Advertisement

Bantwal ಆಟೋ ರಿಕ್ಷಾ-ಸ್ಕೂಟರ್‌ ಢಿಕ್ಕಿ: ಸವಾರನಿಗೆ ಗಾಯ

12:22 AM Jun 18, 2024 | Team Udayavani |

ಬಂಟ್ವಾಳ: ಬಿ.ಸಿ.ರೋಡಿನ ಮೊಡಂಕಾಪು ರೈಲ್ವೇ ಮೇಲ್ಸೆತುವೆ ಬಳಿ ಆಟೋ ರಿಕ್ಷಾ ಹಾಗೂ ಸ್ಕೂಟರ್‌ ಮಧ್ಯೆ ಢಿಕ್ಕಿ ಸಂಭವಿಸಿ ಸವಾರ ಗಾಯಗೊಂಡ ಘಟನೆ ಜೂ. 16ರಂದು ನಡೆದಿದೆ.

Advertisement

ಬಿ.ಸಿ.ರೋಡು ಬಳಿಯ ಗೋಳಿನೆಲ ನಿವಾಸಿ ಕೃಷ್ಣಪ್ಪ ಕುಲಾಲ್‌ ಗಾಯಗೊಂಡು ಬಿ.ಸಿ.ರೋಡು ಆಸ್ಪತ್ರೆಗೆ ದಾಖಲಿಸಲ್ಪಟ್ಟಿದ್ದು, ಸಹ ಸವಾರ ಉಮೇಶ್‌ ಗಾಯಗಳಿಲ್ಲದೆ ಪಾರಾಗಿದ್ದಾರೆ.

ಚಾಲಕ ಮೊಹಮ್ಮದ್‌ ಅಸ್ಪಾಕ್‌ ಆಟೋ ರಿಕ್ಷಾವನ್ನು ಅತೀ ವೇಗ ಹಾಗೂ ಅಜಾಗರೂಕತೆಯಿಂದ ಚಲಾಯಿಸಿಕೊಂಡು ಬಂದು ಢಿಕ್ಕಿ ಹೊಡೆದಿದ್ದಾನೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ. ಬಂಟ್ವಾಳ ಸಂಚಾರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

 

Advertisement
Advertisement

Udayavani is now on Telegram. Click here to join our channel and stay updated with the latest news.

Next