Advertisement
ಘಟನೆಯಲ್ಲಿ ವಿಟ್ಲ ಕಸ್ಬಾ ನಿವಾಸಿಗಳಾದ ಸವಾರ ಗಂಗಾಧರ ಹಾಗೂ ಸಹಸವಾರೆ ರೇಷ್ಮಾ ಗಾಯಗೊಂಡಿದ್ದು, ಮಂಗಳೂರು ಆಸ್ಪತ್ರೆಗೆ ದಾಖಲಿಸಲ್ಪಟ್ಟಿದ್ದಾರೆ. ಟ್ಯಾಂಕರನ್ನು ಅದರ ಚಾಲಕ ಅಜಾಗರೂಕತೆಯಿಂದ ಚಲಾಯಿಸಿ ಬೈಕಿಗೆ ಢಿಕ್ಕಿ ಹೊಡೆದಿದ್ದಾನೆ ಎಂದು ದೂರಿನಲ್ಲಿ ಆರೋಪಿಸಿದ್ದಾರೆ. ಬಂಟ್ವಾಳ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬಂಟ್ವಾಳ: ಬಂಟ್ವಾಳ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ 28 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ವಶಪಡಿಸಿಕೊಂಡಿದ್ದಾರೆ. ಪ್ರಕರಣದಲ್ಲಿ ಪದ್ಮನಾಭ ಬಂಧಿತ ಆರೋಪಿಯಾಗಿದ್ದು, ಆತನ ವಿರುದ್ಧ ಐಪಿಸಿ ಸೆಕ್ಷನ್ 324, 355 ಜತೆಗೆ 35 ಸೇರಿದಂತೆ ಹಲವು ಪ್ರಕರಣ ದಾಖಲಾಗಿತ್ತು. ಬಂಧಿತ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.
Related Articles
ಬಂಟ್ವಾಳ: ತಾಲೂಕಿನ ಅಲ್ಲಿಪಾದೆಯ ಕಟ್ಟಿಗೆ ಡಿಪೋವೊಂದರಲ್ಲಿ ಮರ ಅಕ್ರಮ ದಾಸ್ತಾನಿಗೆ ಸಂಬಂಧಿಸಿದಂತೆ ಬಂಟ್ವಾಳ ಅರಣ್ಯ ಇಲಾಖೆಯಲ್ಲಿ ಪ್ರಕರಣ ದಾಖಲಾಗಿದೆ.
Advertisement
ಮರದ ವ್ಯಾಪಾರಿ ವಿಜಯಕುಮಾರ್ ಅಲ್ಲಿಪಾದೆಗೆ ಸೇರಿದ ಡಿಪೋದಲ್ಲಿ ಅಕ್ರಮ ದಾಸ್ತಾನು ಕಂಡುಬಂದಿದ್ದು, ಬಂಟ್ವಾಳ ಅರಣ್ಯ ಇಲಾಖೆಯ ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ ಎಂದು ಅರಣ್ಯಾಧಿಕಾರಿಗಳು ತಿಳಿಸಿದ್ದಾರೆ.