Advertisement
ಘಟನೆಯ ಕುರಿತು ಕೆಎಫ್‌ಸಿಎಸ್‌ಸಿ ಯ ಮಂಗಳೂರು ಕಚೇರಿ ವ್ಯವಸ್ಥಾಪಕ ಶರತ್‌ಕುಮಾರ್ ಹಾಂಡಾ ನೀಡಿದ ದೂರಿನಂತೆ ಪ್ರಕರಣ ದಾಖಲಾಗಿದ್ದು, ಪೊಲೀಸರು ಕೂಡ ಸ್ಥಳದಲ್ಲೇ ಬೀಡು ಬಿಟ್ಟಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿ ಈಗಾಗಲೇ ಗೋದಾನಿನ ಮೇಲುಸ್ತುವಾರಿ ವಹಿಸಿಕೊಂಡಿರುವ ಕಿರಿಯ ಸಹಾಯಕ ವಿಜಯ್ ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದ್ದು, ಈ ಅವ್ಯವಹಾರದ ಹಿಂದೆ ಯಾರಿದ್ದಾರೆ ಎಂದು ತನಿಖೆ ನಡೆಸಲಾಗುತ್ತಿದೆ.
ಕೆಎಫ್‌ಸಿಎಸ್‌ಸಿಯ ಅಧಿಕಾರಿ ಪೊಲೀಸರಿಗೆ ನೀಡಿದ ದೂರಿನ ಪ್ರಕಾರ ಇದು ಒಂದು ತಿಂಗಳ ಅಂತರದಲ್ಲಿ ನಡೆದಿರುವ ಕೃತ್ಯವಾಗಿದ್ದು, ಬರೀ ಒಂದು ತಿಂಗಳಲ್ಲಿ ಕೇವಲ ನಿಗಮದ ಕಿರಿಯ ಸಹಾಯಕನಿಂದ ಇಷ್ಟೊಂದು ದೊಡ್ಡ ಪ್ರಮಾಣದ ಅವ್ಯವಹಾರ ಹೇಗೆ ಸಾಧ್ಯವಾಯಿತು, ಇದರ ಹಿಂದೆ ಯಾರಿದ್ದಾರೆ ಎಂಬ ಅನುಮಾನಗಳು ಹುಟ್ಟಿಕೊಂಡಿವೆ.
Related Articles
Advertisement
ಜತೆಗೆ ಈ ಕುರಿತು ಸಾರ್ವಜನಿಕರಿಂದ ದೂರುಗಳು ಕೇಳಿ ಬಂದ ಹಿನ್ನೆಲೆಯಲ್ಲಿ ಬಂಟ್ವಾಳ ಶಾಸಕ ರಾಜೇಶ್ ನಾೖಕ್ ಉಳಿಪ್ಪಾಡಿಗುತ್ತು ಅವರು ಕೂಡ ದ.ಕ.ಜಿಲ್ಲಾಧಿಕಾರಿಗಳಿಗೆ ದೂರು ನೀಡಿದ್ದು, ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಪ್ರಕರಣ ದಾಖಲಿಸುವಂತೆ ಆಗ್ರಹಿಸಿದ್ದರು. ದಾಸ್ತಾನು ಕಡಿಮೆ ಇರುವ ಕುರಿತು ಕಿರಿಯ ಸಹಾಯಕ ವಿಜಯ್‌ನನ್ನು ವಿಚಾರಿಸಿದಾಗ ಆತ ಸಮರ್ಪಕ ಉತ್ತರ ನೀಡಿಲ್ಲ ಎಂದು ದೂರಿನಲ್ಲಿ ವಿವರಿಸಲಾಗಿದೆ.
ಈ ವೇಳೆ ದ.ಕ.ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಬಿ.ರಿಷ್ಯಂತ್, ತಹಶೀಲ್ದಾರ್ ಎಸ್.ಬಿ.ಕೂಡಲಗಿ, ಉಪತಹಶೀಲ್ದಾರ್ ನವೀನ್ ಬೆಂಜನಪದವು, ಪಿಎಸ್‌ಐಗಳಾದ ರಾಮಕೃಷ್ಣ, ಕಲೈಮಾರ್, ಕೆಎಫ್‌ಸಿಎಸ್‌ಸಿ ಅಧಿ ಕಾರಿಗಳು ಉಪಸ್ಥಿತರಿದ್ದರು.
ಕೆಎಫ್‌ಸಿಎಸ್‌ಸಿ ರಾಜ್ಯ ಅಧಿಕಾರಿಗಳಿಂದ ತನಿಖೆ: ಡಿಸಿಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ದ.ಕ.ಜಿಲ್ಲಾಧಿಕಾರಿ ಮುಲ್ಲೆ$ç ಮುಗಿಲನ್ ಅವರು ಮಾತನಾಡಿ, ಅಕ್ಕಿ ವಿತರಣೆ ವಿಳಂಬವು ಗಮನಕ್ಕೆ ಬಂದಾಗ ಪರಿಶೀಲನೆ ನಡೆಸಿದ್ದು, ಅಕ್ಕಿಯ ಸಂಗ್ರಹದಲ್ಲಿ ಕೊರತೆ ಕಂಡುಬಂದಿದೆ. ಹೀಗಾಗಿ ಕೆಎಫ್‌ಸಿಎಸ್‌ಸಿಯ ಜಿಲ್ಲಾ ವ್ಯವಸ್ಥಾಪಕರು ಹಿರಿಯ ಅಧಿಕಾರಿಗಳ ಗಮನಕ್ಕೆ ತಂದು ಪೊಲೀಸರಿಗೆ ದೂರು ನೀಡಿ ಪ್ರಕರಣವನ್ನು ದಾಖಲಿಸಲಾಗಿದೆ. ಅಕ್ಕಿಯ ಕೊರತೆ ಪ್ರಮಾಣವು ದೊಡ್ಡ ಮಟ್ಟದಲ್ಲಿರುವುದರಿಂದ ಖುದ್ದು ತಾನು ಹಾಗೂ ಎಸ್‌ಪಿಯವರು ಸ್ಥಳಕ್ಕೆ ಬಂದು ಪರಿಶೀಲಿಸಿ ಮಾಹಿತಿ ಪಡೆದುಕೊಂಡಿದ್ದೇವೆ. ಯಾವ ಕಾರಣದಿಂದ ಹೀಗಾಗಿದೆ ಎಂಬುದನ್ನು ತಿಳಿಯುವುದಕ್ಕೆ ಕೆಎಫ್‌ಸಿಎಸ್‌ಸಿಯ ರಾಜ್ಯಮಟ್ಟದ ಅಧಿಕಾರಿಗಳೇ ಸ್ಥಳಕ್ಕೆ ಆಗಮಿಸಿ ತನಿಖೆ ನಡೆಸಲಿದ್ದಾರೆ ಎಂದರು.