Advertisement

Bantwal: ಜೂಜಾಟಕ್ಕೆ ದಾಳಿ; 7.81 ಲಕ್ಷ ರೂ.ವಶ

08:44 PM Dec 18, 2024 | Team Udayavani |

ಬಂಟ್ವಾಳ: ಬಡಗಬೆಳ್ಳೂರಿನ ಮನೆಯೊಂದರಲ್ಲಿ ನಡೆಯುತ್ತಿದ್ದ ಅಕ್ರಮ ಜೂಜಾಟಕ್ಕೆ ದಾಳಿ ನಡೆಸಿದ ಪೊಲೀಸರು ಸುಮಾರು 7.81 ಲಕ್ಷ ರೂ.ಗಳನ್ನು ವಶಪಡಿಸಿಕೊಂಡು ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Advertisement

ಬಡಗಬೆಳ್ಳೂರು ನಿವಾಸಿ ನಿಶಾಂತ್‌ ಪೂಜಾರಿ ಅವರ ಮನೆಯ ಟೆರೇಸ್‌ ಮೇಲೆ ಮಂಗಳವಾರ ಅಕ್ರಮ ಜೂಜಾಟ ನಡೆಯುತ್ತಿರುವ ಕುರಿತ ಖಚಿತ ಮಾಹಿತಿಯ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. ಜೂಜಾಟದಲ್ಲಿ ತೊಡಗಿದ್ದ 33 ಮಂದಿಯ ವಿರುದ್ಧ ಪ್ರಕರಣ ದಾಖಲಿಸಲಾಗಿದ್ದು, ಆಟಕ್ಕೆ ಬಳಸಿದ್ದ 7,81,420 ರೂ.ಗಳನ್ನು ವಶಪಡಿಸಿಕೊಂಡಿದ್ದಾರೆ. ಬಂಟ್ವಾಳ ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next