Advertisement

Bantwal ಮನೆಗೆ ನುಗ್ಗಿ ನಗ-ನಗದು ಕಳವು

11:30 PM Oct 30, 2023 | Team Udayavani |

ಬಂಟ್ವಾಳ: ಬಿ.ಸಿ. ರೋಡಿನ ಅಪಾರ್ಟ್‌ಮೆಂಟ್‌ನ ಮನೆಯೊಂದಕ್ಕೆ ಬೀಗ ತೆಗೆದು ಒಳ ನುಗ್ಗಿದ್ದ ಕಳ್ಳರು 3.40 ಲಕ್ಷ ರೂ. ಮೌಲ್ಯದ 67 ಗ್ರಾಂ ಚಿನ್ನಾಭರಣ ಹಾಗೂ 5 ಸಾವಿರ ರೂ. ನಗದು ಕಳವು ಮಾಡಿದ ಘಟನೆ ಅ. 29ರಂದು ನಡೆದಿದೆ.

Advertisement

ಬಿ.ಸಿ. ರೋಡು ನಿವಾಸಿ ವೀಕ್ಷಿತ್‌ ಅವರು ಅ. 29ರ ಬೆಳಗ್ಗೆ ಮನೆಗೆ ಬೀಗ ಹಾಕಿ ಅದರ ಕೀಯನ್ನು ಬಾಗಿಲ ಸಮೀಪ ಇಟ್ಟು ಕೆಲಸಕ್ಕೆ ಹೋಗಿದ್ದರು. ಸಂಜೆ ಕೆಲಸ ಮುಗಿಸಿ ಮನೆಗೆ ಬಂದಾಗ ಬೀಗ ತೆರೆದಿದ್ದು, ಒಳಗೆ ಹೋಗಿ ನೋಡಿದಾಗ ಕಪಾಟಿನ ಬಾಗಿಲು ತೆರೆದಿತ್ತು. ಬಳಿಕ ಪರಿಶೀಲಿಸಿದಾಗ ಚಿನ್ನಾಭರಣ ಹಾಗೂ ನಗದು ಕಳವಾಗಿರುವುದು ಬೆಳಕಿಗೆ ಬಂದಿದೆ.

ಬಂಟ್ವಾಳ ನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

Advertisement

Udayavani is now on Telegram. Click here to join our channel and stay updated with the latest news.

Next