ಬಂಟ್ವಾಳ: ಚಾಲಕನ ನಿಯಂತ್ರಣ ಕಳೆದುಕೊಂಡ ಪರಿಣಾಮವಾಗಿ ಕಾರೊಂದು ಡಿವೈಡರ್ ಮೇಲೆ ಹತ್ತಿ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದು ಚಾಲಕ ಯಾವುದೇ ಅಪಾಯವಿಲ್ಲದೆ ಪಾರಾದ ಘಟನೆ ತುಂಬೆ ಎಂಬಲ್ಲಿ ಬುಧವಾರ(ಜು.5 ರಂದು) ನಡೆದಿದೆ.
ಬೆಳ್ತಂಗಡಿ ನಿವಾಸಿ ನವಾಜ್ ಎಂಬವರು ಕಾರಿನಲ್ಲಿ ಮಂಗಳೂರು ಕಡೆಗೆ ಸಂಚರಿಸುತ್ತಿದ್ದ ವೇಳೆ ತುಂಬೆಯಲ್ಲಿ ಈ ಘಟನೆ ನಡೆದಿದೆ.
ಇದನ್ನೂ ಓದಿ: Missing Case: ಮುಸ್ಲಿಂ ಶಿಕ್ಷಕಿಯೊಂದಿಗೆ ಓಡಿಹೋದ ಅಪ್ರಾಪ್ತೆ; ಮತಾಂತರ ಆರೋಪ
ಕಾರು ಡಿವೈಡರ್ ಮೇಲೆ ಹತ್ತಿದ್ದಲ್ಲದೆ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದಿದೆ. ಢಿಕ್ಕಿಯ ರಭಸಕ್ಕೆ ಕಾರಿನ ಒಂದು ಭಾಗ ನಜ್ಜುಗುಜ್ಜಾಗಿದೆ. ಆದರೆ ಚಾಲಕ ಯಾವುದೇ ಅಪಾಯವಿಲ್ಲದೆ ಪಾರಾಗಿದ್ದಾನೆ.
ಸ್ಥಳಕ್ಕೆ ಟ್ರಾಫಿಕ್ ಪೊಲೀಸರು ಬೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ