ಚಿತ್ರದುರ್ಗ: ಸಾಲಕ್ಕಾಗಿ ಹಣಕಾಸು ಸಂಸ್ಥೆಗಳು, ಬ್ಯಾಂಕುಗಳು ರೈತರ ಮನೆ, ಆಸ್ತಿ- ಪಾಸ್ತಿ ಜಪ್ತಿ ಮಾಡುವುದನ್ನು ನಿಷೇಧ ಮಾಡುತ್ತೇನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ಸಿರಿಗೆರೆ ತರಳಬಾಳು ಬೃಹನ್ಮಠದಲ್ಲಿ ಲಿಂಗೈಕ್ಯ ಶ್ರೀ ಶಿವಕುಮಾರ ಶಿವಾಚಾರ್ಯ ಶ್ರೀಗಳ ಶ್ರದ್ಧಾಂಜಲಿ ಸಭೆಯಲ್ಲಿ ಮಾತನಾಡಿದರು.
ರಾಜ್ಯದಲ್ಲಿ ರೈತರು ಸಂಕಷ್ಟದಲ್ಲಿದ್ದಾರೆ. ಇಂತಹ ಸಂದರ್ಭಗಳಲ್ಲಿ ಬ್ಯಾಂಕ್, ಫೈನಾನ್ಸ್ ಗಳು ಆಸ್ತಿ ಜಪ್ತಿ ಮಾಡುವುದು ಸರಿಯಲ್ಲ. ಈ ಕುರಿತು ಬೆಂಗಳೂರಿಗೆ ಹೋದ ತಕ್ಷಣ ಅಗತ್ಯ ಕಾನೂನು ತಿದ್ದುಪಡಿ ತಂದು ಜಪ್ತಿಯನ್ನು ನಿಷೇಧ ಮಾಡುತ್ತೇನೆ ಎಂದು ತಿಳಿಸಿದರು.
ಇದನ್ನೂ ಓದಿ:ಆಪರೇಷನ್ ಮೇಘಚಕ್ರ; ಮಕ್ಕಳ ಅಶ್ಲೀಲ ವಿಡಿಯೋ ಜಾಲ ವಿರುದ್ಧ ಸಿಬಿಐ ಸಮರ; 19 ರಾಜ್ಯಗಳಲ್ಲಿ ದಾಳಿ
ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮಾತನಾಡಿ, ಸಾಲಕ್ಕಾಗಿ ರೈತರ ಜಮೀನು ಜಪ್ತಿ, ಮುಟ್ಟುಗೋಲು ಹಾಕಿಕೊಳ್ಳಲು ಅವಕಾಶ ನೀಡುವುದಿಲ್ಲ. ರೈತರ ಪರವಾಗಿ ಸರ್ಕಾರ ನಿಲ್ಲುತ್ತದೆ. ರೈತರು ಈ ಬಗ್ಗೆ ಚಿಂತೆ ಮಾಡುವುದು ಬೇಡ. ನಿಮ್ಮ ಜೊತೆಗೆ ನಾವಿದ್ದೇವೆ ಎಂದು ತಿಳಿಸಿದರು.