Advertisement

ಹಿಂದೂಗಳ ವಿರುದ್ಧ ದ್ವೇಷ: ದೇವಾಲಯ ಧ್ವಂಸ, ಬಾಂಗ್ಲಾ ಪೊಲೀಸರಿಂದ 450 ಮಂದಿ ಬಂಧನ

03:54 PM Oct 19, 2021 | Team Udayavani |

ಢಾಕಾ: ಹಿಂದೂಗಳು ಹಾಗೂ ಹಿಂದೂ ದೇವಾಲಯಗಳನ್ನು ಗುರಿಯಾಗಿರಿಸಿಕೊಂಡು ದಾಳಿ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಂಗ್ಲಾದೇಶ ಪೊಲೀಸರು ಸುಮಾರು 450 ಮಂದಿಯನ್ನು ಮಂಗಳವಾರ (ಅಕ್ಟೋಬರ್ 19) ಬಂಧಿಸಿರುವುದಾಗಿ ತಿಳಿಸಿದ್ದಾರೆ.

Advertisement

ಇದನ್ನೂ ಓದಿ:ಬಾಲಿವುಡ್ ನಟಿ ಯುವಿಕಾ ಚೌಧರಿಗೆ ಮಧ್ಯಂತರ ಜಾಮೀನು ಮಂಜೂರು

ಕೋಮು ಘರ್ಷಣೆಯಲ್ಲಿ ಆರು ಮಂದಿ ಸಾವನ್ನಪ್ಪಿದ್ದು, ಉದ್ರಿಕ್ತ ಗುಂಪನ್ನು ನಿಯಂತ್ರಿಸಲು ಪೊಲೀಸರು ಹರಸಾಹಸ ಪಡುತ್ತಿರುವುದಾಗು ಸ್ಥಳೀಯ ಮಾಧ್ಯಮ ವರದಿ ಮಾಡಿದೆ. ಹಿಂದೂಗಳು ಕುರಾನ್ ಅನ್ನು ಅಪವಿತ್ರಗೊಳಿಸಿದ್ದಾರೆಂದು ಆರೋಪಿಸಿ ನೋಖಾಲಿ ಜಿಲ್ಲೆಯಲ್ಲಿ ನೂರಾರು ಮುಸ್ಲಿಮರು ಪ್ರತಿಭಟನೆ ನಡೆಸಿದ ನಂತರ ಹಿಂಸಾಚಾರ ಭುಗಿಲೆದ್ದಿತ್ತು.

ಉದ್ರಿಕ್ತ ಮುಸ್ಲಿಮರ ಗುಂಪು ಬಾಂಗ್ಲಾದೇಶದ ಹಲವೆಡೆ ಹಿಂದೂ ದೇವಾಲಯ, ನವರಾತ್ರಿ ಪೆಂಡಾಲ್ ಮೇಲೆ ದಾಳಿ ನಡೆಸಿ ಧ್ವಂಸಗೊಳಿಸಿತ್ತು. ದುರ್ಗಾ ಪೂಜೆ ವೇಳೆ ಸಂಭವಿಸಿದ ಹಿಂಸಾಚಾರ ಪ್ರಕರಣದಲ್ಲಿ ಪೊಲೀಸ್ ಅಧಿಕಾರಿಗಳು 71 ಮಂದಿ ವಿರುದ್ಧ ಎಫ್ ಐಆರ್ ದಾಖಲಿಸಿದ್ದಾರೆ.

ಇದೀಗ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಶಂಕಿತ 450 ಆರೋಪಿಗಳನ್ನು ಬಂಧಿಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಬಾಂಗ್ಲಾದೇಶದಲ್ಲಿ ಕೆಲವು ದಿನಗಳಿಂದ ಕೋಮು ದಳ್ಳುರಿ ಭುಗಿಲೆದ್ದಿದ್ದು, ಹಲವಾರು ಹಿಂದೂ ಮನೆಗಳಿಗೆ ಬೆಂಕಿಹಚ್ಚಿ ಸುಟ್ಟು ಹಾಕಲಾಗಿದೆ ಎಂದು ವರದಿ ತಿಳಿಸಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next