Advertisement

ಬಂಟ್ವಾಳ: 12 ಪ್ರಕರಣ ಭೇದಿಸಿದ ಪೊಲೀಸರು; ವಾರಸುದಾರರಿಗೆ ಹಸ್ತಾಂತರ

06:18 PM Nov 22, 2021 | Team Udayavani |

ಬಂಟ್ವಾಳ: ಬಂಟ್ವಾಳ ನಗರ ಠಾಣಾ ಪೋಲೀಸ್ ಠಾಣೆಯ ಪೋಲೀಸ್ ಇನ್ಸ್ ಪೆಕ್ಟರ್ ಹಾಗೂ ಎಸ್.ಐ.ನೇತ್ರತ್ವದಲ್ಲಿ ಈ ವರ್ಷದಲ್ಲಿ ಒಟ್ಟು 12  ಪ್ರಕರಣಗಳನ್ನು ಭೇದಿಸಿ ಲಕ್ಷಾಂತರ ರೂ ಮೌಲ್ಯದ ಸೊತ್ತುಗಳನ್ನು ಸ್ವಾಧೀನಪಡಿಸಿಕೊಳ್ಳಲಾಗಿದೆ.

Advertisement

2021 ರಲ್ಲಿ ಬಂಟ್ವಾಳ ನಗರ ಠಾಣಾ ವ್ಯಾಪ್ತಿಯಲ್ಲಿ ನಡೆದ ಕಳ್ಳತನ, ಸುಲಿಗೆ, ವಂಚನೆ ಸೇರಿದಂತೆ ಒಟ್ಟು 12 ಪ್ರಕರಣಗಳನ್ನು ಬೇಧಿಸಿ ಒಟ್ಟು 17 ಲಕ್ಷದ 33 ಸಾವಿರ ರೂ ಮೌಲ್ಯದ ಸೊತ್ತುಗಳನ್ನು ಸ್ವಾಧೀನಪಡಿಸಿಕೊಂಡಿದ್ದಾರೆ.

ವಿವಿಧ ಪ್ರಕರಣಗಳಲ್ಲಿ ಸೊತ್ತುಗಳನ್ನು ಸ್ವಾಧೀನಪಡಿಸಿಕೊಂಡಿರುವ ಪೋಲೀಸರು ನ್ಯಾಯಾಲಯದ ಅನುಮತಿ ಪಡೆದುಕೊಂಡು ನ.22 ರಂದು ಸಹಾಯಕ ಪೋಲೀಸ್ ಅಧೀಕ್ಷಕ ಶಿವಾಂಷು ರಜಪೂತ್ ಅವರು ವಾರಸುದಾರರಿಗೆ ಹಸ್ತಾಂತರ ಮಾಡಿದರು.

11,34,000 ರೂ ಮೌಲ್ಯದ 252.390 ಗ್ರಾಂ.ತೂಕದ ಚಿನ್ನಾಭರಣಗಳು, 5,49,000 ಮೌಲ್ಯದ ಬೋಲೇರೊ ಜೀಪ್, ಒಂದು ಆಲ್ಟೋ ಕಾರು, ಒಂದು ಮೋಟಾರ್ ಸೈಕಲ್, ರೂ.50000 ಮೌಲ್ಯದ ಲ್ಯಾಪ್ ಟಾಪ್ ಗಳನ್ನು ಸ್ವಾಧೀನಪಡಿಸಿಕೊಂಡು ಪ್ರಕರಣಗಳನ್ನು ಭೇಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದರು.

ಇದನ್ನೂ ಓದಿ:ಕೊಟ್ಟಿಗೆಹಾರದಲ್ಲಿ ತೇಜಸ್ವಿ ಓದು ಕಾರ್ಯಕ್ರಮ

Advertisement

ಜಿಲ್ಲಾ ಪೋಲೀಸ್ ವರಿಷ್ಠಾಧಿಕಾರಿ ಋಷಿಕೇಷ್ ಭಗವಾನ್ ಸೋನಾವಣೆ ಅವರ ನಿರ್ದೇಶನದಂತೆ, ಹೆಚ್ಚುವರಿ ಪೋಲೀಸ್ ಅಧೀಕ್ಷಕರಾದ ಡಾ. ಶಿವಕುಮಾರ್ ಗುಣಾರೆರವರ ಮಾರ್ಗದರ್ಶನ ದಲ್ಲಿ, ಬಂಟ್ವಾಳ ಎ.ಎಸ್.ಪಿ.ಶಿವಾಂಷು ರಜಪೂತ್ ಐ.ಪಿ.ಎಸ್.ನೇತ್ರತ್ವದಲ್ಲಿ ಬಂಟ್ವಾಳ ನಗರ ಠಾಣಾ ಪೋಲೀಸ್ ಇನ್ಸ್ ಪೆಕ್ಟರ್ ವಿವೇಕಾನಂದ ಹಾಗೂ ಬಂಟ್ವಾಳ ನಗರ ಠಾಣಾ ಎಸ್ ‌ಐ.ಅವಿನಾಶ್ ಮತ್ತು ಸಿಬ್ಬಂದಿಯವರು ಪಾಲ್ಗೊಂಡಿದ್ದರು.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next