೆ ಬಂದು ನಕಲಿ ದಾಖಲೆಗಳನ್ನು ಸೃಷ್ಟಿಸಿ ಕೊಂಡು ಮತ್ತೂಂದು ಯುವತಿಯನ್ನು ಮದುವೆ ಯಾಗಿ ಬೆಂಗಳೂರಿನ ಚಿಕ್ಕನ ಹಳ್ಳಿಯಲ್ಲಿ ವಾಸವಾಗಿದ್ದ. ಜೀವನ ನಿರ್ವಹಣೆಗಾಗಿ ಗುಜರಿ ವ್ಯಾಪಾರ ಮಾಡಿಕೊಂಡಿದ್ದ. ಈ ಹಿಂದೆ ಕಾರ್ಮಿಕ ನೊಬ್ಬನ ಆತ್ಮಹತ್ಯೆ ಪ್ರಕರಣ ಸಂಬಂಧ ಈತನನ್ನು ಬಂಧಿಸಲಾಗಿತ್ತು. ಬಳಿಕ ಆರೋಪಿ ಜೈಲಿನಿಂದ ಬಿಡುಗಡೆ ಗೊಂಡಿದ್ದ ಎಂಬುದು ವಿಚಾರಣೆಯಿಂದ ಗೊತ್ತಾಗಿದೆ. ಇನ್ನು ಆರೋಪಿ ರಂಜಾನ್‌ ಶೇಕ್‌ ಮದುವೆಯಾಗಿರುವ ಈತನ ಪತ್ನಿ ಬಾಂಗ್ಲಾ ಪ್ರಜೆಯೇ ಅಥವಾ ಭಾರತೀಯ ಪ್ರಜೆಯೇ ಎಂಬುದು ಹೆಚ್ಚಿನ ತನಿಖೆಯಿಂದ ತಿಳಿದು ಬರಬೇಕಿದೆ. ಸದ್ಯಕ್ಕೆ ಆರೋಪಿ ರಂಜಾನ್‌ ಶೇಕ್‌ನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿ 3 ದಿನಗಳ ಕಾಲ ಕಸ್ಟಡಿಗೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ ಎಂದು ಪೊಲೀಸರು ಮಾಹಿತಿ ನೀಡಿದರು. ಘಟನೆ ಸಂಬಂಧ ಕಾಡುಗೋಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next