Advertisement

ಸೆ:20 ರಂದು ಕೆನರಾ ಬ್ಯಾಂಕಿನಲ್ಲಿ ಮಹಾ ಸಾಲಮೇಳ

07:29 PM Sep 19, 2021 | Team Udayavani |

ದಾಂಡೇಲಿ : ಇದೇ ಬರುವ ಸೆ:20 ರ ಸೋಮವಾರದಂದು ನಗರದ ಕೆನರಾ ಬ್ಯಾಂಕಿನಲ್ಲಿ ಮಹಾ ಸಾಲಮೇಳವನ್ನು ಹಮ್ಮಿಕೊಳ್ಳಲಾಗಿದ್ದು, ಈ ಕಾರ್ಯಕ್ರಮದ ಪ್ರಯೋಜನವನ್ನು ಪಡೆದುಕೊಳ್ಳುವಂತೆ ನಗರದ ಕೆನರಾ ಬ್ಯಾಂಕ್ ಶಾಖಾ ವ್ಯವಸ್ಥಾಪಕರಾದ ಮಂಜುನಾಥ ರಾವಳಕರ ಸಾರ್ವಜನಿಕರಿಗೆ ಕರೆ ನೀಡಿದ್ದಾರೆ.

Advertisement

ಸಾರ್ವಜನಿಕರಿಗೆ ಅನುಕೂಲವಾಗುವ ದೃಷ್ಟಿಯಿಂದ ಹಮ್ಮಿಕೊಂಡಿರುವ ಈ ಸಾಲಮೇಳದಲ್ಲಿ ಗೃಹಸಾಲ, ವಾಹನ ಸಾಲ ಮತ್ತು ವೈಯಕ್ತಿಕ ಸಾಲದ ಬಗ್ಗೆ ಮಾಹಿತಿಯ ಜೊತೆಗೆ ಸ್ಥಳದಲ್ಲೆ ಸಾಲ ಮಂಜೂರು ಮಾಡುವ ಕಾರ್ಯ ನಡೆಯಲಿದೆ. ಸಾಲಮೇಳದಲ್ಲಿ ಭಾಗವಹಿಸಲಿಚ್ಚಿಸುವವರು ಯಾವುದೇ ರೀತಿಯ ಆದಾಯ ಪ್ರಮಾಣ ಪತ್ರ, ಆಧಾರ್ ಕಾರ್ಡ್, ಪಾನ್ ಕಾರ್ಡ್ ಗಳನ್ನು ತರಬೇಕು.

ಇದನ್ನೂ ಓದಿ:ನದಿಗೆ ಹಾರಿ ಎರಡು ದಿನ ಕಳೆದರೂ ಪತ್ತೆಯಾಗದ ದೇಹ : ಶೋಧ ಕಾರ್ಯ ಮುಂದುವರಿಕೆ

ಈ ಕಾರ್ಯಕ್ರಮದಲ್ಲಿ ಕೆನರಾ ಬ್ಯಾಂಕಿನ ಹಿರಿಯ ಅಧಿಕಾರಿಗಳು ಸಹ ಭಾಗವಹಿಸಲಿದ್ದಾರೆ. ಕಾರ್ಯಕ್ರಮದಲ್ಲಿ ವಿವಿಧ ಸಾಲ ಸೌಲಭ್ಯಗಳ ಮಾಹಿತಿಯನ್ನು ನೀಡಲಾಗುತ್ತಿದ್ದು, ಸಾರ್ವಜನಿಕರು ಇದರ ಪ್ರಯೋಜನವನ್ನು ಪಡೆದುಕೊಳ್ಳುವಂತೆ ಮಂಜುನಾಥ ರಾವಳಕರ ಅವರು ವಿನಂತಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next