Advertisement

ಬ್ಯಾನರಿಗೆ ಚಪ್ಪಲಿ ಹಾರ ಪ್ರಕರಣ: ಇಬ್ಬರು ಪೊಲೀಸರ ಅಮಾನತು, DySP ವಿರುದ್ಧ ಇಲಾಖಾ ತನಿಖೆ

02:48 PM May 18, 2023 | Team Udayavani |

ಮಂಗಳೂರು: ಬ್ಯಾನರಿಗೆ ಚಪ್ಪಲಿ ಹಾರ ಹಾಕಿದ್ದ ಪ್ರಕರಣದಲ್ಲಿ ಪುತ್ತೂರು ನಗರ ಠಾಣೆಯಲ್ಲಿ ವಿಚಾರಣೆಗೆ ಒಳಪಡಿಸಿದ ಆರೋಪಿತರಿಗೆ ಪೊಲೀಸರು ಹಲ್ಲೆ ಮಾಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಪುತ್ತೂರು ಗ್ರಾಮಾಂತರ ಠಾಣೆ ಪಿಎಸ್ ಐ ಹಾಗೂ ಕಾನ್ಸ್ಟೇಬಲ್ ಹರ್ಷಿತ್ ಅವರನ್ನು ಸೇವೆಯಿಂದ ಅಮಾನತ್ತು ಗೊಳಿಸಲಾಗಿದೆ.

Advertisement

ಪುತ್ತೂರು ಡಿವೈಎಸ್ ಪಿ ವಿರುದ್ಧ ಸೂಕ್ತ ಇಲಾಖಾ ಶಿಸ್ತು ಕ್ರಮ ಕೈಗೊಳ್ಳಲು ವರದಿಯನ್ನು ಮೇಲಾಧಿಕಾರಿಗಳಿಗೆ ಸಲ್ಲಿಸಲಾಗುವುದು ಎಂದು ಪ್ರಕಟಣೆ ತಿಳಿಸಿದೆ.

ನರಿಮೊಗರಿನ ಅವಿನಾಶ್ ನೀಡಿದ ದೂರಿನ ಮೇರೆಗೆ ಪುತ್ತೂರು ಡಿವೈಎಸ್ ಪಿ, ಪುತ್ತೂರು ಗ್ರಾಮಾಂತರ ಠಾಣೆ ಪಿಎಸ್ ಐ, ಪೇದೆ ಹರ್ಷಿತ್ ವಿರುದ್ಧ ಪ್ರಕರಣ ದಾಖಲಾಗಿದೆ. ಪ್ರಕರಣದ ತನಿಖೆಯನ್ನು ಬಂಟ್ವಾಳ ಡಿವೈ ಎಸ್ ಪಿ ರವರಿಗೆ ವಹಿಸಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next