Advertisement
ಬಾಂಗ್ಲಾದೇಶದ ಸುದ್ದಿ ಸಂಸ್ಥೆಯ ಮಾಹಿತಿ ಪ್ರಕಾರ, ಚಿತ್ತಗಾಂಗ್ನಲ್ಲಿ ನಡೆದ ಘರ್ಷಣೆಗೆ ಸಂಬಂಧಿಸಿ ಹೆಫಾಜತ್-ಎ-ಇಸ್ಲಾಂ ಕಾರ್ಯಕರ್ತ ಎನಾಮುಲ್ ಹಕ್ ಅವರು ದಾಖಲಿಸಿದ ಪ್ರಕರಣದಲ್ಲಿ ದಾಸ್ ಅವರನ್ನು ಪ್ರಮುಖ ಆರೋಪಿ ಎಂದು ಹೆಸರಿಸಲಾಗಿದೆ.
Related Articles
ನವೆಂಬರ್ 25 ರಂದು ಢಾಕಾದ ಹಜರತ್ ಶಹಜಲಾಲ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಸ್ಕಾನ್ ಮಾಜಿ ಸದಸ್ಯ ಮತ್ತು ಬಾಂಗ್ಲಾದೇಶದ ಸೊಮಿಲಿಟೊ ಸನಾತನಿ ಜಾಗರಣ್ ಜೋಟ್ನ ವಕ್ತಾರ ಚಿನ್ಮಯಿ ಕೃಷ್ಣ ದಾಸ್ ಅವರನ್ನು ಬಂಧಿಸಿದ ನಂತರ ಹಿಂಸಾಚಾರ ಉಲ್ಬಣಗೊಂಡಿತು. ಸಹಾಯಕ ಪಬ್ಲಿಕ್ ಪ್ರಾಸಿಕ್ಯೂಟರ್ ಸೈಫುಲ್ ಇಸ್ಲಾಂ ಅಲಿಫ್ ಹತ್ಯೆಯಾದ ಚಿತ್ತಗಾಂಗ್ನಲ್ಲಿ ಪ್ರತಿಭಟನೆ ಸೇರಿದಂತೆ ದೇಶಾದ್ಯಂತ ಪ್ರತಿಭಟನೆಗಳು ನಡೆದವು ಎನ್ನಲಾಗಿದೆ.
Advertisement
ಪೊಲೀಸ್ ಕಸ್ಟಡಿಯಲ್ಲಿರುವ ದಾಸ್ ಅವರು ಜಾಮೀನು ಕೋರಿ ಅರ್ಜಿ ಸಲ್ಲಿಸಿದು ಕಾನೂನು ಪ್ರಾತಿನಿಧ್ಯದ ಕೊರತೆಯನ್ನು ಉಲ್ಲೇಖಿಸಿ ನ್ಯಾಯಾಲಯವು ಅವರ ಜಾಮೀನು ವಿಚಾರಣೆಯನ್ನು ಜನವರಿ 2 ಕ್ಕೆ ಮುಂದೂಡಿದ್ದರಿಂದ ದಾಸ್ ಅವರನ್ನು ಕಸ್ಟಡಿಯಲ್ಲಿ ಇರಿಸಲಾಗಿದೆ.
ಆಗಸ್ಟ್ನಲ್ಲಿ ಪ್ರಧಾನಿ ಶೇಖ್ ಹಸೀನಾ ಅವರನ್ನು ಪದಚ್ಯುತಗೊಳಿಸಿದ ನಂತರ ಮುಹಮ್ಮದ್ ಯೂನಸ್ ನೇತೃತ್ವದ ಮಧ್ಯಂತರ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಭಾರತ ಮತ್ತು ಬಾಂಗ್ಲಾದೇಶ ನಡುವಿನ ಸಂಬಂಧಗಳು ಹದಗೆಟ್ಟಿದೆ. ಹಿಂದೂಗಳ ಮೇಲಿನ ನಿರಂತರ ದಾಳಿಗಳು ಮತ್ತು ಚಿನ್ಮಯಿ ಕೃಷ್ಣ ದಾಸ್ ಬಂಧನ ಸಂಬಂಧಗಳನ್ನು ಇನ್ನಷ್ಟು ಹದಗೆಡಿಸಿದೆ.
ಇದನ್ನೂ ಓದಿ: Syrian Rebels: ಸಿರಿಯಾ ಅಧ್ಯಕ್ಷರ ಅರಮನೆಗೆ ಹೋರಾಟಗಾರರ ಲಗ್ಗೆ!