Advertisement

Bantwal ಬಾಲಕಿಗೆ ಕಿರುಕುಳ: ಪೋಕ್ಸೋ ಕೇಸು ದಾಖಲು

12:45 AM Aug 02, 2024 | Team Udayavani |

ಬಂಟ್ವಾಳ: ಅಪ್ರಾಪ್ತ ವಯಸ್ಕ ಬಾಲಕಿಯೋರ್ವಳನ್ನು ಪುಸಲಾಯಿಸಿ ಭಿನ್ನ ಕೋಮಿನ ಯುವಕರು ಪಾರ್ಕ್‌ವೊಂದಕ್ಕೆ ಕರೆದೊಯ್ದು ಲೈಂಗಿಕ ಕಿರುಕುಳ ನೀಡಿದ ಘಟನೆ ನಡೆದಿದ್ದು, ಘಟನೆಗೆ ಸಂಬಂಧಿಸಿ ಪೊಲೀಸರು ಪೋಕ್ಸೋ ಪ್ರಕರಣ ದಾಖಲಿಸಿ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.

Advertisement

ಫೈಜಲ್‌ ಹಾಗೂ ಲಿಕೇಶ್‌ ಬಂಧಿತ ಆರೋಪಿಗಳಾಗಿದ್ದು, ಅಫೀಕ್‌ ತಲೆಮರೆಸಿಕೊಂಡಿದ್ದಾನೆ. ಬಂಧಿತರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ.

ಬಾಲಕಿಯನ್ನು ಪಾರ್ಕಿಗೆ ಬರುವಂತೆ ಪುಸಲಾಯಿಸಿ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂಬ ದೂರಿನ ಆಧಾರದಲ್ಲಿ ಬಂಟ್ವಾಳ ಗ್ರಾಮಾಂತರ ಪೊಲೀಸರು ಪೋಕ್ಸೋ ಪ್ರಕರಣ ದಾಖಲಿಸಿಕೊಂಡಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next