Advertisement

ಹಿರಿಯ ವಿದ್ವಾಂಸ, ಪದ್ಮಶ್ರೀ ಪುರಸ್ಕೃತ ಬನ್ನಂಜೆ ಗೋವಿಂದಾಚಾರ್ಯ ನಿಧನ

01:18 PM Dec 13, 2020 | Mithun PG |

ಉಡುಪಿ: ದೇಶದ ಪ್ರಮುಖ ವಿದ್ವಾಂಸರಲ್ಲಿ ಒಬ್ಬರಾದ, ಪದ್ಮಶ್ರೀ ಪುರಸ್ಕೃತ  ಉಡುಪಿ ಜಿಲ್ಲೆಯ ಡಾ. ಬನ್ನಂಜೆ ಗೋವಿಂದಾಚಾರ್ಯ ಇಂದು ತಮ್ಮ ಸ್ವಗೃಹ ಅಂಬಲಪಾಡಿಯಲ್ಲಿ ಬೆಳಗ್ಗೆ 11 ಗಂಟೆಗೆ  ನಿಧನರಾಗಿದ್ದಾರೆ. ಇವರಿಗೆ 84 ವರ್ಷ ವಯಸ್ಸಾಗಿತ್ತು.

Advertisement

ಬನ್ನಂಜೆ ಗೋವಿಂದಾಚಾರ್ಯ ಅವರು ಹಲವು ತಿಂಗಳಿನಿಂದ ವಯೋಸಹಜ ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದರು. ಇವರ ನಿಧನವನ್ನು ಕುಟುಂಬ ಮೂಲಗಳು ಸ್ಪಷ್ಟಪಡಿಸಿವೆ. ಗೋವಿಂದಾಚಾರ್ಯ ಅವರಿಗೆ  4 ಹೆಣ್ಣು ಮಕ್ಕಳು, ಇಬ್ಬರು ಪುತ್ರರಿದ್ದು, ಓರ್ವ ಪುತ್ರ ಇತ್ತೀಚಿಗಷ್ಟೇ ವಿಧವಶರಾಗಿದ್ದರು.

ಉಡುಪಿ ಜಿಲ್ಲೆಯ ಅಂಬಲಪಾಡಿಯಲ್ಲಿ 1936ರಲ್ಲಿ ಜನಿಸಿದ ಬನ್ನಂಜೆ ಗೋವಿಂದಾಚಾರ್ಯ  ಅವರು, ತಮ್ಮ ಪ್ರವಚನಗಳ ಮೂಲಕ ತತ್ವ ಪ್ರಚಾರ ಕೈಗೊಂಡಿದ್ದರು. ಮಾಧ್ವ ತತ್ವದಲ್ಲಿ ಅಮೋಘ ಪಾ೦ಡಿತ್ಯ ಸಾಧಿಸಿರುವ ಇವರು ಕನ್ನಡ ಹಾಗೂ ಸಂಸ್ಕೃತ ಭಾಷೆಯಲ್ಲಿ ಅನೇಕ ಕೃತಿಗಳನ್ನು ರಚಿಸಿದ್ದಾರೆ.

ಉದಯವಾಣಿ ಪತ್ರಿಕೆಯ ಆರಂಭಕಾಲದಿಂದ (1970) ಸಾಪ್ತಾಹಿಕ ಪುರವಣಿಯ ಮುಖ್ಯ ಉಪಸಂಪಾದಕ ಹಾಗೂ ಸಂಪಾದಕರಾಗಿ ಕಾರ್ಯನಿರ್ವಹಿಸಿದ್ದರು. ಮಾತ್ರವಲ್ಲದೆ ಭಾಷಾ ಶುದ್ಧತೆಯನ್ನು ಬೆಳೆಸುವಲ್ಲಿ ವಿಶೇಷ ಕೊಡುಗೆ ನೀಡಿದ್ದರು.

Advertisement

ಇವರು ವೈದಿಕ ವಿದ್ಯಾರ್ಥಿವೇತನಕ್ಕೆ ಅನೇಕ ಕೊಡುಗೆಗಳನ್ನು ನೀಡಿದ್ದು, ಈ ವಿಷಯದ ಕುರಿತಾಗಿ ಹಲವಾರು ವ್ಯಾಖ್ಯಾನಗಳು, ಅನುವಾದಗಳು ಮತ್ತು ಮೂಲ ಕೃತಿಗಳನ್ನು ರಚಿಸಿದ್ದಾರೆ. ಭಾರತೀಯ ತತ್ವ ಶಾಸ್ತ್ರ ಮತ್ತು ಹಿಂದೂ ಧರ್ಮಗ್ರಂಥಗಳಲ್ಲಿ ಪ್ರವಚನ ನಿಡುವ ಮೂಲಕ ಭಾರತದಾದ್ಯಂತ ಮತ್ತು ಪ್ರಪಂಚದಾದ್ಯಂತ ಪ್ರವಾಸ ಮಾಡಿದ್ದರು.

ಕೃತಿರಚನೆ:

ಅನೇಕ ಸಂಸ್ಕೃತ ಕೃತಿಗಳನ್ನು ಕನ್ನಡಕ್ಕೆ ಅನುವಾದ ಮಾಡಿದ್ದಾರೆ. ಬಾಣಭಟ್ಟನ ಕಾದಂಬರಿ, ಕಾಳೀದಾಸನ ಶಾಕುಂತಲಾ, ಶೂದ್ರಕನ ’ಮೃಚ್ಛಕಟಿಕ’ ಇತ್ಯಾದಿ ಚಾರಿತ್ರಿಕ ಕೃತಿಗಳು ಇವರ ಅನುವಾದಿತ ಕೃತಿಗಳಲ್ಲಿ ಪ್ರಮುಖವಾದುವು.

ಟಿಪ್ಪಣಿಗಳು:

ಶ್ರೀ ಶ್ರೀ ತ್ರಿವಿಕ್ರಮಾಚಾರ್ಯದಾಸರ ಆನ೦ದಮಾಲಾ, ತ್ರಿವಿಕ್ರಮ ಪ೦ಡಿತರ ವಾಯುಸ್ತುತಿ, ವಿಷ್ಣುಸ್ತುತಿ ಇತ್ಯಾದಿ ಕೃತಿಗಳಿಗೆ ಟಿಪ್ಪಣಿಯನ್ನು ಬರೆದಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next