Advertisement

ಬಂಟ್ವಾಳ : ಹಿಂಸಾತ್ಮಕ ರೀತಿಯಲ್ಲಿ ಅಕ್ರಮ ದನ ಸಾಗಾಟ ಪತ್ತೆ

02:37 PM Jan 22, 2022 | Team Udayavani |

ಬಂಟ್ವಾಳ : ತಾಲೂಕಿನ ಇರಾ ಗ್ರಾಮದಲ್ಲಿ ಹಿಂಸಾತ್ಮಕ ರೀತಿಯಲ್ಲಿ ಅಕ್ರಮವಾಗಿ ದನ ಸಾಗಾಟ ಮಾಡುತ್ತಿದ್ದ ಪಿಕಪ್ ವಾಹನ ಸಹಿತ ದನ ವನ್ನು ವಶಕ್ಕೆ ಪಡೆದುಕೊಂಡ ಘಟನೆ ಶನಿವಾರ ನಡೆದಿದೆ.

Advertisement

ಗ್ರಾಮಾಂತರ ಎಸ್ ಐ ಹರೀಶ್ ನೇತ್ರತ್ವದ ತಂಡ ಕಾರ್ಯಾಚರಣೆ ನಡೆಸಿ, ಇರಾ ಶಾಲಾ ಮೈದಾನದಲ್ಲಿ ವಾಹನ ಸಹಿತ ದನ ವನ್ನು ವಶಕ್ಕೆ ಪಡೆಡಿದ್ದಾರೆ.

ಖಚಿತ ಮಾಹಿತಿ ಮೇಲೆ ದಾಳಿ ನಡೆಸಿದಾಗ ಆರೋಪಿಗಳು ವಾಹನ ಬಿಟ್ಟು ಪರಾರಿಯಾಗಿದ್ದಾರೆ. ಪಿಕಪ್ ವಾಹನದಲ್ಲಿ ದನವೊಂದನ್ನು ಹಿಂಸಾತ್ಮಕ ರೀತಿಯಲ್ಲಿ ಕೈ ಕಾಲು ಕಟ್ಟಿ ಹಾಕಲಾಗಿತ್ತು. ದನವನ್ನು ಮಾಂಸಕ್ಕಾಗಿ ಸಾಗಾಟ ಮಾಡುತ್ತಿದ್ದಾರೆ ಎಂಬ ಮಾಹಿತಿ ಸ್ಥಳೀಯರದಾಗಿತ್ತು.

Advertisement

Udayavani is now on Telegram. Click here to join our channel and stay updated with the latest news.

Next