Advertisement

ಜಲಾವೃತಗೊಂಡ ಅಂಡರ್‌ಪಾಸ್‌ ನಲ್ಲಿ ಮುಳುಗಿದ ಕಾರು: ಬ್ಯಾಂಕ್ ಮ್ಯಾನೇಜರ್, ಕ್ಯಾಷಿಯರ್ ಮೃತ್ಯು

12:16 PM Sep 14, 2024 | Team Udayavani |

ನವದೆಹಲಿ: ಭಾರಿ ಮಳೆಯಿಂದಾಗಿ ಶುಕ್ರವಾರ ದೆಹಲಿ ಸೇರಿದಂತೆ ಸುತ್ತಮುತ್ತಲ ಪ್ರದೇಶಗಳಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗಿದ್ದು ಜೊತೆಗೆ ತಗ್ಗು ಪ್ರದೇಶಗಳು ಜಲಾವೃತಗೊಂಡು ಜನಜೀವನ ಅಸ್ಥವ್ಯಸ್ಥಗೊಂಡಿದೆ.

Advertisement

ಮಳೆಯ ಪರಿಣಾಮ ಪ್ರಮುಖ ರಸ್ತೆಗಳು ಜಲಾವೃತಗೊಂಡು ಹಲವಾರು ಅನಾಹುತಗಳು ಸಂಭವಿಸಿದ್ದು, ಓಲ್ಡ್ ಫರಿದಾಬಾದ್ ರೈಲ್ವೆ ಅಂಡರ್‌ಪಾಸ್‌ನಲ್ಲಿ ಸುಮಾರು ಹತ್ತು ಅಡಿಯಷ್ಟು ನೀರು ನಿಂತ್ತಿದ್ದು ಎಸ್‌ಯುವಿ ಕಾರೊಂದು ನೀರಿನಲ್ಲಿ ಮುಳುಗಿ ಬ್ಯಾಂಕ್ ಮ್ಯಾನೇಜರ್ ಮತ್ತು ಕ್ಯಾಷಿಯರ್ ಮೃತಪಟ್ಟಿರುವ ಘಟನೆ ಶುಕ್ರವಾರ ತಡರಾತ್ರಿ ಸಂಭವಿಸಿದೆ.

ಮೃತರನ್ನು ಪುಣ್ಯಾಶ್ರಯ್ ಶರ್ಮಾ (48) ಮತ್ತು ವಿರಾಜ್ (26) ಎಂದು ಗುರುತಿಸಲಾಗಿದ್ದು ಗುರುಗ್ರಾಮ್‌ನಿಂದ ಗ್ರೇಟರ್ ಫರಿದಾಬಾದ್‌ನಲ್ಲಿರುವ ಮನೆಗೆ ಹಿಂದಿರುಗುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ ಎಂದು ಹೇಳಲಾಗಿದೆ.

ಈ ಕುರಿತು ಮಾಹಿತಿ ನೀಡಿದ ಪೊಲೀಸ್ ಅಧಿಕಾರಿ ಶುಕ್ರವಾರ (ಸೆ. 13) ಭಾರೀ ಮಳೆಯಿಂದಾಗಿ ಅಂಡರ್‌ಪಾಸ್‌ ಸಂಪೂರ್ಣ ಜಲಾವೃತಗೊಂಡಿದ್ದು, ಮುನ್ನೆಚ್ಚರಿಕೆಯಾಗಿ ಕಾರುಗಳು ಸೇರಿದಂತೆ ಇತರ ವಾಹನಗಳು ಪ್ರವೇಶಿಸದಂತೆ ಬ್ಯಾರಿಕೇಡ್ ಗಳನ್ನೂ ಇಟ್ಟು ಎಚ್ಚರಿಕೆ ನೀಡಲಾಗಿತ್ತು ಎಂದು ಹೇಳಿದ್ದಾರೆ.

Advertisement

ಆದರೆ ತಡರಾತ್ರಿ ರಾತ್ರಿ 11:50 ರ ಸುಮಾರಿಗೆ ಮಹೀಂದ್ರಾ XUV 700 ಕಾರಿನಲ್ಲಿ ಬಂದ ಬ್ಯಾಂಕ್ ಅಧಿಕಾರಿಗಳು ಬ್ಯಾರಿಕೇಡ್ ನಿರ್ಲಕ್ಷಿಸಿ ಅಂಡರ್‌ಪಾಸ್‌ಗೆ ಕಾರನ್ನು ಕೊಂಡೊಯ್ದಿದ್ದಾರೆ ಈ ವೇಳೆ ನೀರಿನಲ್ಲಿ ಕಾರು ಸಿಲುಕಿಕೊಂಡಿದೆ, ನಂತರ ವಾಹನದೊಳಗೆ ನೀರು ನುಗ್ಗಿದೆ ಎನ್ನಲಾಗಿದೆ. ಈ ಸಮಯದಲ್ಲಿ ಅಲ್ಲಿದ್ದ ದಾರಿಹೋಕರು ಕಾರಿನಲ್ಲಿ ಸಿಲುಕಿದ ಇಬ್ಬರನ್ನು ರಕ್ಷಿಸಲು ಯತ್ನಿಸಿದ್ದಾರೆ ಸಾಕಷ್ಟು ಪ್ರಯತ್ನಗಳ ನಂತರ ಇಬ್ಬರನ್ನು ಕಾರಿನಿಂದ ಹೊರಗೆ ಎಳೆದಿದ್ದಾರೆ ಆದರೆ ಅಷ್ಟೋತ್ತಿಗಾಗಲೇ ವಿರಾಜ್ ಕೊನೆಯುಸಿರೆಳೆದಿದ್ದರು ಗಂಭೀರ ಸ್ಥಿತಿಯಲ್ಲಿದ್ದ ಪುಣ್ಯಾಶ್ರಯ್ ಅವರನ್ನು ಬಾದ್‌ಶಾ ಖಾನ್ ಸಿವಿಲ್ ಆಸ್ಪತ್ರೆಗೆ ಸಾಗಿಸಿದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವುದಾಗಿ ಪೊಲೀಸರು ಮಾಹಿತಿ ನೀಡಿದ್ದಾರೆ.

 

ಆಸ್ಪತ್ರೆಯಲ್ಲಿ ಇಬ್ಬರ ಮರಣೋತ್ತರ ಪರೀಕ್ಷೆ ನಡೆಯುತ್ತಿದ್ದು ನಂತರ ಮೃತದೇಹಗಳನ್ನು ಸಂಬಂಧಿಕರಿಗೆ ಹಸ್ತಾಂತರಿಸುತ್ತೇವೆ” ಎಂದು ಎನ್‌ಐಟಿ ಫರಿದಾಬಾದ್ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಸಮೇರ್ ಸಿಂಗ್ ಹೇಳಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next