Advertisement

Sheikh Hasina, ಅದಾನಿ ನಡುವಿನ ಒಪ್ಪಂದದ ಪರಿಶೀಲನೆಗೆ ಸಮಿತಿ ರಚಿಸಿದ ಬಾಂಗ್ಲಾದೇಶ!

09:08 PM Nov 24, 2024 | Team Udayavani |

ಢಾಕಾ: ಶೇಖ್‌ ಹಸೀನಾ ನೇತೃತ್ವದ ಸರ್ಕಾರ ಹಾಗೂ ಅದಾನಿ ಕಂಪನಿಯ ಜತೆ ನಡೆದಿದ್ದ ಒಪ್ಪಂದ ಸರಿಯಾಗಿದೆಯೇ ಎಂದು ಪರಿಶೀಲನೆ ನಡೆಸಲು ಬಾಂಗ್ಲಾದ ಮಧ್ಯಂತರ ಸರ್ಕಾರ ಸಮಿತಿಯೊಂದನ್ನು ರಚನೆ ಮಾಡಿದೆ.

Advertisement

2009ರಿಂದ 2024ರವರೆಗೆ ಬಾಂಗ್ಲಾದೇಶ ವಿವಿಧ ಕಂಪನಿಗಳ ಜತೆ ಮಾಡಿಕೊಂಡ ಒಪ್ಪಂದಗಳ ಬಗ್ಗೆ ಈ ಸಮಿತಿ ಪರಿಶೀಲನೆ ನಡೆಸಲಿದೆ ಎಂದು ಮಧ್ಯಂತರ ಸರ್ಕಾರದ ಮುಖ್ಯಸ್ಥ ಮೊಹಮದ್‌ ಯೂನಸ್‌ ತಿಳಿಸಿದ್ದಾರೆ.

ವಿದ್ಯುತ್‌ ಬಿಲ್‌ ಕಟ್ಟಿಲ್ಲ ಎಂಬ ಕಾರಣಕ್ಕೆ ಅದಾನಿ ಕಂಪನಿ ಇತ್ತೀಚೆಗೆ ವಿದ್ಯುತ್‌ ಪೂರೈಕೆಯನ್ನು ನಿಲ್ಲಿಸಿತ್ತು. ಬಾಂಗ್ಲಾದೇಶಕ್ಕೆ ವಿದ್ಯುತ್‌ ಪೂರೈಕೆ ಮಾಡುವುದಕ್ಕಾಗಿಯೇ ಜಾರ್ಖಂಡ್‌ನ‌ ಗೊಡ್ಡಾದಲ್ಲಿ ಉಷ್ಣ ವಿದ್ಯುತ್‌ ಸ್ಥಾವರವನ್ನು ಅದಾನಿ ಕಂಪನಿ ಸ್ಥಾಪಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next