Advertisement

ಬಾಂಗ್ಲಾದೇಶದ ಪ್ರಧಾನಿ ಶೇಖ್ ಹಸೀನಾ ಭಾರತ ಪ್ರವಾಸ

07:36 PM Sep 01, 2022 | Team Udayavani |

ನವದೆಹಲಿ: ಬಾಂಗ್ಲಾದೇಶದ ಪ್ರಧಾನಿ ಶೇಖ್ ಹಸೀನಾ ಅವರು ಸೆಪ್ಟೆಂಬರ್ 5 ರಿಂದ 8 ರವರೆಗೆ ಭಾರತಕ್ಕೆ ಭೇಟಿ ನೀಡಲಿದ್ದು, ಒಟ್ಟಾರೆ ದ್ವಿಪಕ್ಷೀಯ ಬಾಂಧವ್ಯವನ್ನು ಬಲಪಡಿಸುವತ್ತ ಗಮನ ಹರಿಸಲಿದ್ದಾರೆ.

Advertisement

ಭೇಟಿಯನ್ನು ಪ್ರಕಟಿಸಿದ ವಿದೇಶಾಂಗ ವ್ಯವಹಾರಗಳ ಸಚಿವಾಲಯ, ಹಸೀನಾ ಅವರು ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಮಾತುಕತೆ ನಡೆಸಲಿದ್ದಾರೆ ಎಂದು ತಿಳಿಸಿದೆ.

ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು ಮತ್ತು ಉಪರಾಷ್ಟ್ರಪತಿ ಜಗದೀಪ್ ಧನ್ಕರ್ ಅವರನ್ನು ಭೇಟಿಯಾಗಲಿದ್ದಾರೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ತಿಳಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next