ಬಂಟ್ವಾಳ: ಸಜೀಪ ಸಮೀಪದ ಕೋಟೆಕಣಿಯಲ್ಲಿ ಫ್ಲೈವುಡ್ ಫ್ಯಾಕ್ಟರಿಗೆ ಬೆಂಕಿ ತಗಲಿ ಲಕ್ಷಾಂತರ ರೂಪಾಯಿ ನಷ್ಟ ಸಂಭವಿಸಿದ ಘಟನೆ ಸೋಮವಾರ ನಡೆದಿದೆ.
ಘಟನ ಸ್ಥಳಕ್ಕೆ ಬಂಟ್ವಾಳ ಹಾಗೂ ಪಾಂಡೇಶ್ವರ ಅಗ್ನಿಶಾಮಕ ವಾಹನಗಳು ತೆರಳಿ ಸ್ಥಳೀಯರ ನೆರವಿನಿಂದ ಬೆಂಕಿ ನಂದಿಸುವ ಕಾರ್ಯನಿರ್ವಹಿಸಿದ್ದಾರೆ.
ಶಬೀರ್ ಅವರಿಗೆ ಸೇರಿದ ಫ್ಯಾಕ್ಟರಿಯಲ್ಲಿ ಬೆಂಕಿ ಕಾಣಿಸಿಕೊಂಡಿತ್ತು.
ಫ್ಲೈವುಡ್ ತಯಾರಿಗಾಗಿ ಮರದ ಅವಶೇಷಗಳನ್ನು ರಾಶಿ ಹಾಕಲಾಗಿದ್ದು, ಅಲ್ಲಿ ಹಾಕಿದ್ದ ಬೆಂಕಿ ಮರದ ರಾಶಿಗೆ ಹಬ್ಬಿದೆ. ಘಟನೆಯಿಂದ ಸುಮಾರು ಎರಡು ಲಕ್ಷ ರೂ. ನಷ್ಟ ಸಂಭವಿಸಿರಬಹುದೆಂದು ಅಂದಾಜಿಸಲಾಗಿದೆ.
ಪಾಂಡೇಶ್ವರ ಸಹಾಯಕ ಅಗ್ನಿಶಾಮಕ ಠಾಣಾಧಿಕಾರಿ ರಾಜ, ಬಂಟ್ವಾಳ ಅಗ್ನಿಶಾಮಕ ಠಾಣೆಯ ಸಿಬಂದಿ ಚಂದ್ರಕಾಂತ, ಪುರುಷೋತ್ತಮ, ರಾಜೇಶ್ ಶೆಟ್ಟಿ, ಕಿರಣ್ ಕುಮಾರ್, ರುಕ್ಕಯ್ಯ ಅಮೀನ್ , ಕೆ. ಸುರೇಂದ್ರ, ನಾಗರಾಜ್‌ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.