ಬಂಟ್ವಾಳ: ಸರಕಾರಿ ಶಾಲೆಗಳ ಅಭಿವೃದ್ಧಿಗೆ ಆ ಶಾಲೆಯ ಹಳೆ ವಿದ್ಯಾರ್ಥಿಗಳ ಸಹಕಾರ ಅಗತ್ಯ. ಹಳೆ ವಿದ್ಯಾರ್ಥಿಗಳು ತಾವು ಕಲಿತ ಸರಕಾರಿ ಶಾಲೆಯನ್ನು ನೆನಪು ಮಾಡಿ ಅದರ ಅಭಿವೃದ್ಧಿಗೆ ಸಹಕಾರ ನೀಡಬೇಕು. ನಮ್ಮ ಹೆತ್ತವರನ್ನು, ಗುರು- ಹಿರಿಯರನ್ನು ಸ್ಮರಿಸಿ ಅವರ ನೆರವಿಗೆ ಧಾವಿಸು ವಂತೆ ನಮ್ಮ ಶಾಲೆಯ ಬಗ್ಗೆಯೂ ಕಳಕಳಿ ಹೊಂದಿರಬೇಕು ಎಂದು ಶಾಸಕ ರಾಜೇಶ್ ನಾೖಕ್ ಉಳಿಪ್ಪಾಡಿಗುತ್ತು ಹೇಳಿದರು.
ಜ. 29ರಂದು ಬಿ.ಸಿ. ರೋಡ್‌ನ ಹೊಟೇಲ್ ರಂಗೋಲಿಯಲ್ಲಿ ಹಳೆ ವಿದ್ಯಾರ್ಥಿಗಳ ಪದಾಧಿಕಾರಿಗಳ ಕಾರ್ಯಾಗಾರ ಉದ್ಘಾಟಿಸಿ, ಸಭಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ನಾ ಕಲಿತ ಶಾಲೆಯ ತೀರಿಸುವೆ ಋಣವ – ಇದು ನನ್ನ ಜವಾಬ್ದಾರಿ ಎಂಬ ವಿನೂತನ ಕಾರ್ಯಕ್ರಮವನ್ನು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣ ಆಯೋಗ, ದ.ಕ. ಜಿಲ್ಲಾಡಳಿತ, ಜಿ.ಪಂ. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮತ್ತು ಸಾರ್ವಜನಿಕ ಶಿಕ್ಷಣ ಇಲಾಖೆ ಆಶ್ರಯದಲ್ಲಿ ಹಮ್ಮಿಕೊಂಡಿತ್ತು.
ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಶಿವರಾಮಯ್ಯ ಮಾತ ನಾಡಿ, ಹಳೆ ವಿದ್ಯಾರ್ಥಿಗಳು ಸ್ವಯಂಪ್ರೇರಿತ ರಾಗಿ ಕಲಿತ ಶಾಲೆಯ ಅಭಿವೃದ್ಧಿಗೆ ಸಹಕಾರ ನೀಡಬೇಕು. ಸರಕಾರದಿಂದ ಸಿಗುವ ಅನೇಕ ಅನುದಾನವನ್ನು ಹಳೆ ವಿದ್ಯಾರ್ಥಿಗಳ ಸಹಕಾರದೊಂದಿಗೆ ಮಾಡಿ ದರೆ ಆಗ ಶಾಲಾ ಅಭಿವೃದ್ಧಿ ಹಾಗೂ ಶಾಲೆಯು ಉತ್ತಮ ರೀತಿಯಲ್ಲಿರಲು ಸಾಧ್ಯ ಎಂದು ತಿಳಿಸಿದರು.
ತಾ.ಪಂ. ಅಧ್ಯಕ್ಷ ಚಂದ್ರಹಾಸ ಕರ್ಕೇರ, ಉಪಾಧ್ಯಕ್ಷ ಅಬ್ಟಾಸ್ ಅಲಿ, ಬಂಟ್ವಾಳ ಸಾಮಾಜಿಕ ಸ್ಥಾಯೀ ಸಮಿತಿ ಅಧ್ಯಕ್ಷೆ ಧನಲಕ್ಷ್ಮೀ ಸಿ. ಬಂಗೇರ, ಬಂಟ್ವಾಳ ಕ್ಷೇತ್ರ ಸಂಪನ್ಮೂಲ ಅಧಿಕಾರಿ ರಾಧಾಕೃಷ್ಣ ಭಟ್, ಮೂಡುಬಿದಿರೆ ಕ್ಷೇತ್ರ ಶಿಕ್ಷಣಾಧಿಕಾರಿ ಆಶಾ, ತರಬೇತುದಾರ ಉಮೇಶ್ ನಿರ್ಮಲ್ ಉಪಸ್ಥಿತರಿದ್ದರು.
ಬಂಟ್ವಾಳ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಉಸ್ಮಾನ್ ಸ್ವಾಗತಿಸಿ, ಬಂಟ್ವಾಳ ಕ್ಷೇತ್ರ ಶಿಕ್ಷಣಾಧಿಕಾರಿ ಶಿವಪ್ರಕಾಶ್ ವಂದಿಸಿದರು. ಬಂಟ್ವಾಳ ಶಿಕ್ಷಣ ಇಲಾಖೆಯ ಸುಶೀಲಾ ಕಾರ್ಯಕ್ರಮ ನಿರೂಪಿಸಿದರು.
ಬೆನ್ನೆಲುಬು
ಶಾಲೆಗೆ ಶಾಸಕರಿಗಿಂತ ಅಲ್ಲಿಯ ಹಳೆ ವಿದ್ಯಾರ್ಥಿಗಳು ಹಾಗೂ ಆ ಊರಿನ ಗ್ರಾಮಸ್ಥರು ಬೆನ್ನೆಲುಬು. ಸರಕಾರಿ ಶಾಲೆಯಲ್ಲಿ ಶಿಕ್ಷಣದ ಗುಣಮಟ್ಟ ಖಾಸಗಿ ಶಾಲೆಯನ್ನು ಮೀರಿಸುವಂತಿರುತ್ತದೆ. ಶಿಕ್ಷಕರು ಮಕ್ಕಳಿಗೆ ಆತ್ಮವಿಶ್ವಾಸ ಹೆಚ್ಚು ಮಾಡಬೇಕು. ಇಂತಹ ಕಾರ್ಯಕ್ರಮಗಳು ಪ್ರತಿ ಶಾಲೆಯಲ್ಲಿ ನಡೆಯಬೇಕು.
–
ರಾಜೇಶ್ ನಾೖಕ್
ಶಾಸಕರು