ಮುಂಬಯಿ: ಬಂಟರ ಸಂಘ ಮುಂಬಯಿ ಇದರ ಸಾಹಿತ್ಯ ಮತ್ತು ಸಾಂಸ್ಕೃತಿಕ ಸಮಿತಿಯ ಆಶ್ರಯದಲ್ಲಿ ಬಿಸು ಪರ್ಬ ಆಚರಣೆಯು ಎ. 14ರಂದು ಬೆಳಗ್ಗೆ ಸಂಘದ ಆವರಣದಲ್ಲಿರುವ ಶ್ರೀ ಮಹಾವಿಷ್ಣು ಜ್ಞಾನ ಮಂದಿರದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಗಳೊಂದಿಗೆ ನಡೆಯಿತು.
ಬಂಟರ ಸಂಘ ಮುಂಬಯಿ ಅಧ್ಯಕ್ಷ ಚಂದ್ರಹಾಸ್ ಕೆ. ಶೆಟ್ಟಿ ಅವರ ಮಾರ್ಗ ದರ್ಶನದಲ್ಲಿ, ಸಂಘದ ಸಾಹಿತ್ಯ ಮತ್ತು ಸಾಂಸ್ಕೃತಿಕ ಸಮಿತಿಯ ಕಾರ್ಯಾಧ್ಯಕ್ಷ ಕರ್ನೂರು ಮೋಹನ್ ರೈ ಅವರ ನೇತೃತ್ವ
ದಲ್ಲಿ ಸರಕಾರದ ಕೋವಿಡ್ ನಿಯಮ ಗಳಿಗೆ ಅನುಸಾರವಾಗಿ ಕಾರ್ಯಕ್ರಮ ಆಯೋಜಿಸಲಾಗಿತ್ತು.
ವರ್ಷಂಪ್ರತಿ ನಡೆಯುವ ಸಂಪ್ರದಾಯ ದಂತೆ ದೇವಸ್ಥಾನದಲ್ಲಿ ಬಿಸು ಕಣಿ ಪ್ರತಿಷ್ಠಾಪಿ ಸಲಾಯಿತು. ಮಂದಿರದ ಪ್ರಧಾನ ಅರ್ಚಕ ವಿದ್ವಾನ್ ಅರವಿಂದ ಬನ್ನಿಂತಾಯ ಅವರ ಪೌರೋಹಿತ್ಯದಲ್ಲಿ ದೇವರಿಗೆ ವಿಶೇಷ ಅಲಂಕಾರಗೈದು, ಪೂಜಾ ವಿಧಿ-ವಿಧಾನ ಗಳನ್ನು ನೇರವೇರಿಸಲಾಯಿತು.
ಈ ಸಂದರ್ಭ ಬಂಟರ ಸಂಘ ಮುಂಬಯಿ ಗೌರವ ಪ್ರಧಾನ ಕಾರ್ಯ ದರ್ಶಿ ಡಾ| ಆರ್. ಕೆ. ಶೆಟ್ಟಿ, ಜ್ಞಾನ ಮಂದಿರ ಸಮಿತಿಯ ಕಾರ್ಯಾಧ್ಯಕ್ಷ ಕೃಷ್ಣ ವಿ. ಶೆಟ್ಟಿ, ಬಂಟರವಾಣಿಯ ಕಾರ್ಯಾಧ್ಯಕ್ಷ ರವೀಂದ್ರನಾಥ ಎಂ. ಭಂಡಾರಿ, ಸಂಘದ ಶಿಕ್ಷಣ ಮತ್ತು ಸಮಾಜ ಕಲ್ಯಾಣ ಸಮಿತಿಯ ಕಾರ್ಯಾಧ್ಯಕ್ಷ ಜಯ ಎ. ಶೆಟ್ಟಿ, ಕೋಶಾಧಿಕಾರಿ ನವೀನ್ ಶೆಟ್ಟಿ ಇನ್ನಬಾಳಿಕೆ, ಜ್ಞಾನ ಮಂದಿರ ಸಮಿತಿಯ ಕಾರ್ಯದರ್ಶಿ ಸುರೇಶ್ ಶೆಟ್ಟಿ ಶಿಬರೂರು, ಸಂತೋಷ್ ಕ್ಯಾಟರರ್ನ ಸಂತೋಷ್ ಶೆಟ್ಟಿ, ಸಿಟಿ ಪ್ರಾದೇಶಿಕ ಸಮಿತಿಯ ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಸುಚಿತಾ ಶೆಟ್ಟಿ, ಸಂಘದ ಮಹಿಳಾ ವಿಭಾಗದ ಸದಸ್ಯೆಯರಾದ ಹರಿಣಿ ಶೆಟ್ಟಿ, ಜಯಲಕ್ಷ್ಮೀ ಶೆಟ್ಟಿ, ಶಾಲಿನಿ ಶೆಟ್ಟಿ, ಸಂಘದ ಮಹಾಪ್ರಬಂಧಕ ಪ್ರವೀಣ್ ಶೆಟ್ಟಿ, ಪ್ರಬಂಧಕ ಸುಕುಮಾರ್ ಶೆಟ್ಟಿ, ಅಕೌಂಟ್ಸ್ ಮ್ಯಾನೇಜರ್ ಸರಿತಾ ಶೆಟ್ಟಿ, ದಿವ್ಯಾ ಶೆಟ್ಟಿ, ರೋಹಿಣಿ ಶೆಟ್ಟಿ, ಸುಮಾ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು. ಮಹಿಳಾ ವಿಭಾಗದವರಿಂದ ಭಜನ ಕಾರ್ಯಕ್ರಮ ನಡೆಯಿತು. ಮಹಾಮಂಗಳಾರತಿ, ಪ್ರಸಾದ ವಿತರಣೆಯನ್ನು ಆಯೋಜಿಸಲಾಗಿತ್ತು.
ಚಿತ್ರ-ವರದಿ: ಪ್ರೇಮನಾಥ್ ಶೆಟ್ಟಿ ಮುಂಡ್ಕೂರು