Advertisement
ಮೇ 10ರಂದು ಬಿ.ಸಿ.ರೋಡಿನಲ್ಲಿ ಹೆದ್ದಾರಿ ಬದಿ ಕೇರಳ ನೋಂದಣಿಯ ಕಾರು ಅನುಮಾನಾಸ್ಪದ ರೀತಿಯಲ್ಲಿ ನಿಂತಿದ್ದು, ಬಂಟ್ವಾಳ ನಗರ ಠಾಣಾ ಪಿಎಸ್‌ಐ ರಾಮಕೃಷ್ಣ ಹಾಗೂ ಸಿಬಂದಿ ಕಾರಿನ ಬಳಿ ತೆರಳಿದಾಗ ಕಾರಿನಲ್ಲಿದ್ದ ಇಬ್ಬರು ಪರಾರಿಯಾಗಲು ಯತ್ನಿಸಿದ್ದರು. ಈ ವೇಳೆ ಓರ್ವನನ್ನು ಬಂಧಿಸಲಾಗಿತ್ತು. ಬಳಿಕ ಕಾರಿನಲ್ಲಿದ್ದ ಓರ್ವ ಮಹಿಳೆಯನ್ನೂ ಬಂಧಿಸಲಾಯಿತು.
Related Articles
Advertisement
ಬಳಿಕ ಅವರಿಂದ ಬಾಕಿ ಮೊತ್ತವನ್ನು ಪಡೆದು ಅಲ್ಲಿಂದ ಪರಾರಿಯಾಗುತ್ತಿದ್ದರು. ಹೀಗೆ ಹಲವು ಭಾಗಕ್ಕೆ ತೆರಳಿ ತಮ್ಮಲ್ಲಿರುವ ಖೋಟಾ ನೋಟುಗಳನ್ನು ಖಾಲಿ ಮಾಡಿ ಹಿಂದಿರುವ ಯೋಜನೆ ಅವರದ್ದಾಗಿತ್ತು. ಪ್ರಸ್ತುತ ಬಂಟ್ವಾಳ ನಗರ ಪೊಲೀಸರು ಅವರ ಖೋಟಾ ನೋಟು ದಂಧೆಯನ್ನು ಭೇದಿಸಿದ್ದು, ಪ್ರಕರಣದ ಮುಂದಿನ ತನಿಖೆ ನಡೆಸುತ್ತಿದ್ದಾರೆ.
ದ.ಕ.ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಬಿ.ರಿಷ್ಯಂತ್, ಅಡಿಷನಲ್ ಎಸ್ಪಿಗಳಾದ ಜಗದೀಶ್, ರಾಜೇಂದ್ರ ಕೆ.ವಿ., ಬಂಟ್ವಾಳ ಡಿವೈಎಸ್ಪಿ ವಿಜಯಪ್ರಸಾದ್ ಮಾರ್ಗದರ್ಶನದಲ್ಲಿ ಬಂಟ್ವಾಳ ನಗರ ಪೊಲೀಸ್ ಇನ್‌ಸ್ಪೆಕ್ಟರ್‌ಅನಂತಪದ್ಮನಾಭ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಲಾಗಿತ್ತು. ಖೋಟಾ ನೋಟು ದಂಧೆಯ ತಂಡವನ್ನು ಭೇದಿಸಿದ ಪೊಲೀಸ್ ತಂಡಕ್ಕೆ ಎಸ್ಪಿಯವರು ನಗದು ಬಹುಮಾನ ಘೋಷಿಸಿದ್ದಾರೆ.