Advertisement

ಬಂಟ್ವಾಳ: ಸ್ಟುಡಿಯೋಗೆ ನುಗ್ಗಿ ದುಷ್ಕರ್ಮಿಗಳಿಂದ ಹಲ್ಲೆ

08:57 PM Oct 28, 2020 | mahesh |

ಬಂಟ್ವಾಳ: ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಫರಂಗಿಪೇಟೆಯಲ್ಲಿ ದುಷ್ಕರ್ಮಿಗಳು ಸ್ಟುಡಿಯೋವೊಂದಕ್ಕೆ ನುಗ್ಗಿ ವ್ಯಕ್ತಿಯೋರ್ವರ ಮೇಲೆ ದಾಳಿ ನಡೆಸಿದ ಘಟನೆ ಬುಧವಾರ ಸಂಜೆ ನಡೆದಿದೆ.

Advertisement

ಪುದು ಗ್ರಾಮದ ಕೊಟ್ಟಿಂಜ ನಿವಾಸಿ ದಿನೇಶ್ ಶೆಟ್ಟಿ ದಾಳಿಗೊಳಗಾದವರು. ಅವರು ಸಂಜೆ ಸ್ಟುಡಿಯೋದಲ್ಲಿದ್ದ ವೇಳೆ ತಂಡವೊಂದು ಏಕಾಏಕಿ ನುಗ್ಗಿ ದಾಳಿ ನಡೆಸಿದೆ. ಘಟನೆಯಲ್ಲಿ ದಿನೇಶ್ ಅವರು ಗಂಭೀರ ಗಾಯಗೊಂಡಿದ್ದು, ಮಂಗಳೂರು ಆಸ್ಪತ್ರೆಗೆ ದಾಖಲಿಸಲ್ಪಟ್ಟಿದ್ದಾರೆ. ಘಟನಾ ಸ್ಥಳಕ್ಕೆ ಬಂಟ್ವಾಳ ಡಿವೈಎಸ್ಪಿ ವೆಲೆಂಟೈನ್ ಡಿಸೋಜ, ಸರ್ಕಲ್ ಇನ್ಸ್‌ಪೆಕ್ಟರ್ ಟಿ.ಡಿ.ನಾಗರಾಜ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next