Advertisement

Bantwal ಹೊಟೇಲ್‌ ಕಾರ್ಮಿಕ ವಿಷ ಸೇವಿಸಿ ಆತ್ಮಹತ್ಯೆ

06:32 PM Dec 06, 2023 | Team Udayavani |

ಬಂಟ್ವಾಳ: ಬಂಟ್ವಾಳದ ಹೊಟೇಲೊಂದರಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕನೋರ್ವ ಡೆತ್‌ ನೋಟ್‌ ಬರೆದಿಟ್ಟು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಡಿ. 4ರ ತಡರಾತ್ರಿ ಬಂಟ್ವಾಳದ ಬಡ್ಡಕಟ್ಟೆಯಲ್ಲಿ ನಡೆದಿದೆ.

Advertisement

ಬೆಳ್ತಂಗಡಿ ತಾಲೂಕಿನ ಮರೋಡಿ ನಿವಾಸಿ ಸೋಮನಾಥ (55) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಇವರು ಕಳೆದ 5 ತಿಂಗಳಿನಿಂದ ಹೊಟೇಲ್‌ನಲ್ಲಿ ಅಡುಗೆ ಕೆಲಸ ಮಾಡಿಕೊಂಡಿದ್ದು, ಡಿ. 4ರ ರಾತ್ರಿ ಕೂಡ ಕೆಲಸ ಮುಗಿಸಿ ಮಲಗಿದ್ದರು.

ಮಂಗಳವಾರ ಬೆಳಗ್ಗೆ ಕಾರ್ಮಿಕ ಕೆಲಸಕ್ಕೆ ಬಾರದ ಹಿನ್ನೆಲೆಯಲ್ಲಿ ಮಲಗಿದ್ದ ಕೊಠಡಿಗೆ ಹೋಗಿ ನೋಡಿದಾಗ ಮಲಗಿದ್ದ ಬಳಿ ವಿಷದ ಬಾಟಲಿ ಪತ್ತೆಯಾಗಿದೆ. ಎಬ್ಬಿಸುವಾಗ ಆತ ಮೃತಪಟ್ಟಿರುವುದು ಬೆಳಕಿಗೆ ಬಂದಿದೆ.

ಅಲ್ಲೇ ಪಕ್ಕದಲ್ಲಿ ಚೀಟಿ ಪತ್ತೆಯಾಗಿದ್ದು, ಆದರೆ ಅದರಲ್ಲಿ ಬರಿದಿರುವ ವಿಚಾರ ತಿಳಿದುಬಂದಿಲ್ಲ. ಬಂಟ್ವಾಳ ನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next