Advertisement

Bantwal: ಶಂಭೂರು ಅಣೆಕಟ್ಟಿನಲ್ಲಿ ಮಹಿಳೆಯ ಮೃತದೇಹ

08:19 PM Sep 05, 2024 | Team Udayavani |

ಬಂಟ್ವಾಳ: ಶಂಭೂರು ಎಎಂಆರ್‌ ಅಣೆಕಟ್ಟಿನ ಬಳಿ ನೇತ್ರಾವತಿ ನದಿಯಲ್ಲಿ ಸುಮಾರು 40 ವರ್ಷ ವಯಸ್ಸಿನ ಅಪರಿಚಿತ ಮಹಿಳೆಯ ಮೃತದೇಹ ಕೊಳೆತ ಸ್ಥಿತಿಯಲ್ಲಿ ಗುರುವಾರ ಪತ್ತೆಯಾಗಿದೆ.

Advertisement

15 ದಿನಗಳ ಹಿಂದೆ ನೀರಿಗೆ ಬಿದ್ದು ಮೃತಪಟ್ಟಿರಬಹುದೆಂದು ಅಂದಾಜಿಸಲಾಗಿದೆ. ಸಾವಿನ ಕಾರಣ ಇನ್ನಷ್ಟೇ ತಿಳಿದುಬರಬೇಕಿದೆ.

ಜಲಾಶಯದ ಸಿಬಂದಿ ನಾಗರಾಜ ಶೆಟ್ಟಿ ಬಂಟ್ವಾಳ ಗ್ರಾಮಾಂತರ ಠಾಣೆಗೆ ಪೊಲೀಸರಿಗೆ ದೂರು ನೀಡಿದ್ದು, ಪಿಎಸ್‌ಐ ಹರೀಶ್‌ ಎಂ.ಆರ್‌. ಸ್ಥಳ ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next