Advertisement

ಮುಸ್ಲಿಂ ವ್ಯಾಪಾರಿಗಳಿಗೆ ನಿಷೇಧ: ಕದ್ರಿ ದೇವಸ್ಥಾನದಲ್ಲಿ ಅಳವಡಿಸಿದ್ದ ಬ್ಯಾನರ್‌ ತೆರವು

11:34 PM Jan 19, 2023 | Team Udayavani |

ಮಂಗಳೂರು: ಕದ್ರಿ ಶ್ರೀ ಮಂಜುನಾಥ ದೇವಸ್ಥಾನದ ಜಾತ್ರೆಯಲ್ಲಿ ಮುಸ್ಲಿಂ ವ್ಯಾಪಾರಿಗಳು ವ್ಯಾಪಾರ ಮಾಡುವುದಕ್ಕೆ ಅವಕಾಶವಿಲ್ಲ ಎಂದು ವಿಹಿಂಪ-ಬಜರಂಗದಳ ವತಿಯಿಂದ ಅಳವಡಿಸಿದ ಬ್ಯಾನರನ್ನು ಪೊಲೀಸರು ಗುರುವಾರ ತೆರವುಗೊಳಿಸಿದ್ದಾರೆ.

Advertisement

ಜ. 15ರಿಂದ 21ರ ವರೆಗೆ ಜಾತ್ರೆ ನಡೆಯಲಿದೆ. ಈ ನಡುವೆ ಗುರುವಾರ ಕ್ಷೇತ್ರದಲ್ಲಿ ಬ್ಯಾನರ್‌ ಕಂಡು ಬಂದಿದೆ. ಅದರಲ್ಲಿ ಕುಕ್ಕರ್‌ ಬಾಂಬ್‌ ಸ್ಫೋಟವನ್ನೂ ಉಲ್ಲೇಖ ಮಾಡಲಾಗಿದೆ. ಸ್ಫೋಟದ ಆರೋಪಿ ಮೊದಲು ಗುರಿ ಮಾಡಿದ್ದೇ ಕದ್ರಿ ಮಂಜುನಾಥ ದೇವಸ್ಥಾನವನ್ನು. ಅಂತಹ ಮನಸ್ಥಿತಿ ಉಳ್ಳವರಿಗೆ ಹಾಗೂ ವಿಗ್ರಹಾರಾಧನೆ ಹರಾಮ್‌ ಎಂದು ನಂಬಿರುವ ಯಾರಿಗೂ ಈ ಜಾತ್ರೆಯಲ್ಲಿ ವ್ಯಾಪಾರಕ್ಕೆ ಅವಕಾಶವಿಲ್ಲ. ಸನಾತನ ಧರ್ಮದ ಆಚರಣೆ ಹಾಗೂ ನಂಬಿಕೆಯಲ್ಲಿ ವಿಶ್ವಾಸವುಳ್ಳ ಹಿಂದೂ ವ್ಯಾಪಾರಿಗಳಿಗೆ ಮಾತ್ರ ಅವಕಾಶ ಎಂದು ಬರೆಯಲಾಗಿದೆ.

ಧಾರ್ಮಿಕ ದತ್ತಿ ಇಲಾಖೆಗೆ ಸೇರಿದ ದೇವಸ್ಥಾನವಾಗಿರುವುದರಿಂದ ಆಡಳಿತ ಮಂಡಳಿ ಈ ಬ್ಯಾನರ್‌ ಅಳವಡಿಕೆಗೆ ಸಮ್ಮತಿ ಸೂಚಿಸಿಲ್ಲ. ಹೀಗಾಗಿ ಶಾಂತಿ ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಪೊಲೀಸರು ಬ್ಯಾನರ್‌ ತೆರವುಗೊಳಿಸಿದ್ದಾರೆ. ಈ ಕುರಿತಂತೆ ಯಾವುದೇ ದೂರು ದಾಖಲಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next