Advertisement

“ತಾಂಡಾಗಳು ಶೀಘ್ರ ಕಂದಾಯ ಗ್ರಾಮಗಳಾಗಿ ಪರಿವರ್ತನೆ’: ಆರ್‌. ಅಶೋಕ್‌

10:52 PM Feb 27, 2022 | Team Udayavani |

ಬೆಂಗಳೂರು: ರಾಜ್ಯದ ಸಾವಿರಾರು ತಾಂಡಾಗಳು ಶೀಘ್ರ ಕಂದಾಯ ಗ್ರಾಮಗಳಾಗಿ ಪರಿವರ್ತನೆ ಆಗಲಿದ್ದು, ಇದರ ಬೆನ್ನಲ್ಲೇ ಸರಕಾರದ ಅನೇಕ ಸೌಲಭ್ಯಗಳು ಕೂಡ ದೊರೆಯಲಿವೆ ಎಂದು ಕಂದಾಯ ಸಚಿವ ಆರ್‌. ಅಶೋಕ್‌ ತಿಳಿಸಿದರು.

Advertisement

ರವಿವಾರ ಕರ್ನಾಟಕ ಪ್ರದೇಶ ಬಂಜಾರ ಸೇವಾ ಸಂಘವು ವಸಂತನಗರದಲ್ಲಿ ಹಮ್ಮಿಕೊಂಡಿದ್ದ ಸಂತ ಸೇವಾಲಾಲ್‌ರ 283ನೇ ಜಯಂತಿ, ಬಂಜಾರ ದೀವಿಗೆ ಸ್ಮರಣ ಸಂಚಿಕೆ ಬಿಡುಗಡೆ ಹಾಗೂ ಬಂಜಾರ ಕಲಾಮೇಳ ಉದ್ಘಾಟಿಸಿ ಅವರು ಮಾತನಾಡಿದರು.

ಈಗಾಗಲೇ ಸಾವಿರಾರು ತಾಂಡಾಗಳನ್ನು ಕಂದಾಯ ಗ್ರಾಮಗಳನ್ನಾಗಿ ಪರಿವರ್ತಿಸಿ, ಅಗತ್ಯ ಎಲ್ಲ ಸೌಲಭ್ಯಗಳನ್ನು ನೀಡುವಂತೆ ಕಾರ್ಯಾದೇಶ ಮಾಡಲಾಗಿದೆ. ಶೀಘ್ರದಲ್ಲೇ ಇದು ಕಾರ್ಯರೂಪಕ್ಕೆ ಬರಲಿದ್ದು, ಇದರೊಂದಿಗೆ ಶೈಕ್ಷಣಿಕ ಸೇರಿದಂತೆ ಅನೇಕ ಸವಲತ್ತುಗಳು ಈ ಸಮುದಾಯಕ್ಕೆ ಸಿಗಲಿವೆ. ಇನ್ನೂ ಒಂದು ಹೆಜ್ಜೆ ಮುಂದೆ ಹೋಗಿ ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಕಾರ್ಯಕ್ರಮದಡಿ ಲಂಬಾಣಿ ತಾಂಡಾಗಳಲ್ಲಿ ವಾಸ್ತವ್ಯ ಮಾಡಿ, ಅವರ ಸಮಸ್ಯೆಗಳನ್ನು ಪರಿಹರಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಿದರು.

 

Advertisement

Udayavani is now on Telegram. Click here to join our channel and stay updated with the latest news.

Next