Advertisement

Bantwal; ಬಾಲ್ಯವಿವಾಹ ಮಾಡಲು ತಯಾರಿಯಲ್ಲಿದ್ದ ವೇಳೆ ಅಧಿಕಾರಿಗಳ ದಾಳಿ

08:48 PM Sep 24, 2023 | Team Udayavani |

ಬಂಟ್ವಾಳ: ಅಪ್ರಾಪ್ತ ಬಾಲಕಿಗೆ ಬಾಲ್ಯವಿವಾಹ ಮಾಡಲು ತಯಾರಿಯಲ್ಲಿದ್ದ ಮನೆಗೆ ಸರಿಯಾದ ಸಮಯದಲ್ಲಿ ಅಧಿಕಾರಿಗಳು ದಾಳಿ ನಡೆಸಿ ಮುಚ್ಚಳಿಕೆ ಬರೆಸಿಕೊಂಡು ಮದುವೆ ನಿಲ್ಲಿಸಿದ ಘಟನೆ ಬೆಳಕಿಗೆ ಬಂದಿದೆ.

Advertisement

ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಉಳ್ಳಾಲ ತಾಲೂಕಿನ ಇರಾ ಎಂಬಲ್ಲಿ ನಡೆದಿದೆ. ವಿಟ್ಲ ಸಿ.ಡಿ.ಪಿ.ಒ.ಇಲಾಖೆಯ ವ್ಯಾಪ್ತಿಗೊಳಪಟ್ಟ ಇರಾ ನಿವಾಸಿ 17 ವರ್ಷದ ಅಪ್ರಾಪ್ತ ಬಾಲಕಿಯನ್ನು ಉಳ್ಳಾಲ ತಾಲೂಕಿನ ಸಜೀಪ ನಡು ಗ್ರಾಮದ ಯುವಕನೋರ್ವನಿಗೆ ಮದುವೆ ನಡೆಸುವ ಉದ್ದೇಶದಿಂದ ನಿಶ್ಚಿತಾರ್ಥ ನಡೆದು, ಈ ದಿನ ಮದುವೆಗಾಗಿ ಹಾಲ್ ಕೂಡ ನಿಗದಿಯಾಗಿತ್ತು.

ಮಿತ್ತಕೋಡಿ ರಾಯಲ್ ಗಾರ್ಡ್ ನಲ್ಲಿ ಇಂದು ಮದುವೆಗಾಗಿ ಎಲ್ಲಾ ತಯಾರಿಗಳು ನಡೆದಿತ್ತು. ಬಾಲಕಿಯ ಮನೆಯಲ್ಲಿ ನಿನ್ನೆ ದಿನ ಮದರಂಗಿ ಕಾರ್ಯಗಳು ನಡೆಯುತ್ತಿದ್ದ ವೇಳೆ ಇಲಾಖೆಗೆ ಮಾಹಿತಿ ಬಂದಿದ್ದು, ಕೂಡಲೇ ಸಿ.ಡಿ.ಪಿ.ಒ.ಇಲಾಖೆಯ ಹಿರಿಯ ಮೇಲ್ವಿಚಾರಕಿ, ಗ್ರಾ.ಪಂಪಿ.ಡಿ.ಒ. ತಾ.ಪ.ಇಒ, ಕಂದಾಯ ನಿರೀಕ್ಷಕ, ಮಕ್ಕಳ ರಕ್ಷಣಾ ಘಟಕದ ಅಧಿಕಾರಿಗಳು, ಬಂಟ್ವಾಳ ಗ್ರಾಮಾಂತರ ಪೋಲೀಸರು ಮನೆಗೆ ದಾಳಿ ನಡೆಸಿದ್ದಾರೆ.
ಅಪ್ರಾಪ್ತ ಬಾಲಕಿ ಎಂಬುದರ ಸಂಪೂರ್ಣ ದಾಖಲೆಗಳ ಮೂಲಕ ಮನೆಗೆ ಹೋಗಿರುವ ಅಧಿಕಾರಿಗಳು ಮನೆಯವರಿಗೆ ಕಾನೂನಾತ್ಮಕ ವಿಚಾರಗಳನ್ನು ತಿಳಿಸಿದ್ದಾರೆ. ಬಳಿಕ ಮದುವೆ ನಿಲ್ಲಿಸಲು ನಿರ್ಧರಿಸಿದ ಮನೆಯವರಿಂದ ಮುಚ್ಚಳಿಕೆ ಬರೆಸಿಕೊಂಡಿದ್ದಾರೆ.

ಅ ಬಳಿಕ ಮದುವೆ ನಿಗದಿಯಾಗಿದ್ದ ವರನ‌ಕಡೆಯವರಿಗೆ ಮತ್ತು ಮದುವೆ ಹಾಲ್ ನ‌ ಮಾಲಕರಿಗೆ ಸರಿಯಾದ ಮಾಹಿತಿಯನ್ನು ಅಧಿಕಾರಿಗಳು ನೀಡಿದ್ದಾರೆ. ಬಾಲಕಿಗೆ 18 ವರ್ಷ ತುಂಬದ ಕಾರಣ ಇದು ಬಾಲ್ಯವಿವಾಹವಾಗುತ್ತದೆ.ಹಾಗಾಗಿ ಕಾನೂನಿನಡಿಯಲ್ಲಿ ಬರುವ ವಿಚಾರಗಳನ್ನು ತಿಳಿಸಿ ಮದುವೆ ನಿಲ್ಲಿಸಲು ತಿಳಿಸಿದ್ದಾರೆ.

ತಾಲೂಕಿನಲ್ಲಿ ಅಪ್ರಾಪ್ತ ಬಾಲಕಿಯರ ಬಾಲ್ಯವಿವಾಹಕ್ಕೆ ತಯಾರಾಗುವ ಅನೇಕ ಘಟನೆಗಳು ಬೆಳಕಿಗೆ ಬಂದಿವೆ. ಅಧಿಕಾರಿಗಳ ಕಾರ್ಯ ಪ್ರವೃತ್ತಿಯ ಕಾರಣ ಬೆಳಕಿಗೆ ಬಂದ ಪ್ರಕರಣಗಳನ್ನು ನಿಲ್ಲಿಸಲಾಗಿದೆ.

Advertisement

ಆದರೆ ಮತ್ತೆ ಮತ್ತೆ ಇಂತಹ ಘಟನೆಗಳು ಮರುಕಳಿಸುವ ಸಂಗತಿಗಳು ನಡೆಯುತ್ತಿದ್ದು ಆತಂಕಕ್ಕೆ ಕಾರಣವಾಗಿದೆ. ಮುಂದಿನ ದಿನಗಳಲ್ಲಿ ಅಧಿಕಾರಿಗಳು ಇಂತಹ ಘಟನೆಗಳು ನಡೆಯದಂತೆ ಮುಂಜಾಗ್ರತಾ ಕ್ರಮವನ್ನು ತೆಗೆದುಕೊಳ್ಳಬೇಕು ಮತ್ತು ಇಲಾಖೆಯ ಮುಖಾಂತರ ಸರಿಯಾದ ಮಾಹಿತಿ ನೀಡುವ ಕೆಲಸ ಆಗಬೇಕಾಗಿದೆ ಎಂಬುದು ಸಾರ್ವಜನಿಕ ಆಗ್ರಹವಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next