Advertisement

Bangla crisis: ಜವಳಿ ಕ್ಷೇತ್ರಕ್ಕೆ ತೆರಿಗೆ ವಿನಾಯ್ತಿ?

08:48 PM Jan 14, 2025 | Team Udayavani |

ನವದೆಹಲಿ: ಜವಳಿ ಉದ್ಯಮಕ್ಕೆ ಹೆಸರುವಾಸಿಯಾಗಿರುವ ಬಾಂಗ್ಲಾದೇಶದಲ್ಲಿ ರಾಜಕೀಯ ಬಿಕ್ಕಟ್ಟಿನಿಂದಾಗಿ ಜಗತ್ತಿನ ಇತರ ದೇಶಗಳು ಪರ್ಯಾಯ ಮಾರುಕಟ್ಟೆಯ ಶೋಧದಲ್ಲಿ ತೊಡಗಿವೆ. ಈ ಸಮಯವನ್ನು ಸದ್ಬಳಕೆ ಮಾಡಿಕೊಳ್ಳಲು ನಿರ್ಧರಿಸಿರುವ ಕೇಂದ್ರ ಸರ್ಕಾರ, ದೇಶೀಯ ಜವಳಿ ಮಾರುಕಟ್ಟೆಗೆ ಹೆಚ್ಚಿನ ಆರ್ಥಿಕ ನೆರವು, ತೆರಿಗೆ ಪ್ರಮಾಣ ಇಳಿಕೆಗೆ ಚಿಂತನೆ ನಡೆಸಿದೆ ಎನ್ನಲಾಗಿದೆ. ಅದರಂತೆ, ಫೆ.1ರಂದು ವಿತ್ತ ಸಚಿವೆ ಮಂಡಿಸಲಿರುವ ಬಜೆಟ್‌ನಲ್ಲಿ ಜವಳಿ ಕ್ಷೇತ್ರಕ್ಕೆ ಹೆಚ್ಚಿನ ಉತ್ತೇಜನ ನೀಡುವ ಸಾಧ್ಯತೆ ಇದೆ.

Advertisement

ಬಜೆಟ್‌ನಲ್ಲಿ ಜವಳಿ ಕ್ಷೇತ್ರಕ್ಕೆ ಶೇ.10ರಿಂದ ಶೇ.15ರಷ್ಟು ಮೊತ್ತವನ್ನು ಹೆಚ್ಚುವರಿಯಾಗಿ ಮೀಸಲಿಡುವ ಸಾಧ್ಯತೆಗಳು ಇವೆ. ಉತ್ಪಾದನೆ ಆಧಾರಿತ ಪ್ರೋತ್ಸಾಹಧನದ ಮೊತ್ತವನ್ನು 45 ಕೋಟಿ ರೂ.ಗಳಿಂದ 60 ಕೋಟಿ ರೂ.ಗೆ ಹೆಚ್ಚಿಸುವ ಸಾಧ್ಯತೆಗಳಿವೆ. ಕಳೆದ ವರ್ಷ 4,417 ಕೋಟಿ ರೂ.ಗಳನ್ನು ಜವಳಿ ಕ್ಷೇತ್ರಕ್ಕೆ ಮೀಸಲಿಡಲಾಗಿತ್ತು.

ಜವಳಿ ಉದ್ಯಮಕ್ಕೆ ಪ್ರಸಿದ್ಧವಾಗಿದ್ದ ಬಾಂಗ್ಲಾದೇಶದಲ್ಲಿ ರಾಜಕೀಯ ಬಿಕ್ಕಟ್ಟು ಶುರುವಾದ ಬಳಿಕ ನವೆಂಬರ್‌ನಿಂದ ಜನವರಿ ಅವಧಿಯಲ್ಲಿ ಅಲ್ಲಿಂದ ಅಮೆರಿಕಕ್ಕೆ ರಫ್ತಾಗುತ್ತಿದ್ದ ಉಡುಪುಗಳ ಪ್ರಮಾಣ ಶೇ.0.46ಕ್ಕೆ ಇಳಿಕೆಯಾಗಿದೆ.  ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಉಡುಪು ರಫ್ತು ಉತ್ತೇಜನಾ ಮಂಡಳಿ (ಎಪಿಇಸಿ)ಯ ಪ್ರಧಾನ ಕಾರ್ಯದರ್ಶಿ ಮಿಥಿಲೇಶ್ವರ್‌ ಠಾಕೂರ್‌, “ಅಮೆರಿಕದ ಗ್ರಾಹಕರಿಂದ ಭಾರತದ ಜವಳಿ ಕಂಪನಿಗಳಿಗೆ ಹೆಚ್ಚಿನ ಬೇಡಿಕೆ ಬರುತ್ತಿವೆ’ ಎಂದು ಹೇಳಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.