Advertisement

ಚಿಕಿತ್ಸೆಗೆಂದು ಭಾರತಕ್ಕೆ ಬಂದು ನಾಪತ್ತೆಯಾಗಿದ್ದ ಬಾಂಗ್ಲಾದೇಶದ ಸಂಸದ ಶವವಾಗಿ ಪತ್ತೆ

05:52 PM May 22, 2024 | Team Udayavani |

ನವದೆಹಲಿ: ಚಿಕಿತ್ಸೆಗಾಗಿ ಭಾರತಕ್ಕೆ ಬಂದು ಕಳೆದ 8 ದಿನಗಳಿಂದ ನಾಪತ್ತೆಯಾಗಿದ್ದ ಬಾಂಗ್ಲಾದೇಶದ ಸಂಸದ ಅನ್ವರುಲ್ ಅಜೀಮ್ ಅವರ ಮೃತದೇಹ ಕೋಲ್ಕತಾದ ಫ್ಲಾಟ್ ವೊಂದರಲ್ಲಿ ಪತ್ತೆಯಾಗಿರುವುದಾಗಿ ವರದಿಯಾಗಿದೆ.

Advertisement

ಆಡಳಿತಾರೂಢ ಅವಾಮಿ ಲೀಗ್‌ನ 3 ಬಾರಿ ಸಂಸದರಾಗಿದ್ದ ಅಜೀಮ್ ಕಳೆದ ಕೆಲ ದಿನಗಳ ಹಿಂದೆ ಚಿಕಿತ್ಸೆಗಾಗಿ ಭಾರತಕ್ಕೆ ಬಂದಿದ್ದರು ಆದರೆ ಈ ವೇಳೆ ಏಕಾಏಕಿ ನಾಪತ್ತೆಯಾಗಿದ್ದರು ಇದೀಗ ಅವರ ಮೃತದೇಹ ಪತ್ತೆಯಾಗಿದ್ದು ಇದೊಂದು ಕೊಲೆ ಎಂದು ಶಂಕೆ ವ್ಯಕ್ತವಾಗಿದ್ದು ಪೊಲೀಸರು ಇಡೀ ಘಟನೆಯ ತನಿಖೆ ಆರಂಭಿಸಿದ್ದಾರೆ.

ಈ ಘಟನೆಯಿಂದಾಗಿ ಉಭಯ ದೇಶಗಳ ರಾಜತಾಂತ್ರಿಕ ವಲಯದಲ್ಲಿ ಸಂಚಲನ ಶುರುವಾಗಿದೆ.

ಅಜೀಮ್ ಚಿಕಿತ್ಸೆಗಾಗಿ ಮೇ 12ರಂದು ಕೋಲ್ಕತ್ತಾಗೆ ಬಂದು ಬಾರಾನಗರದಲ್ಲಿರುವ ಅವರ ಸ್ನೇಹಿತನ ಮನೆಯಲ್ಲಿ ಉಳಿದುಕೊಂಡಿದ್ದರು ಆದರೆ ಮೇ 13ರಂದು ಮನೆಯಿಂದ ಹೊರ ಹೋದವರು ಮತ್ತೆ ಮರಳಿ ಬರಲಿಲ್ಲ ಇದರಿಂದ ಗಾಬರಿಗೊಂಡ ಸ್ನೇಹಿತ ಅವರ ಮೊಬೈಲ್ ಗೆ ಕರೆ ಮಾಡಿದ್ದಾರೆ ಆದರೆ ಮೊಬೈಲ್ ಸ್ವಿಚ್ ಆಫ್ ಆಗಿತ್ತು ಇದರಿಂದ ಭಯಗೊಂಡ ಸ್ನೇಹಿತ ಪೊಲೀಸ್ ಠಾಣೆಗೆ ದೂರು ನೀಡಿದ್ದಾನೆ ಅಲ್ಲದೆ ಈ ನಡುವೆ ಕುಟುಂಬದೊಂದಿಗೂ ಯಾವುದೇ ಸಂಪರ್ಕವಿರಲಿಲ್ಲ ಎನ್ನಲಾಗಿದೆ. ಪೊಲೀಸ್ ಮೂಲಗಳ ಪ್ರಕಾರ, ಅಜೀಮ್ ಅವರ ಮೊಬೈಲ್ ಟವರ್ ಲೊಕೇಶನ್ ಕೊನೆಯದಾಗಿ ಉತ್ತರ ಪ್ರದೇಶದಲ್ಲಿ ಪತ್ತೆಯಾಗಿತ್ತು. ಆದರೆ, ಅವರನ್ನು ಸಂಪರ್ಕಿಸಲು ಸಾಧ್ಯವಾಗದ ಹಿನ್ನೆಲೆಯಲ್ಲಿ ಅನ್ವರುಲ್ ಕುಟುಂಬ ಬಾಂಗ್ಲಾ ಪ್ರಧಾನಿ ಶೇಖ್ ಹಸೀನಾ ಅವರನ್ನು ಸಂಪರ್ಕಿಸಿದೆ. ಅಲ್ಲಿಂದ ದೆಹಲಿ ಮತ್ತು ಕೋಲ್ಕತ್ತಾದಲ್ಲಿರುವ ಬಾಂಗ್ಲಾದೇಶ ರಾಯಭಾರಿ ಕಚೇರಿಗಳೊಂದಿಗೆ ಪ್ರಧಾನಿ ಕಾರ್ಯಾಲಯ ಸಂವಹನ ನಡೆಸಿತು. ಬಾಂಗ್ಲಾದೇಶ ರಾಯಭಾರ ಕಚೇರಿ ಮತ್ತು ಬಿಧಾನನಗರ ಪೊಲೀಸರು ಸಂಸದರ ಪತ್ತೆಗೆ ತನಿಖೆ ಆರಂಭಿಸಿದ್ದಾರೆ. ತನಿಖೆಯ ವೇಳೆ ಪೊಲೀಸರು ಹಲವರನ್ನು ವಿಚಾರಣೆಗೆ ಒಳಪಡಿಸಿದ್ದಾರೆ.

ಈ ನಡುವೆ ಅವರ ಮೃತದೇಹ ಕೋಲ್ಕತ್ತಾದ ನ್ಯೂಟೌನ್ ಪ್ರದೇಶದಲ್ಲಿರುವ ಫ್ಲಾಟ್ ಒಂದರಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಸದ್ಯ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಇದೊಂದು ಪೂರ್ವ ಯೋಜಿತ ಕೃತ್ಯ ಇರಬಹುದು ಎನ್ನಲಾಗಿದ್ದು ತನಿಖೆ ಆರಂಭಿಸಿದ್ದಾರೆ.

Advertisement

ಇದನ್ನೂ ಓದಿ: Thirthahalli ತಾಲೂಕುಆಸ್ಪತ್ರೆ ಪಕ್ಕದ ಜನೌಷಧಿ ಕೇಂದ್ರ ಬಾಗಿಲು ಬಂದ್​:ರೋಗಿಗಳ ತೀವ್ರ ಪರದಾಟ

Advertisement

Udayavani is now on Telegram. Click here to join our channel and stay updated with the latest news.

Next