Advertisement

ಕನ್ನಡದಲ್ಲಿ ಬ್ಯಾಂಕಿಂಗ್‌ ಪರೀಕ್ಷೆಗೆ ಅವಕಾಶ: ಅಭಿನಂದನೆ

11:39 PM Sep 14, 2019 | Lakshmi GovindaRaju |

ಬೆಂಗಳೂರು: ಕನ್ನಡದಲ್ಲಿ ಬ್ಯಾಂಕಿಂಗ್‌ ಪರೀಕ್ಷೆಗೆ ಅವಕಾಶ ನೀಡಿದ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್‌ ಅವರಿಗೆ ಸಚಿವ ಸಿ.ಟಿ.ರವಿ ಅಭಿನಂದನೆ ಸಲ್ಲಿಸಿದ್ದಾರೆ.ಮುಖ್ಯಮಂತ್ರಿಗಳ ಗೃಹ ಕಚೇರಿ “ಕೃಷ್ಣಾ’ದಲ್ಲಿ ಶನಿವಾರ ಪ್ರತಿಕ್ರಿಯಿಸಿದ ಅವರು, ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರು, ಕನ್ನಡದಲ್ಲಿ ಬ್ಯಾಂಕಿಂಗ್‌ ಪರೀಕ್ಷೆಗೆ ಅವಕಾಶ ನೀಡಲು ಒಪ್ಪಿದ್ದಾರೆ.

Advertisement

ನಮ್ಮ ಕೂಗಿಗೆ ಪೂರಕವಾಗಿ ಸ್ಪಂದಿಸಿರುವ ಸಚಿವರಿಗೆ ಅಭಿನಂದನೆ ಸಲ್ಲಿಸಲಾಗುವುದೆಂದರು. ಯಾವುದೇ ಪ್ರಾದೇಶಿಕ ಭಾಷೆಗೆ ಅಡ್ಡಿಯಾಗುವ ನಿಲುವನ್ನು ಬಿಜೆಪಿ ತೆಗೆದುಕೊಳ್ಳುವುದಿಲ್ಲ. ಆರ್‌ಎಸ್‌ಎಸ್‌ ಸಹ ಮಾತೃ ಭಾಷೆಗೆ ಒತ್ತು ನೀಡಿದೆ. ದೇಶದ ಪ್ರಾದೇಶಿಕ ಭಾಷೆಗಳನ್ನು ಅರ್ಥ ಮಾಡಿಕೊಳ್ಳುವುದು ಸುಲಭ. ಕೆಲವರು ಭಾಷೆ ಭಾಷೆಗಳ ನಡುವೆ ಸಂಘರ್ಷ ಸೃಷ್ಟಿಸುತ್ತಿದ್ದಾರೆ. ಬಿಜೆಪಿ ದೇಶದ ಎಲ್ಲಾ ಭಾಷೆಗಳಿಗೂ ಸಮಾನ ಗೌರವ ನೀಡುತ್ತದೆ ಎಂದು ಹೇಳಿದರು.

ಯುಪಿಎಸ್‌ಸಿ ಪರೀಕ್ಷೆಯಲ್ಲೂ ನಮ್ಮ ಕನ್ನಡ ಭಾಷೆಗೆ ಮಾನ್ಯತೆ ಇಲ್ಲ. ಕೇಂದ್ರ ಸರ್ಕಾರದ ಈ ನಡವಳಿಕೆಯಿಂದ ಕನ್ನಡಕ್ಕೆ ಅತ್ಯಂತ ಅನ್ಯಾಯವಾಗಿದೆ. ಇದರ ಬಗ್ಗೆ ಹೋರಾಟ ಮಾಡಬೇಕು. ಹೋರಾಟಕ್ಕೆ ನನ್ನ ಸಂಪೂರ್ಣ ಬೆಂಬಲ, ಸಹಕಾರ ಇದೆ.
-ಎಚ್‌.ಡಿ.ದೇವೇಗೌಡ, ಮಾಜಿ ಪ್ರಧಾನಿ

Advertisement

Udayavani is now on Telegram. Click here to join our channel and stay updated with the latest news.

Next